ಹತ್ತು ವಾರಗಳ ಕಾಲ ಮಕ್ಕಳ ಸ್ನೇಹಿ ಗ್ರಾಮ ಪಂಚಾಯತಿ ಅಭಿಯಾನ: ಸಚಿವ ಪ್ರಿಯಾಂಕ್‌ ಖರ್ಗೆ

Date:

ನ.24ರಿಂದ 2026ರವರೆಗೆ 10 ವಾರಗಳ ಕಾಲ ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಮಕ್ಕಳ ಸ್ನೇಹಿ ಗ್ರಾಮ ಪಂಚಾಯತಿ ಅಭಿಯಾನ ಮತ್ತು ಒಂದು ದಿನ ಮಕ್ಕಳ ವಿಶೇಷ ಗ್ರಾಮ ಸಭೆಯನ್ನು ನಡೆಸಲು ಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಮಕ್ಕಳಿಗೆ ಅವಶ್ಯವಾದ ಸುಧಾರಣಾ ಕ್ರಮಗಳನ್ನು ಕೈಗೊಳ್ಳುವುದು ಸರ್ಕಾರದ ಎಲ್ಲ ಇಲಾಖೆಗಳು, ಜನಪ್ರತಿನಿಧಿಗಳು ಮತ್ತು ಸಮುದಾಯದ ಜವಾಬ್ದಾರಿಯಾಗಿದೆ, ಮಕ್ಕಳ ರಕ್ಷಣೆ ಹಾಗೂ ಸರ್ವಾಂಗೀಣ ಅಭಿವೃದ್ಧಿಗಾಗಿ ಸರ್ಕಾರಗಳು ರೂಪಿಸಿರುವ ಹಲವು ಯೋಜನೆಗಳ ಹಿನ್ನೆಲೆಯಲ್ಲಿ ಮಕ್ಕಳ ಹಕ್ಕುಗಳನ್ನು ರಕ್ಷಿಸುವುದು ಎಲ್ಲರ ಕರ್ತವ್ಯವೂ ಆಗಿರುತ್ತದೆ ಎಂದು ಸಚಿವರು ಮಾಧ್ಯಮ ಪ್ರಕಟಣೆಯಲ್ಲಿ ಹೇಳಿದ್ದಾರೆ.

ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿಗಳು ಹಾಗೂ ಮಕ್ಕಳಿಗೆ ಸಂಬಂಧಿಸಿದ ಸಮಗ್ರ ಅಭಿವೃದ್ಧಿಯ ಅಂಶಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ‘ಮಕ್ಕಳ ಸ್ನೇಹಿ ಮತ್ತು ಮಕ್ಕಳ ಸುರಕ್ಷಿತ’ ಪಂಚಾಯತಿಗಳನ್ನಾಗಿಸಲು ‘ಮಕ್ಕಳ ಸ್ನೇಹಿ ಗ್ರಾಮ ಪಂಚಾಯತಿ ಅಭಿಯಾನ’ವನ್ನು ಆಯೋಜಿಸಿ, ಈ ಅವಧಿಯಲ್ಲಿ ಒಂದು ದಿನ ಮಕ್ಕಳ ಗ್ರಾಮ ಸಭೆಯನ್ನು ನಡೆಸುವಂತೆ ಎಲ್ಲ ಗ್ರಾಮಪಂಚಾಯತಿಗಳಿಗೆ ತಿಳಿಸಲಾಗಿದೆ ಎಂದು ಹೇಳಿದ್ದಾರೆ. ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಮಕ್ಕಳ ಗ್ರಾಮ ಸಭೆ ನಡೆಸಲು ದಿನಾಂಕವನ್ನು ನಿಗದಿಗೊಳಿಸಲು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಕ್ಕಳ ಜನನ ನೋಂದಣಿ ಹಾಗೂ ಜನನ ಪ್ರಮಾಣ ಪತ್ರ ವಿತರಣೆ, ಪೌಷ್ಠಿಕ ಆಹಾರ ಕುರಿತು ಮಾರ್ಗದರ್ಶನ ಹಾಗೂ ಜಾಗೃತಿ, ಮಕ್ಕಳಿಗೆ ಚುಚ್ಚುಮದ್ದು ಕೊಡುವ ಪ್ರಾಮುಖ್ಯತೆ ಬಗ್ಗೆ ಮಕ್ಕಳ ಗ್ರಾಮಸಭೆ ಯಲ್ಲಿ ಆದ್ಯತೆ ನೀಡಬೇಕು, ಮಾನಸಿಕ ಆರೋಗ್ಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಹಾಗೂ ಶಾಲೆಯಿಂದ ಹೊರಗುಳಿದ 11ರಿಂದ 14 ವರ್ಷದ ಮಕ್ಕಳನ್ನುಪುನಃ ಶಾಲೆಗೆ ಸೇರಿಸಿಕೊಳ್ಳಲು ಹಾಗೂ 14ರಿಂದ 18 ವರ್ಷದೊಳಗಿನ ಶಾಲೆ ಬಿಟ್ಟ ಮಕ್ಕಳನ್ನು ಕೌಶಲ್ಯಾಭಿವೃದ್ಧಿ ತರಬೇತಿ ಸಂಸ್ಥೆಗಳಿಗೆ ಸೇರಿಸಲು ಕ್ರಮ ವಹಿಸಬೇಕೆಂದು ಸಚಿವರು ಗ್ರಾಮ ಪಂಚಾಯತಿಗಳಿಗೆ ತಿಳಿಸಿದ್ದಾರೆ. ಮಕ್ಕಳ ಹಕ್ಕುಗಳು, ಬಾಲ್ಯ ವಿವಾಹ ನಿಷೇಧ, ಕಿಶೋರಾವಸ್ಥೆಯಲ್ಲಿ ಉದ್ಯೋಗ ನಿಷೇಧದ ಬಗ್ಗೆ ಜಾಗೃತಿ ಮೂಡಿಸಬೇಕೆಂದು ಗ್ರಾಮ ಪಂಚಾಯಿತಿಗಳಿಗೆ ತಿಳಿಸಲಾಗಿದೆ ಎಂದು ಸಚಿವರು ವಿವರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...