ಜಾತಿರಹಿತ ಸಮಾಜದ ಕಲ್ಪನೆ ಇಂದಿಗೂ ಸಾಕಾರವಾಗಿಲ್ಲ: ಈಶ್ವರ ಖಂಡ್ರೆ

Date:

  • ಸಿಎಂ ಸಿದ್ದರಾಮಯ್ಯ ಅವರು ಬಸವತತ್ವದ ಅಪ್ಪಟ ಅನುಯಾಯಿ: ಈಶ್ವರ ಖಂಡ್ರೆ
  • ದುಡಿಮೆಗೆ ಬೆಲೆ, ಜಾತ್ಯತೀತ ಸಮ ಸಮಾಜದ ಕಲ್ಪನೆ ನೀಡಿದವರು ಬಸವಾದಿ ಪ್ರಮಥರು

ಜಾತಿರಹಿತ ಸಮಾಜದ ಕಲ್ಪನೆಯನ್ನು ವಿಶ್ವಗುರು ಬಸವಣ್ಣನವರು ಹೊಂದಿದ್ದರು. ಆದರೆ ಇಂದಿಗೂ ಈ ಆಶಯ ಸಾಕಾರವಾಗಿಲ್ಲ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದರು.

ಮೈಸೂರಿನ ಕಲಾ ಮಂದಿರದಲ್ಲಿ ಶನಿವಾರ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಬಸವಾದಿ ಪ್ರಮಥರು ಈ ಜಗತ್ತಿಗೆ ನೀಡಿರುವ ಕೊಡುಗೆ ಅನುಪಮವಾಗಿದೆ. ಕಾರ್ಲ್ ಮಾರ್ಕ್ಸ್‌ನ ದಾಸ್ ಕ್ಯಾಪಿಟಲ್ ಬರುವ ಮೊದಲೆ ದುಡಿಮೆಗೆ ಬೆಲೆ ನೀಡಿ, ಜಾತ್ಯತೀತ ಸಮ ಸಮಾಜದ ಕಲ್ಪನೆಯನ್ನು ನೀಡಿದವರು ಬಸವಾದಿ ಪ್ರಮಥರು” ಎಂದು ತಿಳಿಸಿದರು.

“ಕಾಯಕವೇ ಕೈಲಾಸ, ಇವ ನಮ್ಮವ ಎಂದು ಸಾರಿದ ಬಸವಣ್ಣನವರು ಜಗತ್ತಿಗೆ ಸಂಸತ್ತಿನ ಪರಿಕಲ್ಪನೆಯನ್ನು ಕಟ್ಟಿಕೊಟ್ಟ ಮೊದಲಿಗರು. ಅನುಭವ ಮಂಟಪ ಇದಕ್ಕೆ ಇಂದಿಗೂ ಸಾಕ್ಷಿಯಾಗಿದೆ. ಈ ಸಮಾಜಕ್ಕೆ ವೀರಶೈವ ಲಿಂಗಾಯತ ಮಠ ಮಾನ್ಯಗಳು ನೀಡಿರುವ ಕೊಡುಗೆ ಅಪಾರವಾದ್ದು, ಎಲ್ಲ ಜಾತಿ, ಜನಾಂಗ, ಧರ್ಮದವರಿಗೆ ಯಾವುದೇ ಭೇದವಿಲ್ಲದೆ, ಅನ್ನ, ಅಕ್ಷರ ಮತ್ತು ಜ್ಞಾನ ದಾಸೋಹ ಮಾಡುತ್ತಿರುವ ನಮ್ಮ ಮಠಗಳು ಜಗತ್ತಿಗೆ ಆದರ್ಶಪ್ರಾಯವಾಗಿವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ನವೆಂಬರ್‌ನಲ್ಲಿ ರಾಜ್ಯದ ಜಾತಿಗಣತಿ ವರದಿ ನನ್ನ ಕೈ ಸೇರಲಿದೆ: ಸಿಎಂ ಸಿದ್ದರಾಮಯ್ಯ

ಸಿದ್ದರಾಮಯ್ಯ ಬಸವತತ್ವದ ಅಪ್ಪಟ ಅನುಯಾಯಿ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಸವ, ಬುದ್ಧರ ವಿಚಾರಧಾರೆಗಳಿಂದ ಪ್ರಭಾವಿತರಾಗಿದ್ದಾರೆ. ಸಿದ್ದರಾಮಯ್ಯ ಬಸವತತ್ವದ ಅಪ್ಪಟ ಅನುಯಾಯಿ. ಸರ್ವರನ್ನೂ ಜತೆಯಾಗಿ ಕೊಂಡೊಯ್ಯುತ್ತಿದ್ದಾರೆ. ಬಡ ಜನರ ಕಲ್ಯಾಣಕ್ಕಾಗಿ ಹಲವು ಕಾರ್ಯಕ್ರಮ ರೂಪಿಸಿದ್ದಾರೆ. ಅನ್ನಭಾಗ್ಯ, ಕ್ಷೀರಭಾಗ್ಯ ನೀಡಿ ಯಶಸ್ವಿ 5 ವರ್ಷ ಅಧಿಕಾರ ನಡೆಸಿದ ಸಿದ್ದರಾಮಯ್ಯನವರು ಈಗ ಮತ್ತೆ ಮುಖ್ಯಮಂತ್ರಿಗಳಾಗಿ ಬಡವರ ಕಲ್ಯಾಣಕ್ಕಾಗಿ ಮತ್ತು ಮಹಿಳಾ ಸಬಲೀಕರಣಕ್ಕಾಗಿ ಶಕ್ತಿ ಮತ್ತು ಗೃಹಲಕ್ಷ್ಮಿ ಯೋಜನೆ ಜಾರಿಗೆ ತಂದಿದ್ದಾರೆ” ಎಂದು ಈಶ್ವರ ಖಂಡ್ರೆ ಮೆಚ್ಚುಗೆ ವ್ಯಕ್ತಪಡಿಸಿದರು.

“ಮಾತೆಯರು ತಮ್ಮ ಮಕ್ಕಳಿಗೆ ವಚನ ಸಾಹಿತ್ಯ ಬೋಧಿಸಿದರೆ, ಅವರು ಸಂಸ್ಕಾರವಂತರಾಗಿ ನಮ್ಮ ಸಂಸ್ಕೃತಿ ಉಳಿಯುತ್ತದೆ. ಇಂದು ಯುವಜನತೆ ಮಾದಕ ವಸ್ತುಗಳಿಗೆ ಮತ್ತು ಪಾಶ್ಚಾತ್ಯ ಸಂಸ್ಕೃತಿಯ ದಾಸರಾಗುತ್ತಿದ್ದು, ಮಕ್ಕಳಲ್ಲಿ ಸದ್ಗುಣ ಬೆಳೆಯಲು ಅವರಿಗೆ ಬಾಲ್ಯದಿಂದಲೇ ವಚನ ಸಾಹಿತ್ಯ ಕಲಿಸಬೇಕು” ಎಂದು ಸಲಹೆ ನೀಡಿದರು.

ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹದೇವಪ್ಪ, ಶಾಸಕರಾದ ತನ್ವೀರ್ ಸೇಠ್, ಶ್ರೀವತ್ಸ, ಗಣೇಶ್ ಪ್ರಸಾದ್ ಮತ್ತಿತರರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...