ವೀರೇಂದ್ರ ಹೆಗ್ಗಡೆಯವರ ಕಷ್ಟಕಾಲದಲ್ಲಿ ತೆಗೆದುಕೊಂಡ ನಿರ್ಧಾರಕ್ಕೆ ಜೈನ ಸಮುದಾಯದಿಂದ ಈಗ ಮೆಚ್ಚುಗೆ: ಡಿಕೆ

Date:

ವೀರೇಂದ್ರ ಹೆಗ್ಗಡೆ ಅವರ ಕಷ್ಟಕಾಲದಲ್ಲಿ ನಾನು ತೆಗೆದುಕೊಂಡ ಒಂದು ನಿರ್ಧಾರದಿಂದ ಇಡೀ ದೇಶದ ಜೈನ ಸಮುದಾಯದವರು ನೀವು ಒಳ್ಳೆ ಕೆಲಸ ಮಾಡಿದ್ದೀರಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಹೇಳಿದರು.

ಆಚಾರ್ಯರತ್ನ 108 ಬಾಹುಬಲಿ ಮುನಿಮಹಾರಾಜರ 94 ನೇ ಜನ್ಮಜಯಂತಿ ಮಹೋತ್ಸವದಲ್ಲಿ ಬುಧವಾರ ಭಾಗವಹಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಾತನಾಡಿದರು.

”ವೀರೇಂದ್ರ ಹೆಗಡೆ ಅವರ ಮೇಲೆ ಯಾವ ರೀತಿ ಷಡ್ಯಂತ್ರ ಆಯಿತು. ಆಗ ಅವರ ಕಷ್ಟಕಾಲದಲ್ಲಿ ನಾವು ತೆಗೆದುಕೊಂಡ ನಿರ್ಧಾರವನ್ನು ರಾಷ್ಟ್ರೀಯ, ರಾಜ್ಯ ಮಾಧ್ಯಮಗಳು ಹಾಗೂ ಅನೇಕ ನಾಯಕರುಗಳು ಪ್ರಶ್ನೆ ಮಾಡಿದರು. ನಾನು ಯಾವ ಒತ್ತಡಕ್ಕೂ ಮಣಿಯುವುದಿಲ್ಲ, ನನ್ನ ಅನುಭವ ಹಾಗೂ ಏನನ್ನು ತಿಳಿದಿದ್ದೇನೋ ಅದನ್ನು ಹೇಳಿದ್ದೇನೆ ಎಂದು ಹೇಳಿದ್ದೆ. ದೂರದಾರರೇ ಆರೋಪಿಗಳಾಗಿ ಉಲ್ಲೇಖಿಸಿರುವ ಚಾರ್ಜ್‌ ಶೀಟ್‌ ಬಗ್ಗೆ ಮಾಧ್ಯಮದವರು ಪ್ರಶ್ನಿಸಿದ್ದರು. ನಾನು ಏನು ಹೇಳಬೇಕೋ ಅದನ್ನು ನೀವೇ ವ್ಯಾಖ್ಯಾನ ಮಾಡಿ ಎಂದಷ್ಟೇ ಉತ್ತರಿಸಿದ್ದೇನೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

”ಶಾಂತಿ, ಸಹನೆ, ಅಹಿಂಸೆ, ತ್ಯಾಗದ ಸಂಕೇತವೇ ಜೈನ ಸಮುದಾಯ. ನಿಮಗೆ ಅಲ್ಪಸಂಖ್ಯಾತ ಸ್ಥಾನಮಾನ ನೀಡಿದ್ದೂ ಸಹ ಕಾಂಗ್ರೆಸ್‌ ಸರ್ಕಾರ. ಜೈನ ಸಮುದಾಯದ ಜೊತೆ ಯಾವಾಗಲೂ ಇದ್ದೇನೆ ಎಂದು ಹೇಳುತ್ತೇನೆ. ಜೈನರ ಪದ್ದತಿ, ಸಂಸ್ಕೃತಿಯನ್ನು ಉಳಿಸಿ, ಬೆಳೆಸಿಕೊಂಡು ಬರುತ್ತಿದ್ದೀರಿ. ಮಾನ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎನ್ನುವ ಮಾತಿನ ಮೇಲೆ ನಂಬಿಕೆ ಇಡೋಣ” ಎಂದು ಹೇಳಿದರು.

”ಧರ್ಮ ಯಾವುದಾದರೂ ತತ್ವವೊಂದೇ, ನಾಮ ನೂರಾದರೂ ದೈವವೊಂದೇ, ಪೂಜೆ ಯಾವುದಾದರೂ ಭಕ್ತಿ ಒಂದೇ, ಕರ್ಮ ಹಲವಾದರೂ ನಿಷ್ಠೆಯೊಂದೇ, ದೇವನೊಬ್ಬ ನಾಮ ಹಲವು. ಈ ವಿಚಾರದಲ್ಲಿ ನಾವು ನಂಬಿಕೆಯನ್ನಿಟ್ಟುಕೊಂಡು ಕೆಲಸ ಮಾಡುತ್ತಿದ್ದೇವೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...