ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಮತ್ತಷ್ಟು ಸುಲಭ

Date:

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)ಸಿಇಟಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಮತ್ತಷ್ಟು ಸುಲಭಗೊಳಿಸಿದೆ. ಹೊಸ ಮೊಬೈಲ್ ಆ್ಯಪ್ ಮತ್ತು ಪೋರ್ಟಲ್ ಅನ್ನು ಬಿಡುಗಡೆ ಮಾಡಿದ್ದು, ಸೈಬರ್​​ ಸೆಂಟರ್​ಗೆ ಹೋಗದೇ ಕುಳಿತಲ್ಲಿಯೇ ಮೊಬೈಲ್ ಆ್ಯಪ್ ಮೂಲಕವೇ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ.

ಬೆಂಗಳೂರಿನ ಉನ್ನತ ಶಿಕ್ಷಣ ಪರಿಷತ್​ನಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಎಂ ಸಿ ಸುಧಾಕರ್ ಅವರು ಮೊಬೈಲ್ ಆ್ಯಪ್ ಬಿಡುಗಡೆ ಮಾಡಿದ್ದಾರೆ.

ಸೈಬರ್ ಸೆಂಟರ್​​ನಲ್ಲಿ ತಪ್ಪಾಗಿ ಅರ್ಜಿ ಸಲ್ಲಿಸಿ ಅಭ್ಯರ್ಥಿಗಳು ಪರದಾಡುತ್ತಿದ್ದರು. ಇದೇ ಕಾರಣದಿಂದ ಕೆಲವು ಸಲ ಅರ್ಹರಿಗೆ ಸಿಇಟಿ ಸೀಟ್​ ಮಿಸ್ ಆಗುತ್ತಿತ್ತು. ಹಾಗಾಗಿ ಕೆಇಎ ಮೊಬೈಲ್ ಆ್ಯಪ್, ಚಾಟ್ ಬಾಟ್ ಮತ್ತು ಪೊರ್ಟಲ್​​ ಅನ್ನು ಬಿಡುಗಡೆ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೊಸ ಮೊಬೈಲ್​ ಆ್ಯಪ್​ನಿಂದ ಅಭ್ಯರ್ಥಿಗಳಿಗೆ ಸಿಇಟಿ ಪರೀಕ್ಷೆಯ ಸಮಸ್ಯೆಗಳು, ಕಾಲೇಜುಗಳ ಸಮಗ್ರ ಮಾಹಿತಿ, ಆಯ್ಕೆ ಮಾಡುವ ಇಂಜಿನೀಯರಿಂಗ ಕಾಲೇಜು ಶುಲ್ಕ ಎಷ್ಟು? ಆ ಕಾಲೇಜಿನಲ್ಲಿ ಹಾಸ್ಟೇಲ್ ಶುಲ್ಕ ಏನಿದೆ? ಇತರೇ ಸೌಲಭ್ಯಗಳು ಏನಿದೆ ಎಂದು ಹಲವಾರು ಪ್ರಶ್ನೆಗಳಿಗೆ ಆ್ಯಪ್ ನಲ್ಲಿ ಸಂಪೂರ್ಣ ಮಾಹಿತಿ ಸಿಗಲಿದೆ.

“ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವಿನೂತನ ಉಪಕ್ರಮಗಳು — ಕಾಲೇಜು ಪೋರ್ಟಲ್, ಕೆಇಎ ಮೊಬೈಲ್ ಆಪ್ ಮತ್ತು ಕೆಇಎ ಚಾಟ್ ಬಾಟ್ ಉದ್ಘಾಟನೆ ನೆರವೇರಿಸಲಾಯಿತು. 2025-26 ಸಾಲಿನ ವೃತ್ತಿಪರ ಕೋರ್ಸುಗಳಿಗೆ ಸೀಟು ಆಯ್ಕೆ ಪ್ರಕ್ರಿಯೆ ಇನ್ನಷ್ಟು ಪಾರದರ್ಶಕವಾಗಿ! ವಿದ್ಯಾರ್ಥಿಗಳು ಆಪ್ ಡೌನ್ಲೋಡ್ ಮಾಡಿ ಲಾಭ ಪಡೆದುಕೊಳ್ಳಿ” ಎಂದು ಸುಧಾಕರ್‌ ಎಕ್ಸ್‌ ತಾಣದಲ್ಲಿ ಬರೆದುಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...