ಕೆಪಿಎಸ್ ಹೆಸರಲ್ಲಿ ಶಾಲಾ ವಿಲೀನದ ಪ್ರಕ್ರಿಯೆ ಕ್ರಮ ಸರಿಯಲ್ಲ: ಜಮಾಅತೆ ಇಸ್ಲಾಮಿ ಹಿಂದ್ ಕರ್ನಾಟಕ

Date:

ಆಯ್ದ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸಿ ಮ್ಯಾಗ್ನೆಟ್ ಶಾಲೆಗಳ ಹೆಸರಿನಲ್ಲಿ ನೂತನ 700 ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಉನ್ನತೀಕರಿಸುವ ಸರ್ಕಾರದ ನಿರ್ಧಾರದಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಶಿಕ್ಷಣ ಹಕ್ಕು ಮೊಟಕುಗೊಳ್ಳುವ ಆತಂಕವಿದೆ ಎಂದು ಜಮಾಅತೆ ಇಸ್ಲಾಮಿ ಹಿಂದ್ ಕರ್ನಾಟಕ ಹೇಳಿದೆ.

ಜಮಾಅತೆ ಇಸ್ಲಾಮಿ ಹಿಂದ್, ಕರ್ನಾಟಕ ಇದರ ನಿಯೋಗವು ಮಂಗಳವಾರದಂದು ಬೆಂಗಳೂರಿನ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಕಚೇರಿಗೆ ಭೇಟಿ ನೀಡಿ ಆಯೋಗದ ಅಧ್ಯಕ್ಷರಾದ ಶಶಿಧರ ಕೋಸಂಬೆ ಅವರಿಗೆ ಈ ಕುರಿತು ಮನವಿ ಪತ್ರ ಸಲ್ಲಿಸಿತು.

ಕೆಪಿಎಸ್ ಶಾಲೆಗಳ ಹೆಸರಿನಲ್ಲಿ 1 ರಿಂದ 5 ಕಿ.ಮೀ ವ್ಯಾಪ್ತಿಯ ಒಳಗಿನ ಕಡಿಮೆ ದಾಖಲಾತಿ ಹೊಂದಿರುವ ಶಾಲೆಗಳನ್ನು ಇತರ ಶಾಲೆಯೊಂದಿಗೆ ಜೋಡಿಸುವ ವಿಲೀನದ ಪ್ರಕ್ರಿಯೆಯೂ ಶಿಕ್ಷಣ ಹಕ್ಕು ಕಾಯ್ದೆಯ ನೆರೆಹೊರೆ ಶಾಲಾ ಪದ್ಧತಿಗೆ ವಿರುದ್ಧವಾಗಿದೆ. ಇದರಿಂದ ಗ್ರಾಮೀಣ ಭಾಗದ ಮಕ್ಕಳು ಶಿಕ್ಷಣದಿಂದ ವಂಚಿತರಾಗುವ ಬಗ್ಗೆ ಆತಂಕ ವ್ಯಕ್ತಪಡಿಸಿ, ಈ ಕುರಿತು ಇಲಾಖೆಗೆ ಆಯೋಗವು ಶಿಕ್ಷಣ ಹಕ್ಕು ಕಾಯ್ದೆಯ ಆಶಯಗಳಿಗೆ ಪೂರಕವಾಗಿದೆಯೇ ಎಂಬುದರ ಬಗ್ಗೆ ವಿಸ್ತೃತ ವರದಿ ಪಡೆದುಕೊಂಡು ಮತ್ತು ಈ ಯೋಜನೆಯ ಸಾಧಕ-ಬಾಧಕಗಳ ಬಗ್ಗೆ ಶಿಕ್ಷಣ ತಜ್ಞರು ಮತ್ತು ಸಾರ್ವಜನಿಕರೊಂದಿಗೆ ಸಮಾಲೋಚಿಸಿ ನಂತರದಲ್ಲಿ ಮುಂದಿನ ಕಾರ್ಯಯೋಜನೆ ರೂಪಿಸಬೇಕು ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಆಗ್ರಹಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

700 ಶಾಲೆಗಳನ್ನು ಪಬ್ಲಿಕ್ ಶಾಲೆಗಳಾಗಿ ಉನ್ನತೀಕರಿಸಲು ಮ್ಯಾಗ್ನೆಟ್ ಶಾಲೆಗಳ ಹೆಸರಿನಲ್ಲಿ ನಡೆಯುವ ವಿಲೀನದ ಪ್ರಕ್ರಿಯೆಯಲ್ಲಿ ಅಂದಾಜು 25683 ಸರ್ಕಾರಿ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳು ಬಂದ್ ಆಗುವ ಸಾಧ್ಯತೆ ಇವೆ. ಇದು ಬಹುದೊಡ್ಡ ಶೈಕ್ಷಣಿಕ ಪ್ರಮಾದ ಆಗಲಿದ್ದು, ಈ ಬಗ್ಗೆ ಆಯೋಗವು ಮಕ್ಕಳ ಶಿಕ್ಷಣ ಹಕ್ಕಗಳ ಪರವಾಗಿ ವಕಾಲತ್ತು ವಹಿಸಬೇಕೆಂದು ಆಗ್ರಹಿಸಲಾಯಿತು.

ಇದನ್ನು ಓದಿದ್ದೀರಾ? ಬೆಳಗಾವಿ | ಸೋಲಿಡಾರಿಟಿ ಪ್ರಕಟಿಸಿರುವ ‘ವಕ್ಫ್: ಅಪಪ್ರಚಾರ ಮತ್ತು ವಾಸ್ತವ’ ಪುಸ್ತಕ ಬಿಡುಗಡೆ

ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಹೊರಡಿಸಿರುವ ಆದೇಶದಿಂದ ಹಳ್ಳಿಗಳ ಶಾಲೆಗಳು ಅತಂತ್ರವಾಗಲಿವೆ. ಶಿಕ್ಷಣ ಹಕ್ಕು ಕಾಯ್ದೆಯ ನೆರೆಹೊರೆ ಶಾಲಾ ಪದ್ಧತಿಗೆ ವಿರುದ್ಧವಾಗಿ ಶಾಲಾ ಸಮುಚ್ಚಯವನ್ನು ರೂಪಿಸುವ ಇಲಾಖೆಯ ಈ ಚಿಂತನೆಯೂ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ಸಾಧ್ಯತೆ ಇದೆ, ಗ್ರಾಮೀಣ ಪ್ರದೇಶದಲ್ಲಿಯೇ ಹೆಚ್ಚಿರುವ ಸರ್ಕಾರಿ ಶಾಲೆಗಳು ಇನ್ನೂ ಮುಂದೆ ಶಾಲೆಗಳಿಲ್ಲದ ಹಳ್ಳಿಗಳನ್ನಾಗಿ ಊಹಿಸಿಕೊಳ್ಳಲು ಸಾಧ್ಯವಿಲ್ಲ, ಈ ನಿಟ್ಟಿನಲ್ಲಿ ಯಾವುದೇ ಕಾರಣಕ್ಕೂ ಸರ್ಕಾರಿ ಶಾಲೆಗಳನ್ನು ವಿಲೀನದ ಹೆಸರಿನಲ್ಲಿ ಮುಚ್ಚುವ ಪ್ರಸ್ತಾಪವನ್ನು ಸಂಪೂರ್ಣವಾಗಿ ಕೈಬಿಟ್ಟು, ಆಯ್ದ ಶಾಲೆಗಳನ್ನು ಪಬ್ಲಿಕ್ ಶಾಲೆಗಳಾಗಿ ಉನ್ನತೀಕರಿಸುವುದು ಉತ್ತಮ, ಈ ಬಗ್ಗೆ ಸೂಕ್ತ ನಿರ್ಧಾರವನ್ನು ಸರ್ಕಾರವೂ ತೆಗೆದುಕೊಳ್ಳುವಂತೆ ಆಯೋಗವು ಒತ್ತಡ ಹೇರಬೇಕು ಆ ಮೂಲಕ ಸರ್ಕಾರಿ ಶಾಲೆಗಳು ಉಳಿಯಬೇಕು ಎಂಬ ಆಶಯವನ್ನು ವ್ಯಕ್ತಪಡಿಸಲಾಯಿತು.

ಜಮಾಅತೆ ಇಸ್ಲಾಮೀ ಹಿಂದ್ ರಾಜ್ಯ ಕಾರ್ಯದರ್ಶಿ ಲಬೀದ್ ಶಾಫಿ, ಸಹ ಕಾರ್ಯದರ್ಶಿ ರಿಯಾಝ್ ಅಹ್ಮದ್ ರೋಣ ಮತ್ತು ಮೊಹಮ್ಮದ್ ಪೀರ್ ಲಟಗೇರಿ ನಿಯೋಗದಲ್ಲಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...