ಸಿದ್ದು ಸರ್ಕಾರಕ್ಕೆ ಇಂದು ಎರಡೂವರೆ ವರ್ಷ, ಡಿಕೆಶಿ ಬಣದಿಂದ ಸಿದ್ಧವಾಯಿತೇ ‘ಪವರ್ ಗೇಮ್‌’ ಅಖಾಡ?

Date:

ಮುಖ್ಯಮಂತ್ರಿ ಬದಲಾವಣೆ, ಸಚಿವ ಸಂಪುಟ ಪುನಾರಚನೆ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನೂತನ ಅಧ್ಯಕ್ಷರ ನೇಮಕ ವಿಚಾರ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಒಳಗಿನ ನವೆಂಬರ್‌ ಕ್ರಾಂತಿ ಮತ್ತೆ ಮುನ್ನೆಲೆಗೆ ಬಂದಿದೆ. ಇಂದು (ನ.20) ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಎರಡೂವರೆ ವರ್ಷ ಪೂರೈಸಿದ್ದು, ಈ ಬೆನ್ನಲ್ಲೆ ಡಿಸಿಎಂ ಡಿ ಕೆ ಶಿವಕುಮಾರ್‌ ಬಣ ದೆಹಲಿಗೆ ದೌಡಾಯಿಸುತ್ತಿದೆ.

ನ. 21ರಂದು ದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರನ್ನು ಭೇಟಿ ಮಾಡಲು ಅವಕಾಶ ಸಿಕ್ಕಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ಸಿನ ಸುಮಾರು 8-10 ಒಕ್ಕಲಿಗ ನಾಯಕರು ದಿಢೀರನೆ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ. ಅವರೊಂದಿಗೆ, ಅಲ್ಪಸಂಖ್ಯಾತ ನಾಯಕರಾದ ಇಕ್ಬಾಲು ಹುಸೇನ್ ಕೂಡ ಸೇರಿಕೊಂಡಿದ್ದಾರೆ.

ಸರ್ಕಾರ ಎರಡೂವರೆ ವರ್ಷ ಪೂರೈಸಿದ ದಿನವೇ ರಾಜ್ಯ ರಾಜಕೀಯದಲ್ಲಿ ಮಿಂಚಿನ ಸಂಚಲನವಾಗಿದೆ. ಇಷ್ಟು ದಿನಗಳ ಕಾಲ ಮೌನವಾಗಿದ್ದ ಒಕ್ಕಲಿಗ ಸಮುದಾಯದ ಕಾಂಗ್ರೆಸ್ ಶಾಸಕರು ಮತ್ತು ಸಚಿವರು ಈಗ ಪವರ್ ಗೇಮ್‌ ಅಖಾಡಕ್ಕೆ ಇಳಿದಂತೆ ಕಾಣುತ್ತಿದೆ. ಸಿಎಂ ಸ್ಥಾನವನ್ನು ಡಿ.ಕೆ.ಶಿವಕುಮಾರ್‌ಗೆ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್‌ ಅನ್ನು ಆಗ್ರಹಿಸಲು ಒಕ್ಕಲಿಗ ನಾಯಕರೆಲ್ಲ ದೆಹಲಿ ಯಾತ್ರೆ ಕೈಗೊಂಡಿದ್ದಾರೆ ಎನ್ನಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೃಷಿ ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಒಕ್ಕಲಿಗ ಸಮುದಾಯದ ಶಾಸಕರು ದೆಹಲಿ ಯಾತ್ರೆ ಹೊರಟಿದ್ದಾರೆ. ಈ ಟೀಮ್‌ಗೆ ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಯ ದಲಿತ ಶಾಸಕರು ಬೆಂಬಲ ಸೂಚಿಸಿದ್ದಾರೆ. ಚೆಲುವರಾಯಸ್ವಾಮಿ ನೇತೃತ್ವದಲ್ಲಿ ಮಾಗಡಿ ಶಾಸಕ ಬಾಲಕೃಷ್ಣ, ರಾಮನಗರ ಶಾಸಕ ಇಕ್ಬಾಲ್ ಹುಸೇನ್, ಮಂಡ್ಯ ಶಾಸಕ ರವಿಕುಮಾರ್ ಗಣಿಗ, ಅನೇಕಲ್ ಶಾಸಕ ಶಿವಣ್ಣ, ನೆಲಮಂಗಲ ಶಾಸಕ ಶ್ರೀನಿವಾಸ್, ಕುಣಿಗಲ್ ಶಾಸಕ ಎಚ್‌.ಡಿ. ರಂಗನಾಥ್‌, ಗುಬ್ಬಿ ಶಾಸಕ ಎಸ್‌.ಆರ್. ಶ್ರೀನಿವಾಸ್‌, ದಾವಣಗೆರೆ ಜಿಲ್ಲೆಯ ಚನ್ನಗಿರಿ ಶಾಸಕ ಬಸವರಾಜು ಶಿವಗಂಗಾ, ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ದೆಹಲಿಯತ್ತ ಯಾತ್ರೆ ಕೈಗೊಂಡಿದ್ದಾರೆ.

ಸಿಎಂ ಬದಲಾವಣೆಗೆ ಬಿಗಿಪಟ್ಟು ಹಿಡಿದಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಮನೆಯಲ್ಲೇ ಕುಳಿತು ಹೊಸ ಆಟಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ. ಡಿಕೆ ಬ್ರದರ್ಸ್ ಹೈಕಮಾಂಡ್ ಭೇಟಿ ನಂತ್ರ ಇದೀಗ ಡಿಕೆಶಿ ಆಪ್ತ ಬಣದ ಒಕ್ಕಲಿಗ ನಾಯಕರು ಅಖಾಡಕ್ಕೆ ಇಳಿದಿದ್ದಾರೆ.

ಬೆಂಗಳೂರಿನಲ್ಲಿ ಮಾತಾಡಿದ ಮಾಜಿ ಸಂಸದ ಡಿ.ಕೆ ಸುರೇಶ್ ಅವರು ನಯವಾದ ಮಾತಿನಲ್ಲೇ ಸಿಎಂ ಸಿದ್ದರಾಮಯ್ಯ ಅವರನ್ನ ಕುಟುಕಿದ್ದಾರೆ. “ಸಿದ್ದರಾಮಯ್ಯ ಅವರಿಗೂ ಜವಾಬ್ದಾರಿ ಇದೆ. ಕೊಟ್ಟ ಮಾತಿನಂತೆ ನಡೆಯುತ್ತಾರೆ” ಎಂದು ಡಿಕೆ ಸುರೇಶ್​ ಮಾರ್ಮಿಕವಾಗಿ ನುಡಿದ್ದಾರೆ. ಒಟ್ಟಾರೆ ಒಕ್ಕಲಿಗ ನಾಯಕರ ದೆಹಲಿ ಭೇಟಿ ಯಾವ ಸಂದೇಶ ಹೊತ್ತು ತರುತ್ತದೆ ಎಂಬುದು ಕುತೂಹಲ ಮೂಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...