ಮುಸ್ಲಿಮರನ್ನು ಹಿಂದೂಗಳ ಶಾಶ್ವತ ಶತ್ರುಗಳಾಗಿ ಬಿಂಬಿಸುವ ನಿರಂತರ ಪ್ರಯತ್ನ ನಡೆಯುತ್ತಿದೆ: ಚಿಂತಕ ಶಿವಸುಂದರ್

Date:

ಸಂಘಪರಿವಾರ ಹಾಗೂ ಬಿಜೆಪಿಯ ನಾಯಕರು ಮುಸ್ಲಿಂ ಸಮುದಾಯವನ್ನು ಹಿಂದೂಗಳ ಶಾಶ್ವತ ಶತ್ರುಗಳಾಗಿ ಬಿಂಬಿಸುವ ನಿರಂತರ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಹಿರಿಯ ಸಮಾಜ ಚಿಂತಕರಾದ ಶಿವಸುಂದರ್‌ ಆತಂಕ ವ್ಯಕ್ತಪಡಿಸಿದರು.

ಬೆಂಗಳೂರಿನ ಕ್ವೀನ್‌ ರಸ್ತೆಯಲ್ಲಿರುವ ಬಿಫ್ಟ್‌ ಸಭಾಂಗಣದಲ್ಲಿ ಸೋಲಿಡಾರಿಟಿ ಯೂತ್‌ ಮೂಮೆಂಟ್ ಕರ್ನಾಟಕವು ವಿವಿಧ ಲೇಖಕರು, ಚಿಂತಕರು ಹಾಗೂ ಪತ್ರಕರ್ತರ ಸಮಗ್ರ ಕೃತಿಯಾದ “ವಕ್ಫ್‌: ಅಪಪ್ರಚಾರ ಮತ್ತು ವಾಸ್ತವ” ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ವಕ್ಫ್‌ ವಿಚಾರಗಳಲ್ಲಿ ಸುಪ್ರೀಂ ಕೋರ್ಟ್‌ ಕೂಡ ತನ್ನ ಮೂಲಭೂತ ಕರ್ತವ್ಯಗಳಿಂದ ಸಂಪೂರ್ಣವಾಗಿ ಹಿಂದೆ ಹೋಗುತ್ತಿದೆ. ವಕ್ಫ್‌ ಪ್ರಕರಣಗಳಿಗೆ ಸಂಬಂಧಿಸಿದಂತೆ ಇತ್ತೀಚಿನ ತೀರ್ಪುಗಳು ಕೂಡ ಬೇಸರ ಮೂಡಿಸಿವೆ. ಸಂಘಪರಿವಾರ ಹಿನ್ನೆಲೆಯುಳ್ಳ ಕೇಂದ್ರದ ಬಿಜೆಪಿ ಸರ್ಕಾರ ಸಾವರ್ಕರ್‌ ಚಿಂತನೆಯ ಬ್ರಾಹ್ಮಣಶಾಹಿ ಹಿಂದೂ ರಾಷ್ಟ್ರವನ್ನಾಗಿ ಮಾಡಲು ಹಲವು ವರ್ಷಗಳಿಂದ ಪ್ರಯತ್ನಿಸುತ್ತಿದೆ. ಕಳೆದ 10-11 ವರ್ಷಗಳಿಂದ ಅದರ ವೇಗ ಹೆಚ್ಚಾಗಿದೆ. 2024ರ ಜೂನ್‌ ತನಕ ಈ ವಕ್ಫ್‌ ಎಂಬ ಪ್ರಸ್ತಾಪವೇ ದೇಶದಲ್ಲಿ ಇರಲಿಲ್ಲ. ಲೋಕಸಭೆ ಚುನಾವಣೆಯ ಪ್ರಣಾಳಿಕೆಯಲ್ಲೂ ಕೂಡ ವಕ್ಫ್‌ ತಿದ್ದುಪಡಿ ತರುತ್ತೇವೆ ಎಂದೂ ಕೂಡ ಹೇಳಿರಲಿಲ್ಲ. ಮುಸ್ಲಿಂ ಸಮುದಾಯವನ್ನು ಹತ್ತಿಕ್ಕುವ ಸಲುವಾಗಿ ಈ ವಿಚಾರ ಮುನ್ನೆಲೆಗೆ ತರಲಾಗಿದೆ ಎಂದು ಶಿವಸುಂದರ್‌ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ತಿರುಪತಿ ದೇವಾದಿದೇವ ತಿಮ್ಮಪ್ಪನಿಗೇ ನಾಮ ಹಾಕುವ ಧೂರ್ತರು!

ಬಾಬರಿ ಮಸೀದಿ ಆಯಿತು, ಕಾಶ್ಮೀರ ಆಯಿತು ಈಗ ವಕ್ಫ್‌ ವಿಚಾರವನ್ನು ತಂದು ಮುಸ್ಲಿಂ ಸಮುದಾಯವನ್ನು ಶಾಶ್ವತವಾಗಿ ಹಿಂದೂಗಳ ವಿರುದ್ಧ ಎತ್ತಿಕಟ್ಟಲಾಗುತ್ತಿದೆ. ಮೋದಿ ಸರ್ಕಾರ ವಕ್ಫ್‌ ಟ್ರಸ್ಟ್‌ ಸಾರ್ವಜನಿಕರಿಗೆ ಸೇರಿದ್ದು ಎಂಬುದನ್ನು ನಿರಾಕರಿಸಿ ಸಂವಿಧಾನಕ್ಕೆ ವಿರುದ್ಧವಾದ ಕೆಲಸಗಳನ್ನು ಮಾಡಲು ಹೊರಟಿದೆ. ಈಗ ಎಸ್‌ಐಆರ್‌ನಲ್ಲಿಯೂ  ಮುಸ್ಲಿಂ ಸಮುದಾಯವನ್ನು ನೇರವಾಗಿ ಗುರಿ ಮಾಡಲಾಗುತ್ತಿದೆ. ಇದಲ್ಲದೆ ಬೌದ್ಧ ಧರ್ಮದ ಟ್ರಸ್ಟ್‌ಗಳಲ್ಲೂ ಬ್ರಾಹ್ಮಣರನ್ನೂ ತಂದು ಕೂರಿಸುತ್ತಿರುವುದು ಕೂಡ ಆತಂಕಕಾರಿ ಬೆಳವಣಿಗೆ. ಈ ಹುನ್ನಾರದ ವಿರುದ್ಧ ಸಮಗ್ರ ಭಾರತದ ಪ್ರಜೆಗಳು ಎಚ್ಚೆತ್ತುಕೊಂಡು ಹೋರಾಟ ನಡೆಸಬೇಕು ಎಂದು ಕರೆ ನೀಡಿದರು.

ಹೈಕೋರ್ಟ್ ವಕೀಲರಾದ ಅಕ್ಮಲ್‌ ರಿಝ್ವಿ ಮಾತನಾಡಿ, ಯುವಕರಿಂದ ಸಮಾಜದಲ್ಲಿ ಹೆಚ್ಚಾಗಿ ಕೋಮುವಾದ ಹೆಚ್ಚಾಗುತ್ತಿದೆ ಎಂದು ಹೇಳಲಾಗುತ್ತಿದೆ. ಇತ್ತೀಚಿನ ವರ್ಷಗಳಲ್ಲಿ ಆದರೆ 40-50 ವಯಸ್ಸಿನ ಕೌಟುಂಬಿಕ ಜವಾಬ್ದಾರಿ ಹೊತ್ತಿರುವುವವರಿಂದಲೇ ಕೋಮುವಾದ ತೀವ್ರವಾಗುತ್ತಿದೆ. ಜಗತ್ತಿನಲ್ಲಿ ಎಐ ವೇಗವಾಗಿ ಬೆಳೆಯುತ್ತಿದ್ದು, ಬಹುತೇಕರ ಉದ್ಯೋಗಗಳಿಗೆ ಕುತ್ತು ತರುತ್ತಿದೆ. ಆದರೆ ಆಡಳಿತ ನಡೆಸುತ್ತಿರುವವರು ಇದನ್ನು ಹೇಗೆ ಸರಿಪಡಿಸಬೇಕು ಎಂಬುದನ್ನು ಬಿಟ್ಟು ಧಾರ್ಮಿಕ ವಿಷಯಗಳನ್ನು ಸಮಾಜದ ಮೇಲೆ ಬಿತ್ತುತ್ತಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಮಾಅತೆ ಇಸ್ಲಾಮೀ ಹಿಂದ್‌ ಕರ್ನಾಟಕದ ಘಟಕಾಧ್ಯಕ್ಷರಾದ ಡಾ. ಮುಹಮ್ಮದ್ ಸಾದ್ ಬೆಳಗಾಮಿ, ಬೆಂಗಳೂರು ನಗರಾಧ್ಯಕ್ಷರಾದ ಹಾರೂನ್‌ ಸಫ್ದರ್‌, ಸೋಲಿಡಾರಿಟಿ ಯೂತ್‌ ಮೂಮೆಂಟ್ ಕರ್ನಾಟಕ ರಾಜ್ಯಾಧ್ಯಕ್ಷರಾದ ಡಾ. ನಸೀಮ್‌ ಅಹ್ಮದ್‌, ಇಸ್ಮಾಯಿಲ್‌ ತೀರ್ಥಹಳ್ಳಿ, ಪತ್ರಕರ್ತ ಇರ್ಷಾದ್‌ ವೇಣೂರು ಸೇರಿದಂತೆ ಮುಂತಾದವರು ಭಾಗವಹಿಸಿದ್ದರು.

875032
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...