ಕಾಂಗ್ರೆಸ್‌ ಸರ್ಕಾರದಲ್ಲಿ ಭ್ರಷ್ಟಾಚಾರ ಇಲ್ಲ ಎಂದು ಹೇಳಿದರೆ ನನ್ನಂತ ಮೂರ್ಖ ಇನ್ನೊಬ್ಬರಿಲ್ಲ: ಡಿ ಕೆಂಪಣ್ಣ

Date:

  • ಕಾಮಗಾರಿ ಬಿಲ್ ಪೇಮೆಂಟ್​ನಲ್ಲಿ ಅವ್ಯವಹಾರ ನಡೆಯುತ್ತಿದೆ
  • ಭ್ರಷ್ಟಾಚಾರ ಬಗ್ಗೆ ಡಿಕೆ ಶಿವಕುಮಾರ್ ಗಮನಕ್ಕೆ ತಂದಿದ್ದೇವೆ

ಕಾಂಗ್ರೆಸ್ ಅಧಿಕಾರಕ್ಕೆ ಬಂದು ಐದೂವರೆ ತಿಂಗಳು‌ ಮಾತ್ರ ಆಗಿದೆ. ಕಾಮಗಾರಿ ಬಿಲ್ ಪೇಮೆಂಟ್​ನಲ್ಲಿ ಅವ್ಯವಹಾರ ನಡೆಯುತ್ತಿದೆ. ಈ ಬಗ್ಗೆ ಡಿಕೆ ಶಿವಕುಮಾರ್ ಗಮನಕ್ಕೆ ತಂದಿದ್ದೇವೆ. ಸರಿಪಡಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಹೇಳಿದರು.

ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ಬಳಿಕ ಮಾತನಾಡಿದ ಅವರು, “ಸಿದ್ದರಾಮಯ್ಯ ಸರ್ಕಾರದಲ್ಲೂ ಸಾಕಷ್ಟು ಭ್ರಷ್ಟಾಚಾರ ನಡೆಯುತ್ತಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಪ್ರಮುಖ ಕೆಲಸ ಯಾವುದು ಕೂಡ ಆಗಿಲ್ಲ. ಭ್ರಷ್ಟಾಚಾರ ಇಲ್ಲ ಅಂತ ಹೇಳಿದರೆ ನನ್ನಂತ ಮೂರ್ಖ ಇನ್ನೊಬ್ಬರಿಲ್ಲ” ಎಂದರು.

“ಭ್ರಷ್ಟಾಚಾರ ಹಿಂದೆಯೂ ಇತ್ತು, ಈಗಲೂ ಇದೆ. ಅದನ್ನು ತಡೆಗಟ್ಟಬೇಕು. ಈ ಸರ್ಕಾರದಲ್ಲಿ ಭ್ರಷ್ಟಾಚಾರ ಇದೆ. ಆದರೆ ದೊಡ್ಡ ಪ್ರಮಾಣದಲ್ಲಿ ಕಂಡುಬರುತ್ತಿಲ್ಲ. ಈಗ ಯಾವುದೇ ಪ್ರಮುಖ ಕೆಲಸ ಮಾಡಿಲ್ಲ, ಹಾಗಾಗಿ ಆರೋಪ ಮಾಡಲ್ಲ. ಪ್ರಮುಖ ಕಾಮಗಾರಿ ನಡೆದರೆ ಆಗ ಭ್ರಷ್ಟಾಚಾರ ಬಹಿರಂಗವಾಗಲಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಎರಡು ದೇಶಗಳ ಸ್ಥಾಪನೆ- ಇಸ್ರೇಲ್ ಪ್ಯಾಲೆಸ್ತೀನಿ ಕದನಕ್ಕೆ ಕಾಯಂ ಪರಿಹಾರ

ಅಂಬಿಕಾಪತಿ ಮೇಲಿನ‌ ಆರೋಪ ಕುರಿತು ಪ್ರತಿಕ್ರಿಯಿಸಿ, “ಅಂಬಿಕಾಪತಿ ಮೇಲಿನ ಆರೋಪ ಸುಳ್ಳು. ನಾನು ಅಂಬಿಕಾಪತಿ 45 ವರ್ಷದಿಂದ ಸ್ನೇಹಿತರು. ಅವರು ಏನು ಅಂತ ನನಗೆ ಚೆನ್ನಾಗಿ ಗೊತ್ತಿದೆ” ಎಂದರು.

ಸಿದ್ದರಾಮಯ್ಯ ಅವರ ಮನೆಯಿಂದ ನಾನು ನೇರವಾಗಿ ನಮ್ಮ ಮನೆಗೆ ಹೋಗಿದ್ದೇನೆ. ಅಂಬಿಕಾಪತಿ‌ ಮನೆಗೆ ಹೋಗಿಲ್ಲ. ಆರೋಪ ಸಾಬೀತು ಮಾಡಿದರೆ ಅವರ ಕಾಲಡಿ ಇರುತ್ತೇನೆ. ನಾನು ಅಂಬಿಕಾಪತಿ ಪರ ನಿಲ್ಲುತ್ತೇನೆ. ಅಂಬಿಕಾಪತಿ ತಪ್ಪು ಮಾಡಿದ್ದರೆ ಶಿಕ್ಷೆ ಆಗಲಿ. ಕೇಂದ್ರದಲ್ಲಿ ಬಿಜೆಪಿಯ ಸರ್ಕಾರವೇ ಇದೆ, ಸಿಬಿಐ-ಇಡಿ ಅವರ ಬಳಿಯೇ ಇದೆ. ತನಿಖೆ‌ ಮಾಡಿಸಲಿ” ಎಂದು ಆಗ್ರಹಿಸಿದರು.

“40 ಪರ್ಸೆಂಟ್ ಆರೋಪಕ್ಕೆ ಸಂಬಂಧಿಸಿದ ಸಾಕ್ಷಿಯನ್ನು ನಾಗಮೋಹನ್ ದಾಸ್ ಸಮಿತಿಗೆ ಕೊಡುತ್ತೇವೆ. ಬಿಬಿಎಂಪಿಯ ಬಾಕಿ ಬಿಲ್ ವಿಚಾರ ಮಾತ್ರ ಇಂದು ಮಾತನಾಡಿದ್ದೇವೆ. 75 ಪರ್ಸೆಂಟ್ ಬಾಕಿ ಬಿಲ್ ಬಿಡುಗಡೆ ಮಾಡಲು ಹೇಳಿದ್ದೇವೆ. ಡಿಕೆ ಶಿವಕುಮಾರ್‌ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ” ಎಂದು ತಿಳಿಸಿದರು.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...