ನೌಕರರಿಗೆ ಸಂಬಳ ಕೊಡಲು ದುಡ್ಡಿಲ್ಲ, ಸರ್ಕಾರ ದಿವಾಳಿಯಾಗಿದೆ: ಯಡಿಯೂರಪ್ಪ ಆರೋಪ

Date:

  • ರಾಜ್ಯದ ಹಣಕಾಸು ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ: ಕಿಡಿ
  • ಕುಂಟು ನೆಪ ಹೇಳಿ 7ನೇ ವೇತನ ಆಯೋಗದ ಅವಧಿ ವಿಸ್ತರಣೆ 

ದುರಾಡಳಿತ ಹಾಗೂ ದೂರದೃಷ್ಟಿ ಇಲ್ಲದ ಕಾರ್ಯಕ್ರಮಗಳಿಂದಾಗಿ ರಾಜ್ಯದ ಹಣಕಾಸು ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದ್ದು, ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಸಾಧ್ಯವಿಲ್ಲದಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಆಪಾದಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜ್ಯದ ಬೊಕ್ಕಸ ಖಾಲಿಯಾಗಿದೆ. ಶಿಕ್ಷಕರಿಗೆ ವೇತನ ನೀಡಲಾಗುತ್ತಿಲ್ಲ. ನರೇಗಾ ಬಾಕಿ ಬೆಟ್ಟದಂತಿದೆ. ಗೃಹ ಲಕ್ಷ್ಮಿ ಫಲಾನುಭವಿಗಳಿಗೆ ಹಣ ನೀಡಿಲ್ಲ” ಎಂದು ದೂರಿದರು.

“ಗ್ಯಾರಂಟಿ ಯೋಜನೆಗಳಿಗೆ, ಬರ ಎದುರಿಸಲು ಅಷ್ಟೇ ಏಕೆ ಸರ್ಕಾರಿ ನೌಕರರಿಗೆ ಸಂಬಳ ನೀಡಲು ಈ ಸರ್ಕಾರದ ಬಳಿ ಹಣ ಇಲ್ಲ. ಸರ್ಕಾರ ದಿವಾಳಿಯಾಗಿದೆ. ಈ ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಸರ್ಕಾರಿ ನೌಕರರ ಏಳನೇ ವೇತನ ಆಯೋಗ ರಚಿಸಿ ಮಧ್ಯಂತರ ಪರಿಹಾರ ನೀಡಲಾಗಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ಕುಂಟು ನೆಪ ಹೇಳಿ ವೇತನ ಆಯೋಗದ ಅವಧಿ ವಿಸ್ತರಿಸಿದೆ” ಎಂದು ವಾಗ್ದಾಳಿ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜೈಲುಗಳಲ್ಲಿ ಪುರುಷರಿಗೆ ನೀಡುವ ಸೌಲಭ್ಯಗಳು ಮಹಿಳೆಯರಿಗೇಕಿಲ್ಲ?

“ಬಿಜೆಪಿ ನೇತೃತ್ಬದ ಸರ್ಕಾರವಿದ್ದಾಗ ಕರ್ನಾಟಕ ದೇಶದಲ್ಲೆ ಹೆಚ್ಚು ಅಭಿವೃದ್ಧಿ ಹೊಂದಿದ ರಾಜ್ಯವಾಗಿತ್ತು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಅಭಿವೃದ್ಧಿ ಸ್ಥಗಿತಗೊಂಡಿದೆ. ಎಲ್ಲ ರಂಗಗಳಲ್ಲೂ ಕಾಂಗ್ರೆಸ್ ವಿಫಲವಾಗಿದೆ” ಎಂದರು.

“ಈ ಸರ್ಕಾರ ಬದುಕಿದ್ದು ಸತ್ತಂತಾಗಿದೆ. ಕುಂಟು ನೆಪ ಹೇಳಿಕೊಂಡು ಕಾಂಗ್ರೆಸ್‌ನವರು ಕಾಲಹರಣ ಮಾಡುತ್ತಿದ್ದಾರೆ. ಬಹಳ ಕಾಲ ಇವರನ್ನು ಹೀಗೆ ಬಿಡಲು ಸಾಧ್ಯವಿಲ್ಲ. ನಮ್ಮ ಮುಖಂಡರ ಜತೆ ಚರ್ಚಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ರೂಪುರೇಷೆಗಳನ್ನು ನಿರ್ಧರಿಸುತ್ತೇವೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...