ಇದು 80% ಕಮಿಷನ್‌ ಸರ್ಕಾರ, ಗುತ್ತಿಗೆದಾರರ ಸಂಘದವರಿಂದಲೇ ಆರೋಪ: ಆರ್‌.ಅಶೋಕ್

Date:

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಬಿಜೆಪಿ 40% ಕಮಿಷನ್‌ ಪಡೆಯುತ್ತಿದೆ ಎಂದು ಸುಳ್ಳು ಆರೋಪ ಮಾಡಿದ್ದರು. ಈಗ ಗುತ್ತಿಗೆದಾರರ ಸಂಘದವರು, ಕಾಂಗ್ರೆಸ್‌ ಸರ್ಕಾರ ದುಪ್ಪಟ್ಟು ಕಮಿಷನ್‌ ಪಡೆಯುತ್ತಿದೆ ಎಂದು ಹೇಳಿ ಸಿಎಂಗೆ ಪತ್ರ ಬರೆದಿದ್ದಾರೆ. ಅಂದರೆ ಇದು 80 ಪರ್ಸೆಂಟ್‌ ಸರ್ಕಾರ ತಿಪಕ್ಷ ನಾಯಕ ಆರ್‌.ಅಶೋಕ್‌ ಆರೋಪಿಸಿದರು.

ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಎಲ್ಲರೂ ರಾಜೀನಾಮೆ ನೀಡಬೇಕು. ಸಿಎಂ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ಕೊಡಬೇಕು” ಎಂದು ಆಗ್ರಹಿಸಿದರು.

“ಸಚಿವರು ಲಂಚ ಪಡೆದಿಲ್ಲ ಎಂದಾದರೆ ಸ್ಪಷ್ಟನೆ ನೀಡಲಿ. ಇಲ್ಲವೆಂದರೆ ಎಲ್ಲರೂ ಲಂಚ ಪಡೆದಿದ್ದಾರೆ ಎಂದು ತಿಳಿಯಬೇಕಾಗುತ್ತದೆ. ನ್ಯಾ.ನಾಗಮೋಹನದಾಸ್‌ ಸಮಿತಿಯನ್ನು ಸರ್ಕಾರ ರದ್ದು ಮಾಡಿದೆ. ಭ್ರಷ್ಟಾಚಾರ ಬಯಲಾಗುವುದೆಂಬ ಕಾರಣಕ್ಕೆ ಈ ಕ್ರಮ ವಹಿಸಲಾಗಿದೆ. ಬಿಜೆಪಿ ಅವಧಿಯಲ್ಲಿ ಪೇ ಸಿಎಂ ಎಂಬ ಪೋಸ್ಟರ್‌ ಅಂಟಿಸಿದ್ದರು. ಇದಕ್ಕೆ ರಾಹುಲ್‌ ಗಾಂಧಿ ಉತ್ತರ ನೀಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪರಿಹಾರದ ಬಗ್ಗೆ ತಿಳಿಸಿ

“ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಪ್ರವಾಹ ಬಂದು ಸಾವು ನೋವು ಉಂಟಾಗಿದೆ. ಕಲಬುರ್ಗಿ ಹಾಗೂ ಬೀದರ್‌ನಲ್ಲಿ ಹೆಚ್ಚು ಹಾನಿ ಉಂಟಾಗಿದೆ. ಈವರೆಗೆ ಯಾವುದೇ ಸಚಿವರು ಕ್ರಮ ವಹಿಸಿಲ್ಲ. ಬಿಜೆಪಿ ಅವಧಿಯಲ್ಲಿ ಡಬಲ್‌ ಪರಿಹಾರ ನೀಡಲಾಗಿತ್ತು. ಸರ್ಕಾರದ ಬಳಿ ಹಣವಿದ್ದರೆ ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದ್ದರು. ಹಣವಿಲ್ಲದೆ ಸಚಿವರು ಹಾಗೂ ಸಿಎಂ ಮುಖ ತಪ್ಪಿಸಿಕೊಂಡು ಓಡಾಡುತ್ತಿದ್ದಾರೆ. ಸರ್ಕಾರದ ಸಂಪೂರ್ಣ ಗಮನ ಜಾತಿ ಸಮೀಕ್ಷೆಯ ಕಡೆಗಿದೆ. ಮನೆ ಹಾನಿಗೆ ಹಾಗೂ ಬೆಳೆ ಹಾನಿಗೆ ಎಷ್ಟು ಪರಿಹಾರ ನೀಡಲಾಗುವುದು ಎಂದು ಸರ್ಕಾರ ಸ್ಪಷ್ಟವಾಗಿ ತಿಳಿಸಬೇಕು” ಎಂದು ಆಗ್ರಹಿಸಿದರು.

“ಕೇಂದ್ರ ಸರ್ಕಾರ ತನ್ನ ಪಾಲಿನ ಪರಿಹಾರದ ಹಣವನ್ನು ನೀಡುತ್ತದೆ. ರಾಜ್ಯ ಸರ್ಕಾರದಿಂದ ತಕ್ಷಣ 3,000 ಕೋಟಿ ರೂ. ಪರಿಹಾರ ಘೋಷಿಸಿ ವಿತರಣೆ ಮಾಡಬೇಕು. ಬಿಜೆಪಿ ಅವಧಿಯಲ್ಲಿ 30 ದಿನಕ್ಕಾಗುವಷ್ಟು ದಿನಸಿ ನೀಡಲಾಗಿತ್ತು. ಈ ಸರ್ಕಾರ ಅರ್ಧ ಕೆಜೆ ಅಕ್ಕಿಯೂ ಕೊಟ್ಟಿಲ್ಲ. ಬಿಜೆಪಿ ವತಿಯಿಂದ ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಾಗುತ್ತಿದೆ. ನಾನು ಕೂಡ ಪ್ರವಾಸ ಮಾಡಿ ಸರ್ಕಾರದ ಕಿವಿ ಹಿಂಡುವ ಕೆಲಸ ಮಾಡುತ್ತೇನೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹಿಂದುಳಿದ ವರ್ಗಗಳ ಹಿತಕ್ಕೆ ಕೊಳ್ಳಿ ಇಡಲು ಹೊರಟ ಬಿಜೆಪಿ

ಬಿಡದಿ ಯೋಜನೆ ಕೈಬಿಟ್ಟಿದ್ದ ಕುಮಾರಸ್ವಾಮಿ

“ಬಿಡದಿಯಲ್ಲಿ ಅಭಿವೃದ್ಧಿಗಾಗಿ ಪಡೆದ ಜಮೀನನ್ನು ಎಚ್‌.ಡಿ.ಕುಮಾರಸ್ವಾಮಿ ಕೈ ಬಿಟ್ಟಿದ್ದರು. ನಾವು ಕೂಡ ಆ ಯೋಜನೆ ಕೈ ಬಿಟ್ಟಿದ್ದೆವು. ಈಗ ರಿಯಲ್‌ ಎಸ್ಟೇಟ್‌ ಮೂಲಕ ದುಡ್ಡು ಹೊಡೆಯಲು ಡಿ.ಕೆ.ಶಿವಕುಮಾರ್‌ ಈ ಯೋಜನೆ ಮತ್ತೆ ತಂದಿದ್ದಾರೆ. ಆನೇಕಲ್‌, ಯಲಹಂಕ ಮೊದಲಾದ ಭಾಗಗಳಲ್ಲಿ ನಿವೇಶನ ಮಾಡಿದ ನಂತರ ಬಿಡದಿಗೆ ಏಕೆ ಹೋಗುತ್ತಿದ್ದಾರೆ? ಈಗಾಗಲೇ ಅನೇಕ ನಿವೇಶನಗಳು ಖಾಲಿ ಇದೆ. ಬಿಡದಿಯಲ್ಲಿ ರೈತರ ಜಮೀನುಗಳಿವೆ. ಅಂತಹ ಫಲವತ್ತಾದ ಭೂಮಿಯಲ್ಲಿ ರಿಯಲ್‌ ಎಸ್ಟೇಟ್‌ ಮಾಡಬಾರದು” ಎಂದರು.

“ಜಾತಿ ಸಮೀಕ್ಷೆಯಲ್ಲಿ ಸಂಬಂಧವಿಲ್ಲದ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ತಮಗೆ ಬೇಕಾದ ಜಾತಿಗಳ ಸಂಖ್ಯೆಯನ್ನು ಹೆಚ್ಚಾಗಿ ತೋರಿಸಲು ಪ್ರಯತ್ನ ಮಾಡುತ್ತಿದ್ದಾರೆ. ಈ ಸಮೀಕ್ಷೆಗೆ ಪೂರ್ವ ತಯಾರಿ ಮಾಡಿಲ್ಲ. ಕೇವಲ ಹದಿನೈದು ದಿನಗಳಲ್ಲಿ ಮುಗಿಸಿ ಎಂದು ಅಧಿಕಾರಿಗಳ ಮೇಲೆ ಒತ್ತಡ ಹೇರಿದ್ದಾರೆ. ಸಾಕಷ್ಟು ಸಮಯ ಇಟ್ಟುಕೊಂಡು ಸಮೀಕ್ಷೆ ಮಾಡಬೇಕು. ಇದು ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಯನ್ನು ಇಷ್ಟಪಡಿಸಲು ಮಾಡುತ್ತಿರುವ ಸಮೀಕ್ಷೆ” ಎಂದು ಟೀಕಿಸಿದರು.

“ಹಬ್ಬದ ಸಮಯದಲ್ಲಿ ಬಸ್‌ ದರ ಹೆಚ್ಚಳ ಮೂಲಕ ಸರ್ಕಾರ ಹಿಂದುಗಳಿಗೆ ಬರೆ ಎಳೆದಿದೆ. ಇದು ಹಿಂದುಗಳನ್ನು ಟಾರ್ಗೆಟ್‌ ಮಾಡುವ ಸರ್ಕಾರ. ಧರ್ಮಸ್ಥಳ, ಚಾಮುಂಡಿ ಬೆಟ್ಟವನ್ನು ಈಗಾಗಲೇ ಟಾರ್ಗೆಟ್‌ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯನವರು ಮತಾಂತರದ ರಾಯಭಾರಿ” ಎಂದು ದೂರಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...