RSSಗಾಗಿ ‘ಖರ್ಗೆ’ ಮೇಲೆ ಮುಗಿಬಿದ್ದವರು, ಗವಾಯಿ ಮೇಲಿನ ‘ಶೂ’ ದಾಳಿಗೆ ತುಟಿಬಿಚ್ಚಲಿಲ್ಲವೇಕೆ: ದಿನೇಶ್‌ ಪ್ರಶ್ನೆ

Date:

ಸರ್ಕಾರಿ ಸ್ಥಳಗಳಲ್ಲಿ ಅನುಮತಿ ಪಡೆಯದೆ ಆರ್‌ಎಸ್‌ಎಸ್‌ ಚಟುವಟಿಕೆಗಳನ್ನು ನಡೆಸುತ್ತಿದೆ. ಸರ್ಕಾರಿ ಜಾಗದಲ್ಲಿ ಆರ್‌ಎಸ್‌ಎಸ್‌ ಕಾರ್ಯಕ್ರಮಗಳನ್ನು ನಿಷೇಧಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಪತ್ರ ಬರೆದಿದ್ದಾರೆ. ಆ ಕಾರಣಕ್ಕಾಗಿ, ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಮುಖಂಡರು ಪ್ರಿಯಾಂಕ್‌ ಖರ್ಗೆ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ನಿಂದಿಸುತ್ತಿದ್ದಾರೆ. ಬಿಜೆಪಿಗರ ಧೋರಣೆಯ ವಿರುದ್ಧ ಕಿಡಿಕಾರಿರುವ ಹಿರಿಯ ಪತ್ರಕರ್ತ ದಿನೇಶ್‌ ಅಮಿನ್ ಮಟ್ಟು, ‘RSSಗಾಗಿ ಖರ್ಗೆ ಮೇಲೆ ಮುಗಿಬಿದ್ದವರು, ಗವಾಯಿ ಮೇಲಿನ ದಾಳಿಗೆ ತುಟಿಬಿಚ್ಚಲಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಧಾನ ಪರಿಷತ್‌ನ ವಿಪಕ್ಷದ ಮುಖ್ಯ ಸಚೇತಕ ಎನ್ ರವಿಕುಮಾರ್ ಅವರು ‘ಆರ್‌ಎಸ್‌ಎಸ್‌ಗೆ ಕಾಂಗ್ರೆಸ್‌ ಮನೆಗಳಿಂದಲೇ ಹಣ ಬರುತ್ತದೆ’ ಎಂದಿದ್ದಾರೆ. ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಕೂಡ ಆರ್‌ಎಸ್‌ಎಸ್‌ ಪರವಾಗಿ ಬ್ಯಾಟ್‌ ಬೀಸಿದ್ದಾರೆ. ಅವರ ಹೇಳಿಕೆಗಳ ಪತ್ರಿಕಾ ತುಣುಕನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿರುವ ಅಮಿನ್ ಮಟ್ಟು, ಆರ್‌ಎಸ್‌ಎಸ್‌ ಬೆಂಬಲಿಗರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

“ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳನ್ನು ನಿಷೇಧಿಸುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವುದನ್ನು ನೆಪವಾಗಿಟ್ಟುಕೊಂಡು ಬಿಜೆಪಿಯ ರಾಜ್ಯ ಮತ್ತು ರಾಷ್ಟ್ರನಾಯಕರು ಸಚಿವ ಪ್ರಿಯಾಂಕ್ ಖರ್ಗೆ ಮೇಲೆ ಮುಗಿಬಿದ್ದಿದ್ದಾರೆ. ಇವರಲ್ಲಿ ಯಾರೂ ಕೂಡಾ ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಸನಾತನಿ ವಕೀಲನೊಬ್ಬ ಶೂ ಎಸೆದ ಘಟನೆ ಬಗ್ಗೆ ತುಟಿ ಬಿಚ್ಚಿಲ್ಲ” ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇವರನ್ನು ಬಿಟ್ಟುಬಿಡಿ ವಿಶ್ವದ ಹಿಂದುಗಳ ರಕ್ಷಣೆಯ ಪಣತೊಟ್ಟ ರಾಷ್ಟ್ರೀಯ ಸ್ವಯಂ ಸೇವಕ ಸಂಘವೇ ಇಲ್ಲಿಯವರೆಗೆ ಶೂ ಎಸೆತವನ್ನು ಖಂಡಿಸಿ ನಾಲ್ಕು ಸಾಲಿನ ಹೇಳಿಕೆ ಬಿಡುಗಡೆ ಮಾಡಿಲ್ಲ. ಆ ಘಟನೆಯನ್ನು ಖಂಡಿಸುವ ಪ್ರಾಮಾಣಿಕತೆಯೂ ಇಲ್ಲ, ಸಮರ್ಥಿಸುವ ಧೈರ್ಯವೂ ಇಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಇವರ (ಆರ್‌ಎಸ್‌ಎಸ್‌) ‘ಹಿಂದು’ ವ್ಯಾಖ್ಯಾನದಲ್ಲಿ ದಲಿತರು ಮತ್ತು ಶೂದ್ರರು ಇಲ್ಲ ಎನ್ನುವುದು ಶ್ರೀನಿವಾಸ ಪೂಜಾರಿ, ಗೋವಿಂದ ಕಾರಜೋಳ, ನಾರಾಯಣ ಸ್ವಾಮಿ, ರವಿಕುಮಾರ್, ಸುನೀಲ್ ಕುಮಾರ್, ಸಿ.ಟಿ.ರವಿ ಮೊದಲಾದವರಿಗೆ ಗೊತ್ತಾಗುವುದು ಯಾವಾಗ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...