ಸ್ವಾತಂತ್ರ್ಯ ಹೋರಾಟದ ಮಹತ್ವ ತಿಳಿಯದವರು ನೆಹರೂ ಅವರನ್ನು ಟೀಕಿಸುತ್ತಾರೆ: ಸಿದ್ದರಾಮಯ್ಯ

Date:

ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸದೆ ಬ್ರಿಟಿಷರ ಜೊತೆ ಕೈಜೋಡಿಸಿದ್ದವರು ನೆಹರೂ ಮತ್ತು ಗಾಂಧಿಯನ್ನು ಟೀಕಿಸುತ್ತಾರೆ. ಇದನ್ನು ಮಕ್ಕಳು ಮತ್ತು ಶಿಕ್ಷಕರು ಹಾಗೂ ಪೋಷಕರು ಅರ್ಥ ಮಾಡಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

“ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬ್ಯಾಂಕ್ವೆಟ್ ಹಾಲ್‌ನಲ್ಲಿ ಪಂಡಿತ್ ಜವಾಹರಲಾಲ್ ಜನ್ಮ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ “ರಾಜ್ಯ ಮಟ್ಟದ ಮಕ್ಕಳ ದಿನಾಚರಣೆ ಮತ್ತು ಪೋಷಕರ-ಶಿಕ್ಷಕರ ಮಹಾಸಭೆ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

“ನೆಹರೂ ತಮ್ಮ ಯೌವ್ವನದ 3200ಕ್ಕೂ ಹೆಚ್ಚು ದಿನಗಳನ್ನು ಜೈಲಿನಲ್ಲಿ ಕಳೆದ ಹೋರಾಟಗಾರ. ಅತೀ ಶ್ರೀಮಂತ ಕುಟುಂಬದಿಂದ ಬಂದಿದ್ದರೂ ದೇಶದ ಸ್ವಾತಂತ್ರ್ಯಕ್ಕಾಗಿ ಸೆರೆಮನೆ ಸೇರಿದರು. ದೇಶದ ಪ್ರಧಾನಿಯಾಗಿ ಕೃಷಿ, ವಿಜ್ಞಾನ, ನೀರಾವರಿ, ತಂತ್ರಜ್ಞಾನ ಸೇರಿ ದೇಶದ ಸಮಗ್ರ ಅಭಿವೃದ್ಧಿಗೆ ಅಡಿಪಾಯ ಹಾಕಿದರು. IIT, ಏಮ್ಸ್ ಸೇರಿ ಅಣೆಕಟ್ಟು, ಕೈಗಾರಿಕೆಗಳನ್ನೆಲ್ಲಾ ಮಾಡಿದ್ದು ನೆಹರೂ” ಎಂದು ತಿಳಿಸಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇಶದ ಭವಿಷ್ಯ ರೂಪಿತ ಆಗುವುದು ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳಿಂದ. ಆದ್ದರಿಂದ ಮಕ್ಕಳು ಪ್ರಾಥಮಿಕ‌ ಶಿಕ್ಷಣದಿಂದಲೇ ಮೌಢ್ಯ, ಕಂದಾಚಾರದಿಂದ ದೂರ ಉಳಿಯಬೇಕು. ಮಕ್ಕಳೇ ಭಾರತದ ಭವಿಷ್ಯ ಎನ್ನುವ ದೂರದೃಷ್ಟಿ ನೆಹರೂ ಅವರಿಗೆ ಇತ್ತು. ಹೀಗಾಗಿ ಮಕ್ಕಳಲ್ಲಿ ವೈಜ್ಞಾನಿಕ ಮನೋಧರ್ಮ ರೂಪಿಸುವ ಶಿಕ್ಷಣಕ್ಕೆ ಒತ್ತು ನೀಡಿದ್ದರು. ನಮ್ಮ ಸರ್ಕಾರ ಕೂಡ ಶಿಕ್ಷಣಕ್ಕೆ ಪ್ರಥಮ ಆಧ್ಯತೆ ನೀಡಿದ್ದು, 65,000 ಕೋಟಿ ರೂಪಾಯಿಗಳನ್ನು ಶಿಕ್ಷಣಕ್ಕೆ ನಮ್ಮ ಸರ್ಕಾರ ನೀಡುತ್ತಿದೆ” ಎಂದರು.

“ವೈಜ್ಞಾನಿಕ ಮತ್ತು ವೈಚಾರಿಕ ಮನೋಭಾವ ಇರುವ ಮಕ್ಕಳ ಮೇಲೆ ದೇಶದ ಅಭಿವೃದ್ಧಿ ಮತ್ತು ಭವಿಷ್ಯದ ಕನಸನ್ನು ನೆಹರೂ ಕಟ್ಟಿಕೊಂಡಿದ್ದರು. ಪ್ರತಿಭೆ ಯಾರ ಸ್ವತ್ತೂ ಅಲ್ಲ. ಈಗ ಈ ವೇದಿಕೆಯಲ್ಲಿ ಸನ್ಮಾನಿತರಾದ ವಿದ್ಯಾರ್ಥಿಗಳೆಲ್ಲರೂ ಬಡ ಕುಟುಂಬದಿಂದ ಬಂದು ಸರ್ಕಾರಿ ಶಾಲೆಗಳಲ್ಲಿ ಓದಿದವರು. ಆದ್ದರಿಂದ ಈ ವರ್ಷ ಒಟ್ಟು 900 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯುತ್ತಿದೆ. ಉತ್ತಮ ಗುಣಮಟ್ಟದ ಶಿಕ್ಷಣಕ್ಕಾಗಿ ಸರ್ಕಾರ ಶ್ರಮಿಸುತ್ತಿದೆ. ನಾನೂ ಸರ್ಕಾರಿ ಶಾಲೆಯಲ್ಲಿ ಓದಿಯೇ ಮುಖ್ಯಮಂತ್ರಿ ಆಗಿದ್ದೀನಿ” ಎಂದರು.

“ಮನುಷ್ಯ ಮನುಷ್ಯನನ್ನು ಜಾತಿ, ಧರ್ಮ, ಭಾಷೆಯ ಮಿತಿ ಇಲ್ಲದೆ ಪ್ರೀತಿಸಬೇಕು. ಜಾತಿ ವ್ಯವಸ್ಥೆಯ ಆಧಾರದ ಮೇಲೆ ತಾರತಮ್ಯ ಮಾಡುವವರನ್ನು ಹತ್ತಿರಕ್ಕೆ ಸೇರಿಸದೆ, ಪ್ರತಿಯೊಬ್ಬರೂ ಸಂವಿಧಾನದ ಆಶಯದಂತೆ ಸಹಿಷ್ಣತೆ ಮತ್ತು ಸಹಭಾಳ್ವೆಯನ್ನು ಪಾಲಿಸುವ ಮೂಲಕ ವೈವಿದ್ಯತೆಯಲ್ಲಿ ಏಕತೆಯನ್ನು ಉಳಿಸಿ ಬೆಳೆಸುವಂತಾಗಬೇಕು” ಎಂದು ಕರೆ ನೀಡಿದರು.

ಸರ್ಕಾರಿ ಶಾಲೆಗಳ ಮಕ್ಕಳು ಸ್ವಾಭಿಮಾನದಿಂದ ಸಮಾಜಮುಖಿಯಾಗಿ ಬೆಳೆಯಲು ಉತ್ತಮ ಶಿಕ್ಷಣ ಪಡೆಯಲು ನಮ್ಮ ಸರ್ಕಾರ ಸಕಲ ಸವಲತ್ತುಗಳನ್ನೂ ನೀಡುತ್ತಿದೆ. ಇಂದಿರಾ ಕಿಟ್-ಶೂ-ಸಮವಸ್ತ್ರ-ಮೊಟ್ಟೆ-ಬಾಳೆಹಣ್ಣು-ಪಠ್ಯ ಪುಸ್ತಕ-ಸ್ಕಾಲರ್ಶಿಪ್ ಸೇರಿ ಬಡವರ ಮಕ್ಕಳಿಗಾಗಿ ಸರ್ಕಾರ ಒದಗಿಸುತ್ತಿದೆ. ಇದರ ಅನುಕೂಲ ಪಡೆದು ವೈಜ್ಞಾನಿಕ ಮನಸ್ಥಿತಿ ಬೆಳೆಸಿಕೊಳ್ಳಿ ಎಂದು ಕರೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...