ಸಾರಿಗೆ ನೌಕರರ ಮುಷ್ಕರ | 38 ತಿಂಗಳ ಬಾಕಿ ವೇತನ ಪಾವತಿ ಅಸಾಧ್ಯ, 14 ತಿಂಗಳ ಹಿಂಬಾಕಿಗೆ ಸಿದ್ಧ: ಸಿಎಂ

Date:

ಸಾರಿಗೆ ನೌಕರರು 38 ತಿಂಗಳ ಬಾಕಿ ವೇತನ ಪಾವತಿಗೆ ಬೇಡಿಕೆ ಇರಿಸಿರುವುದು ಸಮಂಜಸವಲ್ಲ. ಕೇವಲ 14 ತಿಂಗಳ ಹಿಂಬಾಕಿಗೆ ಸಿದ್ಧ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಂಧಾನ ಸಭೆಯಲ್ಲಿ 2020ರ ಜನವರಿ ಯಿಂದ 2023ರ ಫೆಬ್ರವರಿವರೆಗಿನ 38 ತಿಂಗಳ ವೇತನ ಹೆಚ್ಚಳ ಹಿಂಬಾಕಿ ಹಾಗೂ 2024ರ ಜನವರಿಯಿಂದ ಅನ್ವಯ ವಾಗುವಂತೆ ಹೊಸದಾಗಿ ವೇತನವನ್ನು ಹೆಚ್ಚಳ ಮಾಡುವಂತೆ ಸಾರಿಗೆ ನೌಕರರ ಸಂಘಟನೆಗಳ ಪ್ರಮುಖರು ಪಟ್ಟು ಹಿಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಅವರು, ನಿಗಮಗಳ ಆರ್ಥಿಕ ಪರಿಸ್ಥಿತಿ, ವೇತನ ಹೆಚ್ಚಳಕ್ಕೆ ಸಂಬಂಧಿಸಿ 2023ರ ಮಾರ್ಚ್‌ನಲ್ಲಿ ಹಿಂದಿನ ಸರ್ಕಾರ ಮಾಡಿರುವ ಆದೇಶದಲ್ಲಿನ ದೋಷಗಳ ಕುರಿತು ನೌಕರ ಸಂಘಟನೆ ಪ್ರಮುಖರಿಗೆ ತಿಳಿಸಿ, “ನೌಕರರ ಬೇಡಿಕೆಯಂತೆ 38 ತಿಂಗಳ ವೇತನ ಹೆಚ್ಚಳ ಹಿಂಬಾಕಿ ಪಾವತಿ ಅಸಾಧ್ಯ. ಕೇವಲ 14 ತಿಂಗಳ ವೇತನ ಹೆಚ್ಚಳ ಹಿಂಬಾಕಿ ನೀಡಲು ಸಿದ್ಧ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“2016ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದಾಗ ವೇತನ ಪರಿಷ್ಕರಣೆ ಮಾಡಿದ್ದೆ. ಆಗ ಶೇ. 12.5 ರಷ್ಟು ಹೆಚ್ಚಳ ಮಾಡಲಾಗಿತ್ತು. ಬಳಿಕ 2020 ರಲ್ಲಿ ಕೋವಿಡ್ ಕಾರಣಕ್ಕೆ ಅಂದಿನ ಸರ್ಕಾರ ವೇತನ ಪರಿಷ್ಕರಣೆ ಮಾಡಿಲ್ಲ. 2023ರ ಮೇ 01 ರ ಹಿಂದಿನ ಸರ್ಕಾರ ಇದ್ದಾಗ ವೇತನ ಪರಿಷ್ಕರಣೆ ಒಪ್ಪಂದವಾಗಿತ್ತು. ಆಗ ಮೂಲವೇತನ 15 ಶೇ.ಪರಿಷ್ಕರಣೆ ಮಾಡಲು ತೀರ್ಮಾನವಾಗಿತ್ತು. ಆಗ ನೀವು ಅದನ್ನು ಒಪ್ಪಿಕೊಂಡಿದ್ದೀರಿ” ಎಂದರು.

“ವೇತನ ಪರಿಷ್ಕರಣೆ ಕುರಿತಾಗಿ ಶ್ರೀನಿವಾಸ ಮೂರ್ತಿ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಸಮಿತಿ 2022ರ ಜೂನ್‌ 01 ರಿಂದ 2023ರ ಫೆಬ್ರವರಿ 28ರ ವರೆಗೆ ಬಾಕಿ ವೇತನ ಕೊಡಬಹುದು ಎಂದು ಶಿಫಾರಸು ಮಾಡಿತ್ತು. ಸಾರಿಗೆ ಸಂಘಟನೆಗಳ ಪ್ರತಿನಿಧಿಗಳು ಸಹ ಸಮಿತಿ ಮುಂದೆ ಹಾಜರಾಗಿ ಅಹವಾಲು ಸಲ್ಲಿಸಿದ್ದರು. ಶ್ರೀನಿವಾಸ ಸಮಿತಿಯ ಶಿಫಾರಸ್ಸು ಸರ್ಕಾರ ಒಪ್ಪಿಕೊಂಡಿದೆ. ನೀವು ಸಹ ಸದರಿ ಸಮಿತಿಯ ಶಿಫಾರಸುಗಳನ್ನು ಒಪ್ಪಿಕೊಳ್ಳಬೇಕು” ಎಂದು ಹೇಳಿದರು.

“ನಾವು ಅಧಿಕಾರಕ್ಕೆ ಬಂದಾಗ ಎಲ್ಲಾ ನಿಗಮಗಳಿಗೆ ಒಟ್ಟಾರೆ 4 ಸಾವಿರ ಕೋಟಿ ಸಾಲ ಇತ್ತು. 2018 ರಲ್ಲಿ ಕೇವಲ ರೂ.14 ಕೋಟಿ ಮಾತ್ರ ಬಾಕಿಯಿತ್ತು. ಪ್ರಸ್ತುತ ಯಾವ ಸಾರಿಗೆ ನಿಗಮ ಸಹ ಲಾಭದಲ್ಲಿಲ್ಲ. ಸರ್ಕಾರ ಯಾರಿಗೂ ಅನ್ಯಾಯ ಮಾಡುವುದಿಲ್ಲ. ಎಲ್ಲ ನಿಗಮದವರು ಸಹಕರಿಸಬೇಕು. ಸಾರಿಗೆ ನೌಕರರ ಸಂಘದ ಚುನಾವಣೆ ನಡೆಸುವ ಕುರಿತು ಪರಿಶೀಲನೆ ನಡೆಸಲಾಗುವುದು. ಎಲ್ಲಾ ಅಹವಾಲುಗಳನ್ನು ಮಾತುಕತೆ ಮೂಲಕ ಬಗೆಹರಿಸಲು ಸರ್ಕಾರ ಸಿದ್ಧವಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...