ಬೆಂಗಳೂರು | ಸಾರಿಗೆ ನೌಕರರಿಗೆ ಸಿಗದ ಕೊರೊನಾ ಪರಿಹಾರ; ಸರ್ಕಾರದ ನಡೆ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

Date:

ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮಗಳ ನೌಕರರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದು, ಅವರ ಕುಟುಂಬ ಸದಸ್ಯರಿಗೆ ತಲಾ ₹30 ಲಕ್ಷ ಪರಿಹಾರ ನೀಡುವುದಾಗಿ ಹೇಳಿದ್ದ ರಾಜ್ಯ ಸರ್ಕಾರ ಈವರೆಗೆ ಅದನ್ನು ಬಿಡುಗಡೆ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರದ ನಡೆ ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ದಾವಣಗೆರೆಯ ತಾಹೀರ್ ಹುಸೈನ್ ಮತ್ತು ರಾಯಚೂರಿನ ಅಜೀಜ್ ಪಾಷಾ ಜಾಗೀರದಾರ್ ಅವರು ಸಲ್ಲಿಸಿರುವ ಸಾರ್ವಜನಿಕ ಅರ್ಜಿಯ ಕುರಿತು ನ್ಯಾಯಮೂರ್ತಿಗಳಾದ ವಿ ಕಾಮೇಶ್ವರ ರಾವ್‌ ಮತ್ತು ಎಸ್‌ ರಾಚಯ್ಯ ಅವರ ನೇತೃತ್ವದ ವಿಭಾಗೀಯ ಪೀಠವು ವಿಚಾರಣೆ ನಡೆಸಿತು. ಅರ್ಜಿದಾರರ ಪರ ವಕೀಲ ಪಿ ಉಸ್ಮಾನ್‌, “ಕೋವಿಡ್‌ ಸಂದರ್ಭದಲ್ಲಿ ಸಾವನ್ನಪ್ಪಿದ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ನೌಕರರಿಗೆ ಈವರೆಗೂ ₹30 ಲಕ್ಷ ಪರಿಹಾರವನ್ನು ನೀಡಿಲ್ಲ” ಎಂದು ವಾದ ಮಂಡಿಸಿದರು.

ವಾದ ಆಲಿಸಿದ ಪೀಠವು ಜನವರಿ 27ಕ್ಕೆ ಅರ್ಜಿಯ ವಿಚಾರಣೆಯನ್ನು ಮುಂದೂಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಕೋವಿಡ್‌ನಿಂದ ಮೃತಪಟ್ಟ ವೈದ್ಯರ ಕುಟುಂಬಕ್ಕೆ ಪರಿಹಾರ; ಮಾಹಿತಿ ನೀಡಲು ಕೇಂದ್ರ ನಕಾರ

ಕೊರೊನಾದಿಂದ ಸಾವನ್ನಪ್ಪಿದ ಸಾರಿಗೆ ನೌಕರರ ಕುಟುಂಬಕ್ಕೆ ತಲಾ ₹30 ಲಕ್ಷ ಪರಿಹಾರ ಕಲ್ಪಿಸುವುದಾಗಿ ತಿಳಿಸಿ ಸಾರಿಗೆ ಇಲಾಖೆ 2021ರ ಫೆಬ್ರವರಿ 10ರಂದು ಸುತ್ತೋಲೆ ಹೊರಡಿಸಿತ್ತು. ಮಾಹಿತಿ ಹಕ್ಕು ಕಾಯಿದೆ ಅಡಿ ಪಡೆದ ಮಾಹಿತಿ ಪ್ರಕಾರ 2020ರ ಮಾರ್ಚ್‌ನಿಂದ 2021ರ ಜೂನ್‌ವರಗೆ ಕೊರೊನಾದಿಂದ ನಾಲ್ಕು ಸಾರಿಗೆ ನಿಗಮಗಳ 351 ನೌಕರರು ಮೃತಪಟ್ಟಿದ್ದಾರೆ. ಸಾರಿಗೆ ನಿಗಮಗಳ ನೌಕರರು ಕೋವಿಡ್‌ನಿಂದ ಮೃತಪಟ್ಟ ಪ್ರಕರಣಗಳ ಸಂಬಂಧ ಮೃತ ನೌಕರರ ಕುಟುಂಬ ಸದಸ್ಯರು ಅಥವಾ ಅವಲಂಬಿತರಿಗೆ ಯಾವುದೇ ವಿಳಂಬವಿಲ್ಲದೆ ಕೂಡಲೇ ಪರಿಹಾರ ಹಣವನ್ನು ಪಾವತಿಸುವುದನ್ನು ಖಾತರಿಪಡಿಸಬೇಕು. ಸಾರಿಗೆ ನೌಕರರ ಕುಟುಂಬಗಳಿಗೆ ಪರಿಹಾರ ವಿತರಿಸಲು ಅಗತ್ಯ ಹಣಕಾಸು ಬಿಡುಗಡೆ ಮಾಡಲು ಸರ್ಕಾರ ಮತ್ತು ಸಾರಿಗೆ ನಿಗಮಗಳಿಗೆ ನಿರ್ದೇಶಿಸಬೇಕು” ಎಂದು ಅರ್ಜಿದಾರರು ಕೋರಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...