ತುಮಕೂರು ವಿವಿ | ಪಿಎಚ್‌ಡಿ ಸಂಶೋಧನಾರ್ಥಿಗಳಿಗೆ ಬೋಧನಾ ಕಾರ್ಯಕ್ಕೆ ಆದೇಶ; ವಿರೋಧ

Date:

ಪಿಎಚ್‌ಡಿ ಸಂಶೋಧನಾರ್ಥಿಗಳು ಪದವಿ ಕಾಲೇಜುಗಳಲ್ಲಿ ವಾರಕ್ಕೆ ನಾಲ್ಕರಿಂದ ಆರು ಗಂಟೆಗಳ ಕಾಲ ಬೋಧನೆ ಮಾಡಬೇಕೆಂದು ತುಮಕೂರು ವಿಶ್ವವಿದ್ಯಾಲಯವು ಆದೇಶ ಹೊರಡಿಸಿದೆ. ಸಂಶೋಧನಾರ್ಥಿಗಳು ಬೋಧನೆ ಮಾಡಲೇಬೇಂಕೆಂಬ ನಿಯಮವಿಲ್ಲ. ಬೋಧನೆ ಮಾಡುವ ಬಗ್ಗೆ ಸಂಶೋಧನಾರ್ಥಿಗಳು ಮತ್ತು ಅವರ ಮಾರ್ಗದರ್ಶಕರು ನಿರ್ಧರಿಸಬೇಕೇ ಹೊರತು, ವಿಶ್ವವಿದ್ಯಾಲಯವಲ್ಲ ಎಂದು ಪಿಎಚ್‌ಡಿ ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತುಮಕೂರು ವಿಶ್ವವಿದ್ಯಾಲಯದ ಕುಲಪತಿಗಳ ಒಪ್ಪಿಗೆ ಮೇರೆಗೆ ಕುಲ ಸಚಿವರು ಅ.6ರಂದು ಆದೇಶ ಹೊರಡಿಸಿದ್ದು, “ಯುಜಿಸಿ ರೆಗ್ಯುಲೇಷನ್ಸ್‌-2022ರ ಅನ್ವಯ ಪಿಎಚ್‌ಡಿ ಸಂಶೋಧನಾರ್ಥಿಗಳಿಗೆ ಸಂಬಂಧಿಸಿದ ಪಿಎಚ್‌ಡಿ ವಿಷಯದಲ್ಲಿ ಬೋಧನಾ ತರಬೇತಿ ಪಡೆಯಲು ಅನುಕೂಲವಾಗುವಂತೆ 4-6 ಗಂಟೆಗಳ ಕಾರ್ಯಭಾರ ನೀಡುವಂತೆ ತಿಳಿಸಲಾಗಿದೆ. ಸಂಶೋಧನಾರ್ಥಿಗಳು ಪದವಿ ಕಾಲೇಜುಗಳಲ್ಲಿ ಬೋಧನಾ ಕಾರ್ಯಭಾರ ನಿರ್ವಹಿಸಬೇಕು” ಎಂದು ಆದೇಶಿಸಿದ್ದಾರೆ.

ಆದೇಶ ಪತ್ರದಲ್ಲಿ 59 ಸಂಶೋಧನಾರ್ಥಿಗಳ ಹೆಸರನ್ನು ಪಟ್ಟಿ ಮಾಡಲಾಗಿದ್ದು, ಅವರೆಲ್ಲರನ್ನೂ ವಿವಿಧ ಕಾಲೇಜುಗಳಲ್ಲಿ ವಿವಿಧ ಕೋರ್ಸ್‌ಗಳ ವಿದ್ಯಾರ್ಥಿಗಳಿಗೆ ಬೋಧನೆ ಮಾಡುವಂತೆ ಸೂಚನೆ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಶ್ವವಿದ್ಯಾಲಯದ ಆದೇಶದಿಂದ ಸಂಶೋಧನಾರ್ಥಿಗಳು ಅಸಮಾಧಾನಗೊಂಡಿದ್ದಾರೆ. “ಯುಜಿಸಿ ನಿಯಮಾವಳಿಗಳ ಪ್ರಕಾರ, ‘ಪಿಎಚ್‌ಡಿ ಸಂಶೋಧನಾರ್ಥಿಗಳು ಅಗತ್ಯಬಿದ್ದರೆ ಮಾತ್ರವೇ ಬೋಧನೆ ಮಾಡಬಹುದು’. ಆದರೆ, ವಿಶ್ವವಿದ್ಯಾಲಯವು ಕಡ್ಡಾಯವಾಗಿ ಬೋಧನೆ ಮಾಡಬೇಕೆಂದು ಹೇಳುತ್ತಿದೆ. ಇದು ಯುಜಿಸಿ ನಿಮಯಗಳಿಗೆ ವಿರುದ್ಧವಾಗಿದೆ ಮತ್ತು ಅತಿಥಿ ಉಪನ್ಯಾಸಕರಾಗಲು ಅರ್ಜಿ ಸಲ್ಲಿಸಿರುವವರಿಗೆ ಅನ್ಯಾಯ ಮಾಡುತ್ತದೆ” ಎಂದು ಹೇಳಿದ್ದಾರೆ.

ಆದೇಶ ಪ್ರತಿ ನೋಡಲು ಇಲ್ಲಿ ಕ್ಲಿಕ್ಕಿಸಿ

ವಿಶ್ವವಿದ್ಯಾಲಯದ ಆದೇಶಕ್ಕೆ ಸಂಬಂಧಿಸಿದಂತೆ ಈದಿನ.ಕಾಮ್‌ ಜೊತೆ ಮಾತನಾಡಿದ ಹೆಸರು ಹೇಳಲಿಚ್ಚಿಸದ ಪಿಎಚ್‌ಡಿ ಸಂಶೋಧನಾರ್ಥಿಯೊಬ್ಬರು, “ಯುಜಿಸಿ ಗೈಡ್‌ಲೈನ್ಸ್‌ ಪ್ರಕಾರ, ಯಾರು ಪುಲ್‌ಟೈಮ್ ಸಂಶೋಧನಾರ್ಥಿ ಆಗಿರುತ್ತಾರೆಯೋ, ಅವರು ತಮ್ಮ ವಿಷಯಕ್ಕೆ ಸಂಬಂಧಿಸಿದಂತೆ ಪೂರಕವಾಗಿ 4-6 ಗಂಟೆಗಳ ಕಾಲ ಬೋಧನೆ, ಬರವಣಿಗೆ, ಸೆಮಿನಾರ್‌ಗಳನ್ನು ನೀಡಬೇಕು. ಅದು ಅಗತ್ಯವಿದ್ದರೆ ಮಾತ್ರ – ಕಡ್ಡಾಯವಲ್ಲ ಎಂದು ಹೇಳಲಾಗಿದೆ. ಬೋಧನೆ ಮಾಡುವ ಬಗ್ಗೆ ವಿಷಯ ವಿಭಾಗಗಳು, ಮಾರ್ಗದರ್ಶಕರು ಅಥವಾ ಸಂಶೋಧನಾ ಕಮಿಟಿಗಳು ಬಗ್ಗೆ ನಿರ್ಮಾನ ತೆಗೆದುಕೊಳ್ಳಬೇಕು. ವಿಶ್ವವಿದ್ಯಾಲಯಗಳಲ್ಲ” ಎಂದು ಹೇಳಿದ್ದಾರೆ.

phd

“ನಾವು ನಮ್ಮ ಮಾರ್ಗದರ್ಶಕರ ಅಡಿಯಲ್ಲಿ ಅವರು ಬೋಧಿಸುತ್ತಿದ್ದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ತರಗತಿಗಳನ್ನು ತೆಗೆದುಕೊಳ್ಳುತ್ತಿದ್ದೆವು. ಅದೂ, ನಮ್ಮ ಸಂಶೋಧನಾ ವಿಷಯಕ್ಕೆ ಸಂಬಂಧಿಸಿದ ತರಗತಿಗಳನ್ನು ಮಾತ್ರವೇ ತೆಗೆದುಕೊಳ್ಳುತ್ತಿದ್ದೆವು. ಅದಕ್ಕೆ ನಮ್ಮ ಮಾರ್ಗದರ್ಶಕರು ಸಲಹೆಗಳನ್ನು ನೀಡುತ್ತಿದ್ದರು. ಆದರೆ, ಈಗ ವಿಶ್ವವಿದ್ಯಾಲಯವು ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಪಾಠ ಮಾಡಲು ಹೇಳುತ್ತಿದೆ. ಅಲ್ಲಿ ನಮ್ಮ ಸಂಶೋಧನಾ ವಿಷಯಕ್ಕೆ ಸಂಬಂಧಿಸಿದ ವಿಷಯಗಳಿರುವುದಿಲ್ಲ. ನಾನು ಅದಕ್ಕಾಗಿ ತಯಾರಿ ನಡೆಸಬೇಕಾಗುತ್ತದೆ. ಇದರಿಂದ ನಮ್ಮ ಸಂಶೋಧನೆಗೆ ತೊಡಕಾಗುತ್ತದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಪ್ರಧಾನಿ ಮೋದಿ ಹೇಳಿದರೂ ಈ ಸಿನಿಮಾವನ್ನು ನೋಡುವವರೇ ಇಲ್ಲ!

“ನಮ್ಮ ಮಾರ್ಗದರ್ಶಕರು ಹಾಗೂ ಎಚ್‌ಒಡಿಗಳು ಆದೇಶವು ವಿಶ್ವವಿದ್ಯಾಲಯದಿಂದ ಬಂದಿರುವ ಕಾರಣ, ಅದರಂತೆ ಕಾರ್ಯನಿರ್ವಹಿಸಿ ಎನ್ನುತ್ತಿದ್ದಾರೆ. ಆದರೆ, ನಮಗೆ ಅದು ಕಷ್ಟದ ಕೆಲಸವಾಗಿದೆ. ಪಿಎಚ್‌ಡಿ ಸಂಶೋಧನಾರ್ಥಿಗಳೆಲ್ಲರೂ ಸೇರಿ ಸೋಮವಾರ ಕುಲಪತಿಗಳನ್ನು ಭೇಟಿ ಮಾಡಿದ್ದೇವೆ. ಆದರೆ, ಅವರು ಸರಿಯಾಗಿ ಸ್ಪಂದಿಸಲಿಲ್ಲ. ಉದಾಸೀನವಾಗಿ ಮಾತನಾಡಿದ್ದಾರೆ. ಬೋಧನೆ ಮಾಡಲೇಬೇಕೆಂದು ಹೇಳುತ್ತಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಪದವಿ ತರಗತಿಗಳಿಗೆ ಸಂಶೋಧನಾರ್ಥಿಗಳು ಬೋಧನೆ ಮಾಡುವುದರಿಂದ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವವರಿಗೆ ಅನ್ಯಾಯವಾಗುತ್ತದೆ. ಈಗಾಗಲೇ, ಸುಮಾರು 50 ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳುವ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿದ್ದಾರೆ. ಆ ಹುದ್ದೆಗಳ ಬದಲಾಗಿ, ಸಂಶೋಧನಾರ್ಥಿಗಳಿಂದ ಪಾಠ ಮಾಡಿಸಲು ವಿಶ್ವವಿದ್ಯಾಲಯ ಮುಂದಾಗಿದೆ. ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳೂ ಕುಲಪತಿಗಳನ್ನು ಭೇಟಿ ಮಾಡಿದ್ದಾರೆ. ಅವರಿಗೂ ಸರಿಯಾದ ಸ್ಪಂದನೆ ಸಿಕ್ಕಿಲ್ಲವೆಂದು ತಿಳಿದುಬಂದಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...