ತುಂಗಭದ್ರಾ ಜಲಾಶಯ ಭರ್ತಿಗೆ 1.94 ಅಡಿ ಬಾಕಿ; ನೀರು ಹೊರಬಿಡುವ ಸೂಚನೆ ಕೊಟ್ಟ ಮಂಡಳಿ

Date:

ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಮುರಿದು, ಕೊಚ್ಚಿ ಹೋದ ಪರಿಣಾಮ 40 ಟಿಎಂಸಿಯಷ್ಟು ಖಾಲಿಯಾಗಿದ್ದ ನೀರು ಗೇಟ್‌ ದುರಸ್ತಿ ನಂತರ ಜಲಾಶಯದಲ್ಲಿ 98.10 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ.

ತುಂಗಭದ್ರಾ ಅಣೆಕಟ್ಟೆ ಭರ್ತಿಯಾಗಲು 1.94 ಅಡಿಯಷ್ಟೇ ಬಾಕಿ ಉಳಿದಿದ್ದು, ಅಣೆಕಟ್ಟೆಯ ಸುರಕ್ಷತೆಯ ದೃಷ್ಟಿಯಿಂದ ಯಾವುದೇ ಕ್ಷಣದಲ್ಲಿ ಕೆಲವು ಕ್ರಸ್ಟ್‌ಗೇಟ್‌ಗಳನ್ನು ತೆರೆದು ನೀರನ್ನು ನದಿಗೆ ನೀರು ಹರಿಸಬಹುದು.

ಅಣೆಕಟ್ಟೆಯ ಗರಿಷ್ಠ ಮಟ್ಟ 1,633 ಅಗಿದ್ದು, ಸೋಮವಾರ ಬೆಳಿಗ್ಗೆ 1,631.06 ಅಡಿಯಷ್ಟು ನೀರಿನ ಮಟ್ಟ ಇದೆ. 105.78 ಟಿಎಂಸಿ ಅಡಿ ಸಂಗ್ರಹ ಸಾಮರ್ಥ್ಯದ ಜಲಾಶಯ ಭರ್ತಿಗೆ ಇನ್ನು ಏಳು ಟಿಎಂಸಿ ಅಡಿ ನೀರು ಬೇಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೂರು ದಿನದೊಳಗೆ ಜಲಾಶಯ ಸಂಪೂರ್ಣ ಭರ್ತಿಯಾಗಲಿದೆ ಎಂದು ಮಂಡಳಿ ತಿಳಿಸಿದೆ. ಳಹರಿವು ಅಧಿಕ ಇರುವ ಸ್ಥಿತಿಯಲ್ಲಿ ಅಣೆಕಟ್ಟೆ ಸಂಪೂರ್ಣ ಭರ್ತಿಯಾಗುವ ತನಕ ಕಾಯದೆ, ಅದಕ್ಕಿಂತ ಮೊದಲೇ ನೀರನ್ನು ನದಿಗೆ ಹರಿಸುವ ಪರಿಪಾಠ ಇದೆ. ಜುಲೈ 22ರಂದು ಜಲಾಶಯದಲ್ಲಿ 98 ಟಿಎಂಸಿ ಅಡಿಯಷ್ಟು ನೀರಿದ್ದಾಗಲೇ ಮತ್ತು ಒಳಹರಿವಿನ ಪ್ರಮಾಣ ಲಕ್ಷದಷ್ಟು ಇದ್ದ ಕಾರಣ 3 ಕ್ರಸ್ಟ್‌ಗೇಟ್‌ಗಳನ್ನು ತೆರೆದು ನದಿಗೆ ನೀರು ಹರಿಸಲಾಗಿತ್ತು.

ಎರಡು ದಿನಗಳಿಂದ ಅಣೆಕಟ್ಟೆಯಲ್ಲಿ ನೀರಿನ ಮಟ್ಟ ಕಾಯ್ದುಕೊಳ್ಳುವ ಸಲುವಾಗಿ ಕ್ರಸ್ಟ್‌ ಗೇಟ್ ತೆರೆಯದೆ, ಅಧಿಕ ಜಲವಿದ್ಯುತ್ ಉತ್ಪಾದನೆ ಮಾಡುವ ಮೂಲಕ ಸುಮಾರು 5 ಸಾವಿರ ಕ್ಯುಸೆಕ್‌ನಷ್ಟು ನೀರನ್ನು ನದಿಗೆ ಹರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಅಧಿಕ ನೀರು ಹೊರಬಿಡುವ ಸಂದರ್ಭ ಎದುರಾದಾಗ ಕ್ರಸ್ಟ್‌ಗೇಟ್‌ ತೆರೆಯುವುದು ಅನಿವಾರ್ಯವಾಗಲಿದೆ. ಮಂಡಳಿ ಕೂಡ ಅಧಿಕೃತ ಪ್ರಕಟಣೆ ಹೊರಡಿಸಿ ನದಿ ಪಾತ್ರದ ಜನ ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...