ವಿಜಯಪುರ ವಿಮಾನ ನಿಲ್ದಾಣಕ್ಕೆ ಆಸ್ಟ್ರಿಯಾದಿಂದ ಬಂದಿಳಿದ ಎರಡು ಅತ್ಯಾಧುನಿಕ ಅಗ್ನಿಶಾಮಕ ವಾಹನ

Date:

ವಿಜಯಪುರದಲ್ಲಿ ಉದ್ಘಾಟನೆಗೆ ಸಜ್ಜಾಗಿರುವ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣಕ್ಕೆ ಅಗತ್ಯವಾದ ಎರಡು ಅತ್ಯಾಧುನಿಕ ಅಗ್ನಿಶಾಮಕ ವಾಹನಗಳು ಆಸ್ಟ್ರಿಯಾದಿಂದ ಸೋಮವಾರ ಬಂದು ತಲುಪಿವೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಅವರು, “ಈ ಅಗ್ನಿಶಾಮಕ ವಾಹನಗಳು ಕಂಪ್ಯೂಟರೀಕೃತವಾಗಿದ್ದು, ಜಾಗತಿಕ ಟೆಂಡರ್ ಅಡಿಯಲ್ಲಿ ಆಸ್ಟ್ರಿಯಾದಿಂದ ಪೂರೈಕೆಯಾಗಿವೆ. ಇವುಗಳ ಬೆಲೆ ಅಂದಾಜು 24 ಕೋಟಿ ರೂಪಾಯಿ. ಇವು ತುರ್ತು ಸಂದರ್ಭಗಳಲ್ಲಿ 160 ಮೀಟರಿನವರೆಗೂ ನೀರನ್ನು ಹಾಯಿಸಿ, ಬೆಂಕಿಯನ್ನು ನಂದಿಸುವ ಸಾಮರ್ಥ್ಯ ಹೊಂದಿವೆ. ಈ ಮೂಲಕ ನಾಗರಿಕ ವಿಮಾನಯಾನ ಮಹಾ‌ ನಿರ್ದೇಶನಾಲಯ ಮತ್ತು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು ಹೇಳಿದ್ದ ಮತ್ತೊಂದು ಅಗತ್ಯ ಪೂರೈಸಲಾಗಿದೆ” ಎಂದಿದ್ದಾರೆ.

“ಈ ಅಗ್ನಿಶಾಮಕ ವಾಹನಗಳು ನೆಲದ ಮೇಲಿನ‌ ಬೆಂಕಿಯನ್ನು ನಂದಿಸಿಕೊಂಡು ವೇಗದಿಂದ ಮುನ್ನುಗ್ಗಬಲ್ಲವು. ವಿಜಯಪುರ ವಿಮಾನ ನಿಲ್ದಾಣದ ಮೂಲ ವಿನ್ಯಾಸದಲ್ಲಿ ಈ ಸೌಲಭ್ಯಗಳು ಇರಲಿಲ್ಲ. ಆಮೇಲೆ ಇದರ ಜತೆಗೆ ಇನ್ನೂ ಹಲವು ಅನುಕೂಲಗಳನ್ನು ಸೇರಿಸಲಾಯಿತು. ಆಸ್ಟ್ರಿಯಾದಿಂದ ಹಡಗಿನಲ್ಲಿ ಮುಂಬೈಗೆ ಬಂದಿಳಿದ ಈ ವಾಹನಗಳನ್ನು, ಅಲ್ಲಿಂದ ಟ್ರಕ್ ಮೂಲಕ ವಿಜಯಪುರಕ್ಕೆ ಸಾಗಿಸಿಕೊಂಡು ಬರಲಾಗಿದೆ”‌ ಎಂದು ಅವರು ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಗ್ನಿಶಾಮಕ ವಾಹನಗಳು ಬಂದಿರುವುದರಿಂದ ವಿಮಾನ ನಿಲ್ದಾಣ ಉದ್ಘಾಟನೆಯತ್ತ ಮತ್ತೊಂದು ಹೆಜ್ಜೆ ಮುಂದಿಡಲಾಗಿದೆ. ಪರಿಸರ ಸಂಬಂಧಿ ಅನುಮತಿ ಮಾತ್ರ ಬಾಕಿ ಇದ್ದು, ಅದನ್ನು ಪಡೆದುಕೊಳ್ಳಲು ಕೂಡ ಪ್ರಯತ್ನಿಸಲಾಗುತ್ತಿದೆ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ವಿಜಯಪುರ | ಪುಸ್ತಕ ಮೇಳದ ವಾಲ್ ಪೋಸ್ಟರ್‌ ಬಿಡುಗಡೆ

ಮೇ ಸಾಹಿತ್ಯ ಮೇಳ ವಿಜಯಪುರ ಬಳಗ, ದಲಿತ ಮತ್ತು ಪ್ರಗತಿಪರ ಸಂಘಟನೆಗಳ...