ಉಡುಪಿ | ಎಕೆಎಂಎಸ್ ಸಾರಿಗೆ ಸಂಸ್ಥೆಯ ಮಾಲೀಕ ಸೈಫುದ್ದೀನ್ ತನ್ನ ಡ್ರೈವರ್‌ಗಳಿಂದಲೇ ಬರ್ಬರ ಹತ್ಯೆ

Date:

ಉಡುಪಿಯ ಪ್ರಸಿದ್ಧ ಎಕೆಎಂಎಸ್ ಸಾರಿಗೆ ಸಂಸ್ಥೆಯ ಮಾಲೀಕ ಸೈಫುದ್ದೀನ್ (47) ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ತನ್ನ ಒಡೆತನದ ಬಸ್ ಸಂಸ್ಥೆಯ ಡ್ರೈವರ್‌ಗಳಿಂದಲೇ ಅವರು ಕೊಲೆಯಾಗಿದ್ದಾರೆ ಎನ್ನುವ ಮಾಹಿತಿ ವ್ಯಕ್ತವಾಗಿದೆ.

ಮಲ್ಪೆ- ಕೊಡವೂರು ರಸ್ತೆ ಪ್ರದೇಶದಲ್ಲಿ ಘಟನೆ ನಡೆದಿದೆ. ಘಟನೆಯ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ.
ಕೊಡವೂರಿನಲ್ಲಿ ಸೈಫುದ್ದೀನ್ ಇತ್ತೀಚೆಗೆ ಮನೆ ಖರೀದಿ ಮಾಡಿದ್ದು, ಮನೆಗೆ ನುಗ್ಗಿದ ಆರೋಪಿಗಳು ಕಡಿದು ಕೊಂದಿದ್ದಾರೆ. ಮನೆಯಲ್ಲಿ ರಕ್ತ ತುಂಬಿ ಹೋಗಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಒಂದಿಷ್ಟು ಮಾಹಿತಿಗಳು ಹೊರಬರುತ್ತಿದ್ದು, ತನ್ನ ಒಡೆತನದ ಬಸ್ ಸಂಸ್ಥೆಯ ಡ್ರೈವರ್ ಗಳಿಂದಲೇ ಸೈಫುದ್ದೀನ್ ಕೊಲೆಯಾಗಿದ್ದಾರೆ ಎನ್ನಲಾಗಿದೆ. ಉಡುಪಿ ಎಸ್ ಪಿ ಹರಿರಾಮ್ ಶಂಕರ್ ಹೇಳಿಕೆ ನೀಡಿದ್ದು, ಪ್ರಾಥಮಿಕ ತನಿಖೆಯಲ್ಲಿ ಇದು ಅವರ ಸಂಸ್ಥೆಯ ಸಿಬ್ಬಂದಿಯ ಕೃತ್ಯ ಎಂದು ಕಂಡುಬಂದಿದೆ ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
udupi 1 1

ಉಡುಪಿಯ ಕೊಡವೂರು ಸಾಲ್ಮರದಲ್ಲಿರುವ ಸೈಫುದ್ದೀನ್ ಮನೆಯಲ್ಲಿ ಶನಿವಾರ (ಸೆ.27) ಬೆಳಗ್ಗೆ 10ರಿಂದ 11 ಗಂಟೆ ಸುಮಾರಿಗೆ ಹತ್ಯೆ ಮಾಡಲಾಗಿದೆ. ಸೈಫುದ್ದೀನ್ ವಿರುದ್ಧ 18 ಕ್ರಿಮಿನಲ್ ಕೇಸುಗಳಿವೆ. ಹಿರಿಯಡ್ಕ ಠಾಣೆ ಮತ್ತು ಉಡುಪಿ ಠಾಣೆಯಲ್ಲಿ ರೌಡಿಶೀಟ್ ತೆರೆಯಲಾಗಿದೆ. ಸೈಫ್ ಎರಡು ಕೊಲೆ ಪ್ರಕರಣದ ಆರೋಪಿ ಎಂದು ಎಸ್ ಪಿ ಮಾಹಿತಿ ನೀಡಿದ್ದಾರೆ.

ಮೂವರು ದುಷ್ಕೃತ್ಯ ಕೃತ್ಯ ಎಸಗಿರುವ ಶಂಕೆಯಿದೆ. ಮೂರು ಜನ ಆರೋಪಿಗಳು ಏಕಕಾಲದಲ್ಲಿ ಅಟ್ಯಾಕ್ ಮಾಡಿದ್ದಾರೆ. ಎಲ್ಲಾ ಆರೋಪಿಗಳು ಅವರದೇ ಬಸ್ ಸಂಸ್ಥೆಯಲ್ಲಿ ಉದ್ಯೋಗಿಗಳು ಎಂದು ತಿಳಿದುಬಂದಿದೆ. ಕೊಲೆಗೆ ಕಾರಣ ಮತ್ತು ಆರೋಪಿಗಳ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ ಎಂದು ಎಸ್ ಪಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...