ರಾಜ್ಯದ ಹೋಟೆಲ್​, ಉಪಾಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ: ಸಚಿವ ದಿನೇಶ್ ಗುಂಡೂರಾವ್

Date:

ಗ್ರಾಹಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿರುವುದರ ಹಿನ್ನೆಲೆಯಲ್ಲಿ ರಾಜ್ಯದ ಹೋಟೆಲ್​, ಉಪಾಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ​ ನಿಷೇಧಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗುರುವಾರ ಘೋಷಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಕೆಲವು ಹೋಟೆಲ್ ಹಾಗೂ ಉಪಾಹಾರ ಕೇಂದ್ರಗಳಲ್ಲಿ ಇಡ್ಲಿ ತಯಾರಿಸಲು ಪ್ಲಾಸ್ಟಿಕ್ ಹಾಳೆಗಳನ್ನು ಬಳಸಲಾಗುತ್ತಿದ್ದು, ಅದರಿಂದಾಗಿ ಗ್ರಾಹಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿರುವುದು ಬೆಳಕಿಗೆ ಬಂದಿದೆ. ಬೆಂಗಳೂರಿನ ವಿವಿಧೆಡೆಯಿಂದ ಸಂಗ್ರಹಿಸಲಾದ ಇಡ್ಲಿ ಮಾದರಿಗಳಲ್ಲಿ ಸುಮಾರು ಶೇ. 51 ರಷ್ಟು ಅಸುರಕ್ಷಿತ ಎಂಬುದು ಆಹಾರ ಇಲಾಖೆಯ ಪ್ರಯೋಗಾಲಯದಲ್ಲಿ ದೃಢಪಟ್ಟ ಬೆನ್ನಲ್ಲೇ ಕರ್ನಾಟಕ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಹೋಟೆಲ್​, ರಸ್ತೆಬದಿ ತಿಂಡಿ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಕವರ್ ಬಳಸುವಂತಿಲ್ಲ. ಇನ್ನು ಮುಂದೆ ಆಹಾರ ತಯಾರಿಕೆ, ವಿತರಣೆ ವೇಳೆ ಪ್ಲಾಸ್ಟಿಕ್ ಬಳಸಬಾರದು ಎಂದು ಗುಂಡೂರಾವ್ ಹೇಳಿದ್ದಾರೆ.

ಸುಮಾರು 251 ತಿಂಡಿ ಹೋಟೆಲ್, ಅಂಗಡಿಗಳಿಂದ ಮಾದರಿಗಳನ್ನು ಪಡೆಯಲಾಗಿತ್ತು. ಅವುಗಳ ಪೈಕಿ 51 ಕಡೆ ಸಂಗ್ರಹಿಸಿದ್ದ ಮಾದರಿಗಳು ಅಸುರಕ್ಷಿತ ಎಂಬುದು ಪ್ರಯೋಗಾಲಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಅವುಗಳಲ್ಲಿ ಕಾರ್ಸಿನೋಜೆನಿಕ್ ಅಂಶ ಪತ್ತೆಯಾಗಿದೆ. ಪ್ಲಾಸ್ಟಿಕ್​ ಬಳಕೆಯಿಂದ ಇಡ್ಲಿಯಲ್ಲಿ ಕಾರ್ಸಿನೋಜೆನಿಕ್ ಅಂಶ ಸೇರಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕ್ಯಾನ್ಸರ್​ಗೆ ಕಾರಣವಾಗುವ ಕಾರ್ಸಿನೋಜೆನಿಕ್​​

ಈ ಮೊದಲು ಹೋಟೆಲ್​ಗಳಲ್ಲಿ ಇಡ್ಲಿ ತಯಾರಿಗೆ ಹತ್ತಿ ಬಟ್ಟೆ ಬಳಕೆ ಮಾಡಲಾಗುತ್ತಿತ್ತು. ಆದರೆ ಈಗ ಹೆಚ್ಚಿನ ಕಡೆ ಹೋಟೆಲ್​ಗಳಲ್ಲಿ ಪ್ಲಾಸ್ಟಿಕ್ ಬಳಸುತ್ತಿದ್ದಾರೆ. ಇದರಿಂದ ಅನಾರೋಗ್ಯಕ್ಕೆ ಕಾರಣವಾದ ಕಾರ್ಸಿನೋಜೆನಿಕ್ ಅಂಶ ಮಿಶ್ರಣವಾಗುತ್ತಿದೆ. ಪ್ಲಾಸ್ಟಿಕ್ ಬಳಕೆಯಿಂದ ಇಡ್ಲಿಯಲ್ಲಿ ಕಾರ್ಸಿನೋಜೆನಿಕ್ ಅಂಶ ಮಿಶ್ರಣವಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಅಲ್ಲದೆ, ಕಾರ್ಸಿನೋಜೆನಿಕ್ ಅಂಶ ಕ್ಯಾನ್ಸರ್​​ಗೆ ಕಾರಣವಾಗುತ್ತದೆ ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸಿಸಿಎಲ್ 2025 | ಕರ್ನಾಟಕ – ಪಂಜಾಬ್‌ ಆಟಗಾರರ ನಡುವೆ ಗಲಾಟೆ; ಸಿಟ್ಟಿಗೆದ್ದ ಸುದೀಪ್

ಬೆಂಗಳೂರಿನ ಅನೇಕ ಹೋಟೆಲ್‌ಗಳಲ್ಲಿ ತಯಾರಾಗುವ ಇಡ್ಲಿ ಅಸುರಕ್ಷಿತ ಎಂಬುದು ಆಹಾರ ಇಲಾಖೆಯ ಪ್ರಯೋಗದಲ್ಲಿ ದೃಢಪಟ್ಟ ತಕ್ಷಣವೇ ಆರೋಗ್ಯ ಸಚಿವರು ಆ ಬಗ್ಗೆ ಕ್ರಮಕ್ಕೆ ಮುಂದಾಗಿದ್ದಾರೆ.

ಬೆಂಗಳೂರಿನ ಹಲವಡೆ ಇತ್ತೀಚೆಗೆ ಇಡ್ಲಿ ತಯಾರಿಸಲು ಬಟ್ಟೆಯ ಬದಲು ಪ್ಲಾಸ್ಟಿಕ್ ಕವರ್‌ ಬಳಕೆ ಮಾಡಲಾಗುತ್ತಿದೆ. ಪ್ಲಾಸ್ಟಿಕ್ ಹಾಳೆಯು ಶಾಖಕ್ಕೆ ಒಡ್ಡಿಕೊಂಡು ಹಾನಿಕಾರಕ ವಸ್ತುವನ್ನು ಹೊರಸೂಸುತ್ತಿದೆ. ಇದು ಕ್ಯಾನ್ಸರ್ ಕಾರಕವಾಗಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡಿದ್ದ ಆರೋಗ್ಯ ಇಲಾಖೆ ಅನೇಕ ಕಡೆಗಳಿಂದ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಿತ್ತು. ಆ ಪೈಕಿ ಸುಮಾರು ಶೇ. 50 ರಷ್ಟು ಮಾದರಿಗಳ​ ವರದಿ ಬಂದಿದ್ದು, ಕಾರ್ಸಿನೋಜೆನಿಕ್ ಅಂಶ ಪತ್ತೆಯಾಗಿದೆ. ಇಡ್ಲಿ ಮಾದರಿಗಳು ಅಸುರಕ್ಷಿತ ಎಂಬುದು ಗೊತ್ತಾಗಿದೆ. ಉಳಿದ ಮಾದರಿಗಳು​​ ವರದಿಗಾಗಿ ಕಾಯಲಾಗುತ್ತಿದೆ ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...