ಭವಿಷ್ಯದಲ್ಲಿ ಎಲೆಕ್ಟ್ರಿಕ್‌ ವಾಹನಗಳಿಗೆ ಮಾತ್ರ ಅನುಮತಿಸಿ: ಸಾರಿಗೆ ಸಚಿವರಿಗೆ ಆರೋಗ್ಯ ಸಚಿವ ಗುಂಡೂರಾವ್ ಪತ್ರ

Date:

ಭವಿಷ್ಯದಲ್ಲಿ ನಗರದಲ್ಲಿ ಕಾಯ ನಿರ್ವಹಿಸುವ ಎಲ್ಲ ಸಾರಿಗೆ, ಆಟೋ,ಕ್ಯಾಬ್‌,ಟ್ಯಾಕ್ಸಿ, ಸರಕು ಆಟೋಗಳು, ಘನತ್ಯಾಜ್ಯ ಸಂಗ್ರಹಣೆ ವಾಹನಗಳಿಗೆ ಅನುಮತಿ ನೀಡುವಾಗ ಅವುಗಳು ಎಲೆಕ್ಟ್ರಿಕ್‌ ವಾಹನಗಳಾಗಿದ್ದಲ್ಲಿ ಮಾತ್ರ ಅನುಮತಿ ನೀಡಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪತ್ರ ಬರೆದಿದ್ದಾರೆ.

ವಾಯು ಮಾಲಿನ್ಯ ಜಗತ್ತಿನಲ್ಲಿ ಸರ್ವೇ ಸಾಮಾನ್ಯವಾಗಿದ್ದು, ಇದು ಸಾರ್ವಜನಿಕರ ಆರೋಗ್ಯದ ಮೇಲೆ ನೇರ ದುಷ್ಪರಿಣಾಮ ಬೀರುತ್ತಿದೆ. ಹೆಚ್ಚಿನ ಜನರು ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಹಾಗಾಗಿ, ಭವಿಷ್ಯದ ದೃಷ್ಟಿಯಿಂದ ಎಲೆಕ್ಟ್ರಿಕ್‌ ವಾಹನಗಳಿಗೆ ಮಾತ್ರ ಅನುಮತಿಸಬೇಕು ಎಂದು ಪತ್ರದಲ್ಲಿ ಆರೋಗ್ಯ ಸಚಿವರು ಉಲ್ಲೇಖಿಸಿದ್ದಾರೆ.

ಅಲ್ಲದೇ ಪತ್ರದಲ್ಲಿ, “ಸಾಂಪ್ರಾದಾಯಿಕ ಇಂಧನಗಳಿಂದ ಚಲಿಸುವ ವಾಹನಗಳ ಬಳಕೆಯಿಂದಾಗಿ ವಾಯು ಮಾಲಿನ್ಯ ಜಗತ್ತಿನಲ್ಲಿ ಸರ್ವೇ ಸಾಮಾನ್ಯವಾಗಿದೆ. ಇದು ಸಾರ್ವಜನಿಕರ ಆರೋಗ್ಯದ ಮೇಲೆ ನೇರ ದುಷ್ಪರಿಣಾಮ ಬೀರುತ್ತಲೇ ಇದೆ. ವಿಶೇಷವಾಗಿ ಬೆಂಗಳೂರಿನಂತಹ ಮಹಾನಗರಗಳಲ್ಲಿ ಇರುವ ಹೆಚ್ಚಿನ ವಾಹನ ಸಂಖ್ಯೆಯಿಂದಾಗಿ ಮಾಲಿನ್ಯದ ಪ್ರಮಾಣವು ಅಗಾಧವಾಗಿದ್ದು, ನಗರದ ಜನ ಸಾಂದ್ರತೆಯೂ ಹೆಚ್ಚಾಗಿರುವ ಕಾರಣ ಮಾಲಿನ್ಯ ಹೆಚ್ಚು ಜನರನ್ನು ಬಾಧಿಸುತ್ತಲೇ ಇದೆ. ಬೆಂಗಳೂರಿನ ಭೌಗೋಳಿಕ ಸ್ಥಿತಿ ಹಾಗೂ ಹವಾಮಾನಗಳು ವಾಯು ಮಾಲಿನ್ಯಯನ್ನು ಸಂಕೀರ್ಣಗೊಳಿಸುತ್ತವೆ. ದೆಹಲಿಯಂತೆ ವಾಯು ಮಾಲಿನ್ಯಕ್ಕಾಗಿ ಬೆಂಗಳೂರು ಸಹ ಕುಖ್ಯಾತಗೊಳ್ಳುವ ಪೂರ್ವದಲ್ಲಿಯೇ ನಾವು ಎಚ್ಚೆತ್ತುಕೊಳ್ಳುವ ಅಗತ್ಯ ಕಂಡುಬರುತ್ತಿದೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ev

ಪರಿಸರದ ಮೇಲೆ ದೂರಗಾಮಿ ದುಷ್ಪರಿಣಾಮಗಳನ್ನು ಮಿತಿಗೊಳಿಸುವ ನಿಟ್ಟಿನಲ್ಲಿ ವಾಯು ಮಾಲಿನ್ಯವನ್ನು ನಿಯಂತ್ರಿಸಲು ನಮ್ಮ ತಲೆಮಾರು ಕ್ರಮ ಕೈಗೊಳ್ಳಲೇಬೇಕಿದ್ದು ಸರ್ಕಾರ ಈ ಬಗ್ಗೆ ಉತ್ತರದಾಯಿತ್ವವನ್ನು ಕೂಡ ಹೊಂದಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಸಾರಿಗೆಯ ಬಳಕೆಯನ್ನು ಹೆಚ್ಚಿಸುವುದು ಅತ್ಯಗತ್ಯವಾಗಿರುತ್ತದೆ. ಆದರೆ, ಇದರ ಜೊತೆಯಲ್ಲೇ ನಗರದಲ್ಲಿ ವಿದ್ಯುತ್ ಚಾಲಿತ ಇವಿ ವಾಹನಗಳ ಸಂಖ್ಯೆಯನ್ನು ಹೆಚ್ಚಿಸುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಸಾರಿಗೆ ಮೂಲ ಸೌಕರ್ಯವನ್ನು ರೂಪಿಸುವಾಗ ಸಾಂಪ್ರಾದಾಯಿಕ ಇಂಧನಗಳಿಂದ ದೂರ ಸರಿಯುವುದು ಕೇವಲ ವಿಕಲ್ಪವಾಗಿರದೇ ತುರ್ತು ಅಗತ್ಯವಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದ್ದಾರೆ.

ಇದನ್ನು ಓದಿದ್ದೀರಾ? ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪಿಎಚ್‌ಡಿ ಫೆಲೋಶಿಪ್‌: ಆಸಕ್ತರಿಂದ ಅರ್ಜಿ ಆಹ್ವಾನ

ಈ ಹಿನ್ನೆಲೆಯಲ್ಲಿ ಇದಕ್ಕೆ ಪೂರಕವಾಗಿ ಇನ್ನು ಮುಂದೆ ನಗರ ಸಾರಿಗೆ ಬಸ್‌ಗಳನ್ನು ಖರೀದಿಸುವಾಗಿ ಸಹ ಎಲೆಕ್ಟ್ರಿಕ್ ಇಂಧನ ಬಳಸುವ ಇವಿ ಬಸ್‌ಗಳನ್ನು ಮಾತ್ರ ಸಾರಿಗೆ ಸೇವೆಗೆ ಬಳಸಿಕೊಳ್ಳುವುದು ಸೂಕ್ತವೆಂಬುದು ಆರೋಗ್ಯ ಇಲಾಖೆಯ ಅಭಿಪ್ರಾಯವಾಗಿದೆ. ಆದ್ದರಿಂದ ಈ ನಿಟ್ಟಿನಲ್ಲಿ ಸೂಕ್ತ ತೀರ್ಮಾನವನ್ನು ಕೈಗೊಳ್ಳಬೇಕೆಂದು ತಮ್ಮನ್ನು ಕೋರುತ್ತೇನೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...