ವಿಬಿ ಜಿ ರಾಮ್‌ ಜಿ | ಮನರೇಗಾ ಮರು ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್‌ ‘ರಾಜಭವನ ಚಲೋ’

Date:

ಮನರೇಗಾ ಯೋಜನೆಯ ಹೆಸರು ಮತ್ತು ನೀತಿ-ನಿಯಮಗಳನ್ನು ಬದಲಿಸಿ ಕೇಂದ್ರ ಸರ್ಕಾರ ಜಾರಿಗೆ ತರಹೊರಟಿರುವ ‘ವಿಬಿ ಜಿ ರಾಮ್‌ ಜಿ’ ಖಂಡಿಸಿ, ಮನರೇಗಾದ ಮರು ಅನುಷ್ಠಾನಕ್ಕೆ ಆಗ್ರಹಿಸಿ ಕರ್ನಾಟಕದ ಆಡಳಿತಾರೂಢ ಕಾಂಗ್ರೆಸ್‌ ಪ್ರತಿಭಟನೆ ನಡೆಸಿದೆ. ಬೆಂಗಳೂರಿನ ಸ್ವತಂತ್ರ್ಯ ಉದ್ಯಾನವನದಲ್ಲಿ ಕಾಂಗ್ರೆಸ್‌ ‘ರಾಜಭವನ ಚಲೋ’ ಪ್ರತಿಭಟನೆ ನಡೆಸುತ್ತಿದೆ.

ಪ್ರತಿಭಟನೆಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಂದಲೂ ಕಾರ್ಯಕರ್ತರು ಮತ್ತು ಮನರೇಗಾ ಕಾರ್ಮಿಕರು ಬೆಂಗಳೂರಿಗೆ ಬಂದಿದ್ದು, ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಫ್ರೀಡಂ ಪಾರ್ಕ್‌ನಿಂದ ರಾಜಭವನದವರೆಗೆ ಮೆರವಣಿಗೆ ನಡೆಸಿ, ರಾಜಭವನಕ್ಕೆ ಮುತ್ತಿಗೆ ಹಾಕುವುದಾಗಿ ಕಾಂಗ್ರೆಸ್‌ ನಾಯಕರು ಘೋಷಿಸಿದ್ದಾರೆ. ಬಸ್‌ನಲ್ಲಿ ರಾಜಭವನದೆಡೆಗೆ ಹೊರಟಿದ್ದಾರೆ.

ಕೇಂದ್ರ ಮನರೇಗಾ ಯೋಜನೆ ಬುಡಮೇಲು ಮಾಡಿದೆ. ಬಡವರಿಗೆ ಅನುಕೂಲವಾಗುತ್ತಿದ್ದ ಉದ್ಯೋಗ ಖಾತ್ರಿ ಯೋಜನೆಯನ್ನು ಕಿತ್ತುಹಾಕಿದೆ. ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿದುಕೊಂಡಿದೆ. ರಾಜ್ಯಗಳ ಮೇಲೆ ಹೊರೆ ಹೇರಿದೆ ಎಂದು ಕಾಂಗ್ರೆಸ್‌ ವಾಗ್ದಾಳಿ ನಡೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
cm 37

ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ವೀರಪ್ಪ ಮೋಯ್ಲಿ, AICC ಪ್ರಧಾನ ಕಾರ್ಯದರ್ಶಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, KPCC ಕಾರ್ಯಾಧ್ಯಕ್ಷರಾದ ಜಿ.ಸಿ.ಚಂದ್ರಶೇಖರ್, ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲೀಂ‌ ಅಹಮದ್ ಸೇರಿ ಹಲವು ಪ್ರಮುಖರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಇನ್ನು, ವಿಬಿ ಜಿ ರಾಮ್ ಜಿ ವಿರುದ್ಧ ಕಾಂಗ್ರೆಸ್‌ ಸರ್ಕಾರವು ವಿಶೇಷ ಅಧಿವೇಶನವನ್ನೂ ಕರೆದಿದೆ. ಗುರುವಾರ (ಜ.22)ದಿಂದ ಅಧಿವೇಶನ ಆರಂಭವಾಗಿದೆ. ರಾಜಭವನ ಚಲೋ ಬಳಿಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌ ಸಚಿವರು, ಶಾಸಕರು ಅಧಿವೇಶನದಲ್ಲಿ ಭಾಗಿಯಾಗಲಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...