‘ಮೈಸೂರು ಮಿತ್ರ’ ಸಂಸ್ಥಾಪಕ ಹಿರಿಯ ಪತ್ರಕರ್ತ ಕೆ ಬಿ ಗಣಪತಿ ನಿಧನ

Date:

ಹಿರಿಯ ಪತ್ರಕರ್ತರಾದ ಕೆ ಬಿ ಗಣಪತಿ ಅವರು ಮೈಸೂರಿನ ತಮ್ಮ ನಿವಾಸದಲ್ಲಿ ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.‌

88 ವರ್ಷದ ಕೆ.ಬಿ. ಗಣಪತಿ ಅವರು ತಮ್ಮ ಬದುಕಿನ ಕಡೆಯ ದಿನದವರೆಗೂ ಪತ್ರಿಕಾಲಯದಲ್ಲಿ ಸಕ್ರಿಯರಾಗಿದ್ದರು. ಕೆ ಬಿ ಗಣಪತಿ ಅವರು ತಮ್ಮ ಒಡೆತನದ ಕನ್ನಡದ ʻಮೈಸೂರು ಮಿತ್ರʼ ಹಾಗೂ ಇಂಗ್ಲೀಷ್‌ನ ಸ್ಟಾರ್ ಆಫ್ ಮೈಸೂರು (Star of Mysore) ಪತ್ರಿಕೆಗಳ ಮೂಲಕ ಹಳೇ ಮೈಸೂರು ಪ್ರಾಂತ್ಯದಲ್ಲಿ ದೊಡ್ಡ ಓದುಗ ವರ್ಗವನ್ನು ಸೃಷ್ಟಿಸುವಲ್ಲಿ ಯಶಸ್ವಿಯಾದವರು. ಇದರ ಜೊತೆಗೆ ನೂರಾರು ಪತ್ರಕರ್ತರನ್ನ ಈ ನಾಡಿಗೆ ಕೊಡುಗೆ ನೀಡಿದ ಹಿರಿಮೆ ಗಣಪತಿ ಅವರಿಗೆ ಸಲ್ಲುತ್ತದೆ.

ತಮ್ಮ ಅಂಕಣ ಬರಹಗಳ ಮೂಲಕ ಪತ್ರಕರ್ತರ ಸಾಮಾಜಿಕ ಬದ್ಧತೆಯನ್ನ ಸಮಾಜಕ್ಕೆ ತೋರಿಸಿದವರು ಗಣಪತಿ. ಯಶಸ್ವಿ ಪತ್ರಿಕೋದ್ಯಮದ ಮೂಲಕ ಇಡೀ ರಾಜ್ಯದ ಪತ್ರಿಕ ಸಮೂಹ ಮೈಸೂರಿನ ಕಡೆ ನೋಡುವ ಹಾಗೆ ಮಾಡುವಲ್ಲಿ ಯಶಸ್ವಿಯಾಗಿದ್ದರು. ಸುಮಾರು 50 ವರ್ಷಗಳ ನಿರಂತರ ಪತ್ರಿಕೋದ್ಯಮದಲ್ಲಿ ಮೈಲಿಗಲ್ಲಿನಂತಹ ನೂರಾರು ಸಾಧನೆಗಳನ್ನು ಗಣಪತಿ ಅವರು ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆಬಿಜೆ ಎಂದು ಖ್ಯಾತಿ ಪಡೆದಿದ್ದ ಕೆ ಬಿ ಗಣಪತಿ ಅವರು ಮೈಸೂರಿನಲ್ಲಿ ಸಂಜೆಯ ದಿನಪತ್ರಿಕೆ ‘ಸ್ಟಾರ್ ಆಫ್ ಮೈಸೂರು’ ಪತ್ರಿಕೆಯನ್ನು 1978ರಲ್ಲಿ ಆರಂಭಿಸಿದರು. ಇದು ಇಂಗ್ಲಿಷ್ ಪತ್ರಕರ್ತರಾಗುವ ಯುವಕರ ಪಾಲಿಗೆ ಅಕ್ಷರಶಃ ಕಾಲೇಜ್ ಆಗಿತ್ತು. ಇದರ ಜೊತೆಗೆ 1980ರಲ್ಲಿ ‘ಮೈಸೂರು ಮಿತ್ರ’ ದಿನಪತ್ರಿಕೆ ಆರಂಭಿಸಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕೈಗಾರಿಕೆಯಲ್ಲಿ ತಮಿಳುನಾಡು ಮಾದರಿ ಅಳವಡಿಸಿಕೊಳ್ಳಲಿ ಕರ್ನಾಟಕ

ಕೆಬಿಜೆ ಅವರು ಬರೆಯುತ್ತಿದ್ದ ʻಛೂಮಂತ್ರ, ಅಬ್ರಕಡಬ್ರʼ ಅಂಕಣಗಳು ಪ್ರಸಿದ್ಧವಾಗಿದ್ದವು. ಕೆಬಿಜೆ ಪತ್ರಿಕೋದ್ಯಮಕ್ಕೆ ಬರುವ ಮುನ್ನ ಬೆಂಗಳೂರಿನಲ್ಲಿ ಕಾನೂನು ಪದವಿ ಪಡೆದ ನಂತರ ಮುಂಬೈಗೆ ತೆರಳಿ ಅಲ್ಲಿಯ ಭಾರತೀಯ ವಿದ್ಯಾಭವನದಲ್ಲಿ ಪತ್ರಿಕೋದ್ಯಮದಲ್ಲಿ ಡಿಪ್ಲೊಮಾ ಪದವಿ ಗಳಿಸಿದರು. ಮುಂಬೈನಲ್ಲಿ ಪ್ರಿ-ಪ್ರೆಸ್ ಜರ್ನಲ್, ಎಕನಾಮಿಕ್ ಅಂಡ್ ಪೊಲಿಟಿಕಲ್ ವೀಕ್ಲಿ ಹಾಗೂ ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದರು. ಬಳಿಕ ಮೈಸೂರಿಗೆ ಬಂದು ಪತ್ರಿಕೆಗಳನ್ನು ಆರಂಭಿಸಿದ್ದು ಈಗ ಇತಿಹಾಸ.

‘ಆದರ್ಶವಾದಿ’ ಕಾದಂಬರಿ, ‘ಅಮೆರಿಕ- ಆ್ಯನ್ ಏರಿಯಾ ಆಫ್ ಲೈಟ್’ ಪ್ರವಾಸ ಕಥನ, ‘ದಿ ಕ್ರಾಸ್ ಆ್ಯಂಡ್ ದಿ ಕೂರ್ಗ್‌’ ಇಂಗ್ಲಿಷ್ ಕಾದಂಬರಿ, ಸ್ಟಾರ್ ಆಫ್ ಮೈಸೂರು- ಸ್ಟಾರ್ ‌ಆಫ್ ಎ ಯೂನಿಕ್ ಇವನಿಂಗ್ ಇಂಗ್ಲಿಷ್ ನ್ಯೂಸ್ ಪೇಪರ್, ‘ಸ್ವಾಡ್೯ ಆಫ್ ಶಿವಾಜಿ’ ಜೀವನಚರಿತ್ರೆ ಇವರು ಬರೆದ ಕೃತಿಗಳಾಗಿವೆ.

ಹಿರಿಯ ಪತ್ರಕರ್ತ ಗಣಪತಿ ಅವರ ನಿಧನಕ್ಕೆ ಮುಖ್ಯಮಂತ್ರಿ ‘ಎಕ್ಸ್‌’ ಖಾತೆಯಲ್ಲಿ ಫೋಟೋ ಜೊತೆಗೆ ಚುಟುಕು ಸಂದೇಶ ಹಂಚಿಕೊಳ್ಳುವ ಮೂಲಕ ಸಂತಾಪ ಸೂಚಿಸಿದ್ದಾರೆ.

“ನನ್ನೂರಿನ‌ ಹಿರಿಯ ಪತ್ರಕರ್ತ ಮಿತ್ರರಾದ ಕೆ.ಬಿ.ಗಣಪತಿ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಗಣಪತಿಯವರ ಅಗಲಿಕೆಯಿಂದ ನಾಡಿನ‌ ಪತ್ರಿಕಾರಂಗ ಬಡವಾಗಿದೆ. ಸುಮಾರು ಐದು ದಶಕಗಳ ಕಾಲ ಪತ್ರಿಕೋದ್ಯಮದಲ್ಲಿ ಅವಿರತ ದುಡಿದ ಗಣಪತಿ ಅವರು ವಸ್ತುನಿಷ್ಠ ಹಾಗೂ ವೃತ್ತಿಪರ ಬರಹಗಳಿಗೆ ಹೆಸರುವಾಸಿ. “ಸ್ಟಾರ್ ಆಫ್ ಮೈಸೂರು” ಪತ್ರಿಕೆಯ ಮೂಲಕ‌ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಪಾರ ಓದುಗ ಬಳಗ ಸೃಷ್ಟಿಸಿದ ಗಣಪತಿಯವರು “ಮೈಸೂರು ಮಿತ್ರ” ದಿನಪತ್ರಿಕೆಯ ಸ್ಥಾಪಕ ಸಂಪಾದಕರಾಗಿ ಕೂಡ ಸೇವೆ ಸಲ್ಲಿಸಿದ್ದರು. ಪತ್ರಿಕೋದ್ಯಮದಲ್ಲಿ ಅವರು ಮೂಡಿಸಿರುವ ಹೆಜ್ಜೆಗುರುತುಗಳು ಯುವ ಪತ್ರಕರ್ತರಿಗೆ ಸ್ಪೂರ್ತಿ ಮತ್ತು ಮಾದರಿಯಾಗಲಿ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗಕ್ಕೆ ನೋವು ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ತಿಳಿಸಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...