ಜಮೀರ್ ಅಹಮದ್, ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿ ವೈ ವಿಜಯೇಂದ್ರ ಆಗ್ರಹ

Date:

  • ‘ಬಿಜೆಪಿಗೆ ಕರ್ನಾಟಕವು ದಕ್ಷಿಣ ಭಾರತದ ಭದ್ರಕೋಟೆ’
  • ’28ಕ್ಕೆ 28 ಕ್ಷೇತ್ರ ಗೆದ್ದು ಮೋದಿ ಕೈ ಬಲಪಡಿಸುತ್ತೇವೆ’

ಬಿಜೆಪಿಗೆ ಕರ್ನಾಟಕವು ದಕ್ಷಿಣ ಭಾರತದ ಭದ್ರಕೋಟೆ. ಕಳೆದ ಬಾರಿಯ ಚುನಾವಣೆ ನಮಗೆ ಹಿನ್ನಡೆಯಾಗಿದೆ. ಯಾವಾಗ ಚುನಾವಣೆ ಬಂದರೂ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ತರುವ ಗುರಿ ಹೊಂದಬೇಕು. ಲೋಕಸಭೆ ಮತ್ತು ವಿಧಾಸಭೆ ಚುನಾವಣೆಯಷ್ಟೇ ಮಹತ್ವ ಸ್ಥಳೀಯ ಸಂಸ್ಥೆಗಳಿಗೂ ನೀಡಲಾಗುವುದು. ಅದು ನಮ್ಮ ಕಾರ್ಯಕರ್ತರ ಚುನಾವಣೆ, ಅದನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತಿಳಿಸಿದರು.

ಮೈಸೂರು ಮತ್ತು ಮಂಡ್ಯ ಜಿಲ್ಲೆ ಪ್ರವಾಸ ಕೈಗೊಂಡಿರುವ ಅವರು, ಸೋಮವಾರ ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, “ಮೈಸೂರು ಜಿಲ್ಲೆಗೂ ನನಗೂ ಅವಿನಾಭಾವ ಸಂಬಂಧವಿದೆ. ಶಾಸಕ ಆಗಲು ಭದ್ರ ಬುನಾದಿ ಹಾಕಿರುವುದು ವರುಣ ಕ್ಷೇತ್ರ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆಗೆ ಮೊದಲ ಆದ್ಯತೆ ನೀಡಲಾಗುವುದು” ಎಂದರು.

“ಅಧಿಕಾರದ ದರ್ಪದಿಂದ ಕಾಂಗ್ರೆಸ್‌ನವರು ಆಡಳಿತ ಅಭಿವೃದ್ಧಿ ಮರೆತಿದ್ದಾರೆ. ಮುಂದಿನ ಲೋಕಸಭಾ ಚುನಾವಣೆ ಹಾಗೂ ಮುಂದಿನ ಎಲ್ಲ ಚುನಾವಣೆಗಳನ್ನು ಒಗ್ಗಟ್ಟಾಗಿ ಎದುರಿಸುತ್ತೇವೆ. ರಾಜ್ಯ ಸರ್ಕಾರದ ವಿರುದ್ಧ ಇರುವ ಬೇಸರಕ್ಕೆ ಬಿಜೆಪಿ ಪರ್ಯಾಯವಾಗಿದೆ. ಇದನ್ನು ಜನರಿಗೆ ಮನವರಿಕೆ ಮಾಡಿಕೊಡುತ್ತೇವೆ. ಮುಂಬರುವ ಲೋಕಸಭಾ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡು 28ಕ್ಕೆ 28 ಕ್ಷೇತ್ರವನ್ನು ಗೆದ್ದು ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸುತ್ತೇವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಬಲ ಜಾತಿಗಳ ಜೋಡೆತ್ತುಗಳು, ಬಿಜೆಪಿಗರಿಗೇ ಬೇಡವಾಗಿದ್ದೇಕೆ?

“ಚುನಾವಣೆ ವೇಳೆ ಕಾಂಗ್ರೆಸ್ ಸಾಕಷ್ಟು ಭರವಸೆ ನೀಡಿತ್ತು.ಆದರೆ ಇವರ ಆಡಳಿತದಿಂದ ಜನರು ನಿರಾಶರಾಗಿದ್ದು, ಆಕ್ರೋಶಗೊಂಡಿದ್ದಾರೆ. ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಜೋಡೆತ್ತುಗಳಂತೆ ಇದ್ದರು. ಈಗ ಹಾದಿ ಬೀದಿಯಲ್ಲಿ ಸಿಎಂ ಬಗ್ಗೆ ಮಾತನಾಡುತ್ತಿದ್ದಾರೆ. ಡಿ ಕೆ ಶಿವಕುಮಾರ್ ಅವರನ್ನು ರಾಜಕೀಯವಾಗಿ ಮುಗಿಸಲು ಹುನ್ನಾರ ನಡೆದಿದೆ” ಎಂದರು.

ಜಮೀರ್, ಪ್ರಿಯಾಂಕ್ ರಾಜೀನಾಮೆಗೆ ಆಗ್ರಹ 

ಸಚಿವ ಜಮೀರ್ ಅಹಮದ್ ಅವರ ಹೇಳಿಕೆ ವಿಚಾರವಾಗಿ ಮಾತನಾಡಿ, “ಇದು ಹುಡುಗಾಟದ ಮಾತಲ್ಲ. ಜಮೀರ್ ಅಹಮದ್ ಅವರ ಮನದಾಳದ ಮಾತು. ನ್ಯಾಯಾದೇವತೆ ಅಂತಾ ಗೌರವ ಕೊಡುತ್ತೇವೆ. ಅದಕ್ಕೂ ಮಸಿ ಬಳಿಯುವ ಕೆಲಸ ಮಾಡಿದ್ದಾರೆ. ಬೇರೆ ಸಿಎಂ ಆಗಿದ್ದರೆ ಜಮೀರ್ ರಾಜೀನಾಮೆ ತೆಗೆದುಕೊಳ್ಳುತ್ತಿದ್ದರು” ಎಂದು ಹೇಳಿದರು.

“ಸಚಿವ ಪ್ರಿಯಾಂಕ್ ಖರ್ಗೆ ಅವರು ಅಧಿಕಾರ ಶಾಶ್ವತ ಅನ್ನೋ ಭ್ರಮೆಯಲ್ಲಿದ್ದಾರೆ. ಗೂಂಡಾಗಿರಿ ಕಲುಬುರುಗಿ ಜಿಲ್ಲೆಯಲ್ಲಿ ನಡೆಯುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಪ್ರಿಯಾಂಕ್ ತವರು ಜಿಲ್ಲೆಯಲ್ಲಿ ಗುಂಡಾಗಿರಿ ಹೆಚ್ಚಾಗಿದೆ. ಮಣಿಕಂಠ ರಾಥೋಡ್ ಮೇಲೆ ರಾಜಕೀಯ ಪುಡಾರಿಗಳಿಂದ ಹಲ್ಲೆ ನಡೆಸಲಾಗಿದೆ. ಅಧಿಕಾರದ ದರ್ಪದಿಂದ ಏನೇ ಮಾಡಿದರೂ ನಡೆಯುತ್ತದೆ ಅಂದುಕೊಂಡಿದ್ದಾರೆ. ಪ್ರಿಯಾಂಕ್‌ ಖರ್ಗೆ ಅವರ ರಾಜೀನಾಮೆ ಪಡೆಯಬೇಕು” ಎಂದು ವಿಜಯೇಂದ್ರ ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...