ಬಸವರಾಜ ಬೊಮ್ಮಾಯಿ ಸೋಲಿಸಲು ವಿಜಯೇಂದ್ರ ಹಣ ಕಳುಹಿಸಿದ್ದರು: ಯತ್ನಾಳ್ ಗಂಭೀರ ಆರೋಪ

Date:

  • ‘ಅಪ್ಪ, ಮಕ್ಕಳು ಏನು ಮಾಡಿದ್ದಾರೆ ಎಂಬ ಸತ್ಯ ಒಮ್ಮೆ ಹೊರಬರಬೇಕು’
  • ‘ಹೈಕಮಾಂಡ್​​ನವರನ್ನು ಯಡಿಯೂರಪ್ಪ ಬ್ಲ್ಯಾಕ್ ಮೆಲ್ ಮಾಡಿದ್ದಾರೆ’

ಆಶ್ಚರ್ಯಕರ ಸಂಗತಿ ಎಂದರೆ ಬಸವರಾಜ ಬೊಮ್ಮಾಯಿ ಅವರನ್ನು ಸೋಲಿಸಲು ವಿಜಯೇಂದ್ರ ಹಣ ಕಳುಹಿಸಿದ್ದರು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.

ಸೋಮವಾರ ರಾತ್ರಿ ಬೆಳಗಾವಿಯಲ್ಲಿ ಕೂಡಲಸಂಗಮದ ಜಯ ಮೃತ್ಯುಂಜಯ ಸ್ವಾಮೀಜಿ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿ, ಬಿ ವೈ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದರು.

“ಬೊಮ್ಮಾಯಿ ಸೋಲಿಸಲು ಹಣ ಕಳುಹಿಸಿದ್ದ ವಿಜಯೇಂದ್ರ ಈಗ ರಾಜ್ಯ ಘಟಕದ ಅಧ್ಯಕ್ಷರಾಗಿದ್ದಾರೆ. ಬೊಮ್ಮಾಯಿ ಅವರೇ ವಿಜಯೇಂದ್ರ ಹಣ ಕಳುಹಿಸಿದ್ದ ಬಗ್ಗೆ ನನಗೆ ಹೇಳಿದ್ದರು. ಒಮ್ಮೆ ಸತ್ಯ ಹೊರಬರಬೇಕು. ರಾಜ್ಯದಲ್ಲಿ ಅಪ್ಪ, ಮಕ್ಕಳು ಏನು ಮಾಡಿದ್ದಾರೆ ಎಂಬುದು ಗೊತ್ತಾಗಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿ. ಸೋಮಣ್ಣ ಅವರನ್ನು ಸೋಲಿಸಿದ್ದು ಯಾರು? ಲಿಂಗಾಯತರನ್ನು ಅಲ್ಲಿಗೆ ಕಳುಹಿಸಿ ಸೋಮಣ್ಣ ಅವರನ್ನು ಬಲಿ ಕೊಟ್ಟರು. ಸೋಮಣ್ಣ ಅವರನ್ನು ಗೋವಿಂದರಾಜ ನಗರದಲ್ಲಿ 20-25 ಸಾವಿರ ಮತಗಳಿಂದ ಗೆಲ್ಲಬೇಕಿತ್ತು. ಆದರೆ ಅವರನ್ನು ಬಲಿಪಶು ಮಾಡಿದರು” ಎಂದು ದೂರಿದರು.

“ತಮ್ಮ ವಿರುದ್ಧ ದುರ್ಬಲ ಅಭ್ಯರ್ಥಿ ಹಾಕಿಸಿಕೊಂಡರು. ಅಲ್ಲಿ ಸಿದ್ದರಾಮಯ್ಯಗೆ ಸಪೋರ್ಟ್ ಮಾಡಿದರು. ಕನಕಪುರದಲ್ಲಿ ಅವರಿಬ್ಬರದು ಹೊಂದಾಣಿಕೆ ಇದೆ. ಹಿಂಗೆಲ್ಲ ಮಾಡಿ ನಮ್ಮ ಹೆಸರನ್ನು ಕೆಡಿಸುವ ಪ್ರಯತ್ನ ಮಾಡಿದರು” ಎಂದು ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗೋಸುಂಬೆಯನ್ನೂ ನಾಚಿಸಿದ ಕುಮಾರಸ್ವಾಮಿ

“ಹೈಕಮಾಂಡ್​​ನವರನ್ನು ಯಡಿಯೂರಪ್ಪ ಬ್ಲ್ಯಾಕ್ ಮೆಲ್ ಮಾಡಿ ವಿಜಯೇಂದ್ರನನ್ನು ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಹೈಕಮಾಂಡ್ ಕೂಡ ಯಾಕೆ ಹೆದರಿತೋ ಗೊತ್ತಿಲ್ಲ. ಸುಮ್ಮನೆ ಶಿಸ್ತು, ಶಿಸ್ತು ಎಂದು ಹೇಳುತ್ತಾರೆ, ನಾವೇನು ಗುಲಾಮರಾ? ನಮ್ಮದೇನು ಶಕ್ತಿ ಇಲ್ಲವೇ? ನಮ್ಮ ಹಿಂದೆಯೂ ಜನ ಇದ್ದಾರೆ. ನೀವೆಲ್ಲ ಗಟ್ಟಿಯಾಗಿ ನಿಲ್ಲಿ, ಎಲ್ಲರನ್ನೂ ಸರಿ ಮಾಡೋಣ” ಎಂದು ಸಮುದಾಯದ ನಾಯಕರಿಗೆ ಕರೆ ನೀಡಿದರು.

“ಲೋಕಸಭಾ ಚುನಾವಣೆ ಪ್ರಚಾರಕ್ಕೆ ರಾಜ್ಯದಲ್ಲಿ ಎಲ್ಲಿಯೂ ಹೋಗಲ್ಲ ಎಂದು ಯಡಿಯೂರಪ್ಪ ಬ್ಲ್ಯಾಕ್​​ಮೇಲ್ ಮಾಡಿ ಹೆದರಿಸಿದ್ದರು. ಶಿವಮೊಗ್ಗ ಕ್ಷೇತ್ರದಲ್ಲಿ ಮಾತ್ರ ಪ್ರಚಾರ ಮಾಡುವೆ, ಉಳಿದ ಕಡೆ ಹೋಗಲ್ಲ ಎಂದಿದ್ದರು” ಎಂದು ಯತ್ನಾಳ್ ಆರೋಪಿಸಿದರು.

ಪ್ರತಿಕ್ರಿಯಿಸಲು ನಿರಾಕರಿಸಿದ ವಿಜಯೇಂದ್ರ

ಬೊಮ್ಮಾಯಿ ಸೋಲಿಸಲು ವಿಜಯೇಂದ್ರ ಹಣ ಕಳುಹಿಸಿದ್ದ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಲು ವಿಜಯೇಂದ್ರ ನಿರಾಕರಿಸಿದರು. ಈ ವಿಚಾರವಾಗಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಕೈ ಮುಗಿದು, ”ದಿನಕ್ಕೊಂದು ಹೇಳಿಕೆ ಕೊಡಲು ಆಗಲ್ಲ, ಧನ್ಯವಾದ” ಎಂದಷ್ಟೇ ಹೇಳಿ ಮುಂದೆ ತೆರಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...