ಗ್ರಾಮ ಲೆಕ್ಕಾಧಿಕಾರಿ ಪರೀಕ್ಷೆ | ಬೆಳಿಗ್ಗೆ-ಮಧ್ಯಾಹ್ನ-ಸಂಜೆಯ ಅರಿವಿಲ್ಲದ ಕೆಇಎ ಎಡವಟ್ಟು!

Date:

ಗ್ರಾಮ ಲೆಕ್ಕಾಧಿಕಾರಿಗಳ ನೇಮಕಕ್ಕೆ ಭಾನುವಾರ ಸ್ಪರ್ಧಾ ಪರೀಕ್ಷೆ ನಡೆದಿದೆ. 1,000 ಗ್ರಾಮ ಲೆಕ್ಕಾಧಿಕಾರಿ (ವಿಎ) ಹುದ್ದೆಗಳು ಮತ್ತು 98 ಜಿಟಿಟಿಸಿ ಹುದ್ದೆಗಳಿಗೆ 5.75 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಆದರೆ, ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಎಡವಟ್ಟು ಮಾಡಿದೆ. ನೆಟ್ಟಿಗರ ಆಕ್ರೋಶ ಮತ್ತು ಟ್ರೋಲ್‌ಗೆ ಕೆಇಎ ಗುರಿಯಾಗಿದೆ.

ಕಡ್ಡಾಯ ಕನ್ನಡ ಭಾಷಾ ಪ್ರಶ್ನೆಪತ್ರಿಕೆಯ ಮುಖಪುಟದಲ್ಲಿ ಹಲವು ದೋಷಗಳು ಕಂಡುಬಂದಿವೆ. ಪರೀಕ್ಷಾ ಸಮಯಕ್ಕೆ ಸಂಬಂಧಿಸಿತ ಸೂಚನೆಗಳಲ್ಲಿ ತಪ್ಪುಗಳಿದ್ದು, ಅಭ್ಯರ್ಥಿಗಳೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪರೀಕ್ಷ ಸಮಯದ ಬಗ್ಗೆ ವಿವರಿಸಲಾಗಿರುವ ಮಾರ್ಗಸೂಚಿಗಳಲ್ಲಿ ಬೆಳಿಗ್ಗೆಯ ಬದಲಿಗೆ ಮಧ್ಯಾಹ್ನ, ಮಧ್ಯಾಹ್ನದ ಬದಲಿಗೆ ಸಂಜೆ ಎಂದು ಉಲ್ಲೇಖಿಸಿರುವುದು ಕಂಡುಬಂದಿದೆ.

ಪರೀಕ್ಷಾ ಸೂಚನೆಗಳಲ್ಲಿ ‘ಪ್ರಶ್ನೆ ಪತ್ರಿಕೆಯನ್ನು ನಿಮಗೆ ಬೆಳಿಗ್ಗೆ 10:25ರ ನಂತರ ಕೊಡಲಾಗುತ್ತದೆ’ ಎಂದು ಮುದ್ರಿಸುವ ಬದಲು ‘ಮಧ್ಯಾಹ್ನ 10:25ರ ನಂತರ ಕೊಡಲಾಗುತ್ತದೆ’ ಎಂದು ಮುದ್ರಿಸಲಾಗಿದೆ. ಅಲ್ಲದೆ, ‘ಪ್ರಶ್ನೆ ಪತ್ರಿಕೆ ಕೊಟ್ಟ ನಂತರ ಮೂರನೇ ಬೆಲ್ ಬೆಳಿಗ್ಗೆ 10:30ಕ್ಕೆ ಆಗುತ್ತದೆ’ ಎಂದು ಉಲ್ಲೇಖಿಸುವ ಬದಲು ‘ಮಧ್ಯಾಹ್ನ 10:30ಕ್ಕೆ ಆಗುತ್ತದೆ’ ಎಂದು ಬರೆಯಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 09 30 at 12.45.02 PM

ಇನ್ನು, ಪರೀಕ್ಷೆ ಬರೆಯುವುದನ್ನು ನಿಲ್ಲಿಸುವ ಸೂಚನೆಯಲ್ಲಿ, ‘ಕೊನೆಯ ಬೆಲ್ ಮಧ್ಯಾಹ್ನ 12:30ಕ್ಕೆ ಆದ ನಂತರ ಉತ್ತರಿಸುವುದನ್ನು ನಿಲ್ಲಿಸಿ’ ಎಂದು ಉಲ್ಲೇಖಿಸದೆ, ‘ಸಂಜೆ 12:30ಕ್ಕೆ’ ಎಂದು ಮುದ್ರಿಸಲಾಗಿದೆ.

ಇದೆಲ್ಲದೆ, ಓಎಂಆರ್ ಶೀಟ್‌ನ ಕನ್ನಡ ಅಕ್ಷರಗಳಲ್ಲೂ ದೋಷಗಳು ಕಂಡುಬಂದಿವೆ. ಮಾಡಬೇಕು ಎಂಬುದರ ಬದಲಿಗೆ, ‘ಮಾಡಬೇಡು’ ಎಂದು, ಕಪ್ಪು ಎಂಬುದನ್ನು ‘ಕಷ್ಟು’, ಎಂದೂ, ಮೊದಲು ಎನ್ನುವುದನ್ನು ‘ಮೊದಲಾ’ ಎಂದು ತಪ್ಪಾಗಿ ಬರೆಯಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...