ರಸಗೊಬ್ಬರ- ಕೀಟನಾಶಕ ಮಾರಾಟದಲ್ಲಿ ನಿಯಮ ಉಲ್ಲಂಘನೆ, ಕೃಷಿ ಇಲಾಖೆಯಿಂದ ಕಾರ್ಯಾಚರಣೆ

Date:

ರಾಜ್ಯ ಕೃಷಿ ಇಲಾಖೆಯು ರಾಜ್ಯದಾದ್ಯಂತ ರಸಗೊಬ್ಬರ ಮತ್ತು ಕೀಟನಾಶಕ ಮಾರಾಟದಲ್ಲಿ ನಡೆಯುತ್ತಿರುವ ಉಲ್ಲಂಘನೆಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ.

ಕೃಷಿ ಸಚಿವ ಎನ್.ಚಲುವರಾಯಸ್ವಾಮಿಯವರ ಮಾರ್ಗದರ್ಶನದಲ್ಲಿ, ಇಲಾಖೆಯು ರಾಜ್ಯದ ವಿವಿಧ ಭಾಗಗಳಲ್ಲಿ ದಾಳಿ ನಡೆಸಿ, ಫರ್ಟಿಲೈಸರ್ ಕಂಟ್ರೋಲ್ ಆರ್ಡರ್ (FCO) ಉಲ್ಲಂಘನೆ ಮತ್ತು ಅನಧಿಕೃತ ಕೀಟನಾಶಕ ತಯಾರಿಕೆಯನ್ನು ಪತ್ತೆಹಚ್ಚಿದೆ.

ಬನ್ನೂರಿನಲ್ಲಿ ಜಪ್ತಿ ಕಾರ್ಯಾಚರಣೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಾಮುಂಡೇಶ್ವರಿ ಟ್ರೇಡರ್ಸ್ ಮತ್ತು ಗ್ರೀನ್‌ವೇ ಎಂಟರ್ಪ್ರೈಸಸ್, ಬನ್ನೂರು ಇಲ್ಲಿ FCO ಉಲ್ಲಂಘನೆ ಮಾಡಿ ಮಾರಾಟ ಮಾಡುತ್ತಿದ್ದ ಅಂದಾಜು ಒಟ್ಟು ₹5,29,900 ಮೌಲ್ಯದ ಬಯೋಸ್ಟಿಮುಲೆಂಟ್‌ಗಳನ್ನು ಜಪ್ತಿ ಮಾಡಲಾಗಿದೆ.

ಜಪ್ತಿಯಾದ ವಸ್ತುಗಳು & ಮೌಲ್ಯ:
GROW-R: ₹58,000
ABDA Gold: ₹1,52,000
Zymegold: ₹30,800
ಸಾಗರಿಕಾ: ₹23,100
ಶಿವರಿಕಾ: ₹2,66,000

ನಂಜನಗೂಡಿನಲ್ಲಿ ಅನಧಿಕೃತ ಕೀಟನಾಶಕ ಜಪ್ತಿ

ವಿಚಕ್ಷಣ ದಳದ ಅಪರ ಕೃಷಿ ನಿರ್ದೇಶಕರಾದ ದೇವರಾಜು ಮಾರ್ಗದರ್ಶನದಲ್ಲಿ, ಶ್ರೀ ಇಂಡಸ್ಟ್ರೀಸ್, ನಂಜನಗೂಡಿನಲ್ಲಿ ಅನಧಿಕೃತವಾಗಿ ತಯಾರಿಸಲಾಗುತ್ತಿದ್ದ 160 ಲೀಟರ್ ಪ್ರೊಫೆನೊಫಾಸ್ ಕೀಟನಾಶಕವನ್ನು ವಶಪಡಿಸಿಕೊಳ್ಳಲಾಗಿದೆ.

ದಾವಣಗೆರೆಯಲ್ಲಿ ಲೈಸೆನ್ಸ್ ರದ್ದು ಮತ್ತು ಅಮಾನತು

ದಾವಣಗೆರೆಯ ADA (ವಿಜಿಲೆನ್ಸ್ 1 & 2) ಶಿಫಾರಸಿನ ಮೇರೆಗೆ, ದಾವಣಗೆರೆಯ 5 ಚಿಲ್ಲರೆ ಮಾರಾಟಗಾರರು ಮತ್ತು ಜಗಳೂರಿನ 2 ಚಿಲ್ಲರೆ ಮಾರಾಟಗಾರರ ಲೈಸೆನ್ಸ್‌ಗಳನ್ನು ಅಮಾನತಿನಲ್ಲಿಡಲಾಗಿದೆ. ರಸಗೊಬ್ಬರವನ್ನು ನಿಗದಿತ ಬೆಲೆ (MRP)ಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಚಿಲ್ಲರೆ ಮಾರಾಟಗಾರರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಹಾಗೆಯೇ, ರಸಗೊಬ್ಬರ ಸಗಟು ಮಾರಾಟಗಾರರು ಜಿಲ್ಲೆಯ ಚಿಲ್ಲರೆ ಮಾರಾಟಗಾರರಿಗೆ ಹಂಚಿಕೆಯಾದ ರಸಗೊಬ್ಬರವನ್ನು ಪೂರೈಕೆ ಮಾಡದೆ, ಬೇರೆ ಜಿಲ್ಲೆಗಳಿಗೆ ಮಾರಾಟ ಮಾಡಿದ್ದರಿಂದ, ಈ ಕೆಳಗಿನ ಸಗಟು ಮಾರಾಟಗಾರರ ಲೈಸೆನ್ಸ್‌ಗಳನ್ನು ರದ್ದುಗೊಳಿಸಲಾಗಿದೆ.

ಆಶಾಪೂರಿ ಫರ್ಟಿಲೈಸರ್ಸ್, ದಾವಣಗೆರೆ
ರಾಥೋಡ್ ಫರ್ಟಿಲೈಸರ್ಸ್, ದಾವಣಗೆರೆ
ಶ್ರೀ ಮಲ್ಲಿಕಾರ್ಜುನ ಫರ್ಟಿಲೈಸರ್ಸ್, ದಾವಣಗೆರೆ
ದಿಬ್ಬದಹಳ್ಳಿ ಆಗ್ರೋ ಸರ್ವೀಸ್, ದಾವಣಗೆರೆ
ಶ್ರೀ ಶ್ರೀನಿವಾಸ ಆಗ್ರೋ ಟ್ರೇಡರ್ಸ್, ದಾವಣಗೆರೆ
ಕಿಶೋರ್ ಫರ್ಟಿಲೈಸರ್ಸ್, ದಾವಣಗೆರೆ
ವೀರಭದ್ರೇಶ್ವರ ಫರ್ಟಿಲೈಸರ್ಸ್, ನಲ್ಲೂರು, ಚನ್ನಗಿರಿ ತಾಲೂಕು
ವೀರಭದ್ರೇಶ್ವರ ಟ್ರೇಡರ್ಸ್, ಗೋಪನಹಳ್ಳಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...