ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಅವರು ತಡರಾತ್ರಿ 12 ಗಂಟೆ ಆಸುಪಾಸಿನಲ್ಲಿ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.
ಚಂದ್ರಶೇಖರನಾಥ ಸ್ವಾಮೀಜಿ ಅವರ ಅಂತಿಮ ದರ್ಶನಕ್ಕೆ ಶನಿವಾರ ಶ್ರೀಮಠದ ಆವರಣದಲ್ಲೇ ಅವಕಾಶ ಮಾಡಿಕೊಡಲಾಗಿದೆ. ಮಧ್ಯಾಹ್ನ 3 ಗಂಟೆಗೆ ಅಂತಿಮ ವಿಧಿ ವಿಧಾನಗಳು ನೆರವೇರಲಿವೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸ್ವಾಮೀಜಿಗಳಿಗೆ ಈ ಭಂಡತನ ಬಂದದ್ದಾದರೂ ಎಲ್ಲಿಂದ?
ಉತ್ತರಾಧಿಕಾರಿ ಪೀಠಾಧ್ಯಕ್ಷರಾದ ಡಾ.ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಅವರು ಹಲವು ಧಾರ್ಮಿಕ ಮುಖಂಡರುಗಳ ಸಮ್ಮುಖದಲ್ಲಿ ಅಂತಿಮ ವಿಧಿ ವಿಧಾನಗಳು ನೆರವೇರಿಸಲಿದ್ದಾರೆ ಎನ್ನಲಾಗಿದೆ.





