ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಮುಕ್ತನಾಗುತ್ತೇನೆ, ಕಾಯಿರಿ: ಡಿಸಿಎಂ ಡಿ ಕೆ ಶಿವಕುಮಾರ್

Date:

ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಮುಕ್ತನಾಗುತ್ತೇನೆ, ಇದಕ್ಕೆ ಕಾಯಿರಿ ಎಂದು ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು, ಡಿಸಿಸಿ ಅಧ್ಯಕ್ಷರು, ಮುಂಚೂಣಿ ಘಟಕ ಹಾಗೂ ಸೆಲ್ ವಿಭಾಗಗಳ ಅಧ್ಯಕ್ಷರೊಂದಿಗೆ ಸಭೆ ನಡೆಸಿದ ಅವರು ಪಕ್ಷದ ಬಲವರ್ಧನೆ ಹಾಗೂ ಮುಂದೆ ಕೈಗೊಳ್ಳಬೇಕಿರುವ ಕಾರ್ಯಕ್ರಮಗಳ ಕುರಿತು ಚರ್ಚೆ ನಡೆಸಿದರು.

ಸಭೆಯಲ್ಲಿ ಕೆಪಿಸಿಸಿ ಪದಾಧಿಕಾರಿಯೊಬ್ಬರು ಜಿಲ್ಲಾ ಮಟ್ಟದಲ್ಲಿ ಎರಡು ಹುದ್ದೆಗಳ ಬಗ್ಗೆ ಪ್ರಸ್ತಾಪ ಮಾಡಿದಾಗ ಮಾತನಾಡಿದ ಡಿ ಕೆ ಶಿವಕುಮಾರ್, ಸಮಯ, ಸಂದರ್ಭದ ಅನುಗುಣವಾಗಿ ನಮ್ಮ ಪಕ್ಷದಲ್ಲಿ ಯೋಜನೆಗಳು ನಡೆಯುತ್ತವೆ. ಖರ್ಗೆ ಅವರು ಎಐಸಿಸಿ ಅಧ್ಯಕ್ಷರು, ರಾಜ್ಯಸಭೆ ವಿರೋಧ ಪಕ್ಷದ ನಾಯಕರಾಗಿದ್ದಾರೆ. ನಾನು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ, ಎರಡು ಖಾತೆ ಕೂಡ ನಿರ್ವಹಿಸುತ್ತಿದ್ದೇನೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತಕ್ಕೆ ಬೇಕಿರುವುದು ಬಣ್ಣಗಳ ಸಂಗಮ, ಸಂಘರ್ಷದ ಸಂಭ್ರಮವಲ್ಲ!

100 ಕಾಂಗ್ರೆಸ್ ಕಚೇರಿಗಳ ಶಂಕುಸ್ಥಾಪನೆ ಬಳಿಕ ನಾನು ಮುಕ್ತನಾಗುತ್ತೇನೆ. ಬೇರೆಯವರು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜವಾಬ್ದಾರಿ ವಹಿಸಿಕೊಳ್ಳಲಿ ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.

ಕಾಂಗ್ರೆಸ್‌ ನಿಯಮದ ಪ್ರಕಾರ ಒಬ್ಬರಿಗೆ ಒಂದು ಹುದ್ದೆ ಮಾತ್ರ ಸಿಗಬೇಕು. ಸದ್ಯ ಡಿ ಕೆ ಶಿವಕುಮಾರ್ ಡಿಸಿಎಂ ಜೊತೆಗೆ ಕಾಂಗ್ರೆಸ್‌ ಅಧ್ಯಕ್ಷರಾಗಿದ್ದಾರೆ. ಈ ಹಿಂದೆಯೇ ಪಕ್ಷದ ಒಳಗಡೆಯೇ ಅಧ್ಯಕ್ಷ ಸ್ಥಾನ ಮತ್ತು ಡಿಸಿಎಂ ಎರಡನ್ನೂ ನಿಭಾಯಿಸುತ್ತಿರುವುದಕ್ಕೆ ಅಪಸ್ವರ ಎದ್ದಿತ್ತು. ಈಗ ಡಿಕೆಶಿ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಮುಕ್ತನಾಗುತ್ತೇನೆ, ಕಾಯಿರಿ ಎಂದು ಹೇಳುವ ಮೂಲಕ ಪಕ್ಷದಲ್ಲಿ ಸಂಚಲನ ಮೂಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...