ಚುನಾವಣಾ ಆಯೋಗದ ನೋಟಿಸ್‌ಗೆಲ್ಲ ನಾವು ಹೆದರೋದಿಲ್ಲ: ಡಿಸಿಎಂ ಡಿ ಕೆ ಶಿವಕುಮಾರ್

Date:

ಚುನಾವಣೆಗಳಲ್ಲಿ ಏನು ತಪ್ಪಾಗಿದೆ ಎಂದು ರಾಜಕೀಯ ನಾಯಕರಾದ ನಾವುಗಳು ಚುನಾವಣಾ ಆಯೋಗಕ್ಕೆ ತಿಳಿಸಿದ್ದೇವೆ. ಅವರೇ ಈ ತಪ್ಪುಗಳನ್ನು ಬಗೆಹರಿಸಬೇಕು ಹಾಗೂ ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳಬೇಕು. ಈ ಕೆಲಸ ಮಾಡುವುದು ನಾವಲ್ಲ. ಅವರು ನೀಡಿರುವ ನೋಟಿಸ್‌ಗೆಲ್ಲ ನಾವು ಹೆದರುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ಬೆಂಗಳೂರಿನ ಖಾಸಗಿ ಹೋಟೆಲ್ ಬಳಿ ಮಾಧ್ಯಮಗಳು ಮತಗಳ್ಳತನ ವಿಚಾರವಾಗಿ ಆಯೋಗವು ರಾಹುಲ್ ಗಾಂಧಿ ಅವರಿಗೆ ನೋಟಿಸ್ ನೀಡಿರುವ ವಿಚಾರವಾಗಿ ಕೇಳಿದಾಗ “ನಾವು ತಪ್ಪು ಹೇಳಿದ್ದರೆ ನಮ್ಮ ಮೇಲೆ ಚುನಾವಣಾ ಆಯೋಗ ಪ್ರಕರಣ ದಾಖಲಿಸಲಿ. ಚುನಾವಣಾ ಪ್ರಕ್ರಿಯೆಯಲ್ಲಿ ಏನೇನು ತಪ್ಪು ನಡೆದಿದೆ ಎಂದು ನಾವು ತಿಳಿಸಿದ್ದೇವೆ. ಇನ್ನೊಂದು ದೊಡ್ಡ ಅವಕಾಶ ನನಗಿದೆ. ಆದರೆ ಆ ವಿಚಾರವನ್ನು ನಾನು ಈಗ ಬಹಿರಂಗಪಡಿಸುವುದಿಲ್ಲ. ದಾಖಲೆಗಳನ್ನು ಪಡೆಯುವ ಜವಾಬ್ದಾರಿ ಅವರದ್ದು. ನಾವು ತಪ್ಪು ನಡೆದಿದೆ ಎಂದು ತಿಳಿಸಿದ್ದೇವೆ. ನಾವೇನು ಶಾಲಾಮಕ್ಕಳಲ್ಲ” ಎಂದರು.

ಆಯೋಗದಿಂದ ಒಂದಷ್ಟು ಮಾಹಿತಿ ಬರಬೇಕಿದೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಹುಲ್ ಗಾಂಧಿ ಅವರು ಇಡೀ ದೇಶಕ್ಕೆ ಎಲ್ಲ ಮಾಹಿತಿ ನೀಡಿದ್ದಾರೆ. ನಾವು ಕರ್ನಾಟಕದ ಚುನಾವಣಾ ಆಯೋಗದ ಆಯುಕ್ತರನ್ನು ಭೇಟಿ ಮಾಡಿದ ವೇಳೆಯಲ್ಲಿ ಅವರು ರಾಹುಲ್ ಗಾಂಧಿ ಅವರು ಮಾಡಿದ ಆರೋಪಗಳ ಮೇಲೆ ತನಿಖೆ ನಡೆಸಿದ್ದೇವೆ ಎಂದು ಹೇಳಿದ್ದಾರೆ. ನಾವು ಸಹ ಒಂದಷ್ಟು ಮಾಹಿತಿಗಳನ್ನು ಕೇಳಿದ್ದೇವೆ” ಎಂದು ಹೇಳಿದರು.

“ರಾಹುಲ್ ಗಾಂಧಿ ಅವರು ದೇಶದ ಪ್ರಜಾಪ್ರಭುತ್ವ ಉಳಿಸಲು, ಎಲ್ಲರಿಗೂ ನ್ಯಾಯ ದೊರಕಿಸಿಕೊಡಲು ಹೋರಾಟ ಮಾಡುತ್ತಿದ್ದಾರೆ. ಒಂದು ಮತವೂ ಸಹ ದುರುಪಯೋಗವಾಗಬಾರದು ಜೊತೆಗೆ ಯಾವುದೇ ರಾಜಕೀಯ ಪಕ್ಷಗಳು ಅಕ್ರಮ ಮಾಡಿಕೊಳ್ಳಬಾರದು ಎಂದು ಈ ಹೋರಾಟ ಮಾಡಿದ್ದಾರೆ” ಎಂದರು.

ಆಯೋಗವು ನಿಮಗೂ ನೋಟಿಸ್ ನೀಡಿರುವ ಬಗ್ಗೆ ಕೇಳಿದಾಗ, “ನಾನು ಆಯೋಗದ ಬಳಿ ಒಂದಷ್ಟು ಮಾಹಿತಿಗಳನ್ನು ಕೇಳಿದ್ದೇನೆ. ನನಗೆ ಇನ್ನೂ ಕೊಟ್ಟಿಲ್ಲ. ನನಗೆ ವಾಟ್ಸ್ ಆಪ್ ನಲ್ಲಿ ಕಳುಹಿಸಿದ್ದಾರೆ. ನಾನು ಅದನ್ನು ಇನ್ನು ಗಮನಿಸಿಲ್ಲ. ಅವರಿಗೆ ಏನು ಬೇಕೋ ಅದೆಲ್ಲವನ್ನು ನೀಡೋಣ. ನಮ್ಮ ಸಂಶೋಧನಾ ತಂಡ ಯಾವ ವಿಚಾರಗಳನ್ನು ಶೋಧಿಸಿದ್ದಾರೋ ಅದೆಲ್ಲವನ್ನು ನಾವು ನೀಡುತ್ತೇವೆ. ಮಾಧ್ಯಮದವರು ಸಹ ಅಕ್ರಮ ನಡೆದ ಜಾಗಗಳಿಗೆ ತೆರಳಿ ಮನೆ ಸಂಖ್ಯೆ, ವಾಸವಿರುವ ಜನರ ಬಗೆಗಿನ ವಾಸ್ತವಾಂಶ ತಿಳಿಸಿದ್ದಾರೆ” ಎಂದು ಹೇಳಿದರು.

“ಬಿಹಾರದ ಡಿಸಿಎಂ ಅವರು ಸಹ ಎರಡು ಎಪಿಕ್ ನಂಬರ್ ಹೊಂದಿದ್ದಾರೆ ಎಂದು ಬಿಹಾರದ ತೇಜಸ್ವಿ ಯಾದವ್ ತಿಳಿಸಿದ್ದಾರೆ. ಇದನ್ನು ಚುನಾವಣಾ ಆಯೋಗ ನೋಡಲು ಆಗುವುದಿಲ್ಲವೇ? ಜವಾಬ್ದಾರಿ ಇಲ್ಲವೇ? ಬೇಕಾದಷ್ಟು ತಪ್ಪುಗಳಾಗಿವೆ. ನಾವು ಇದರ ಬಗ್ಗೆ ಹೋರಾಟ ಮುಂದುವರೆಸುತ್ತೇವೆ”ಎಂದರು.

“ತಪ್ಪು ಮಾಹಿತಿ ನೀಡಿದ್ದರೆ ಚುನಾವಣಾ ಆಯೋಗ ಪ್ರಕರಣ ದಾಖಲಿಸುವುದಾದರೆ ದಾಖಲಿಸಲಿ. ನಾವು ಈ ದೇಶದ ಜನರಿಗೆ ನಡೆದಿರುವ ಸಂಗತಿಗಳನ್ನು ತಿಳಿಸಿದ್ದೇವೆ. ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮ ಕೂಡ ಈ ಬಗ್ಗೆ ಜನರಿಗೆ ಹೆಚ್ಚು, ಹೆಚ್ಚು ಅರಿವು ಮೂಡಿಸಬೇಕು” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...