ಉಪಜಾತಿಗಳಿಗೆ ಸಿಗದ ಮೀಸಲು ಸೌಲಭ್ಯ ಗೊಂದಲ ನಿವಾರಿಸಲು ಕೇಳಿದ್ದೇವೆ: ಎಂ ಬಿ ಪಾಟೀಲ್ ಸ್ಪಷ್ಟನೆ

Date:

ಒಂದೇ ಜಾತಿಗೆ ಸೇರಿದ ಉಪಜಾತಿಗಳಿಗೆ ಮೀಸಲು ಸೌಲಭ್ಯ ಸಿಗುವುದಕ್ಕೆ ಸಂಬಂಧಿಸಿದಂತೆ ಗೊಂದಲಗಳಿವೆ. ಇದನ್ನು ಸರಿಪಡಿಸಿ ಎಂದಷ್ಟೇ ನಾವು ಮುಖ್ಯಮಂತ್ರಿಯವರಲ್ಲಿ ಕೇಳಿಕೊಂಡಿದ್ದೇವೆ ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಸೋಮವಾರ ಸ್ಪಷ್ಟಪಡಿಸಿದರು.

ವೈಜ್ಞಾನಿಕ ಜಾತಿಗಣತಿಗಾಗಿ ಆಗ್ರಹಿಸಿ ‘ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ’ ವತಿಯಿಂದ ನೀಡಲಾಗಿರುವ ಮನವಿಗೆ ಸಹಿ ಮಾಡಿರುವವರ ಪೈಕಿ ಒಬ್ಬರಾದ ಸಚಿವ ಎಂ ಬಿ ಪಾಟೀಲರನ್ನು ಸುದ್ದಿಗಾರರು ಈ ಬಗ್ಗೆ ಕೇಳಿದಾಗ ಅವರು ಪ್ರತಿಕ್ರಿಯಿಸಿದರು.

“ಇರುವ ಸಮಸ್ಯೆಗಳನ್ನು ಗಮನಕ್ಕೆ ತರುವುದರಲ್ಲಿ ಯಾವುದೇ ತಪ್ಪು ಇಲ್ಲ. ಉದಾಹರಣೆಗೆ, ಲಿಂಗಾಯತರಲ್ಲಿ ಗಾಣಿಗ, ಸಾದರ ಹೀಗೆ 50ಕ್ಕೂ ಹೆಚ್ಚು ಉಪಜಾತಿಗಳು ಇದ್ದು ಅವರಿಗೆ ಲಿಂಗಾಯತ-ಗಾಣಿಗ, ಲಿಂಗಾಯತ- ಸಾದರ ಎಂದು ನಮೂದಿಸಿದ್ದರೆ 2ಎ ಪ್ರವರ್ಗದಡಿ ಮೀಸಲಾತಿ ಸಿಗುವುದಿಲ್ಲ. ಈ ಕಾರಣಕ್ಕೆ ಅವರೆಲ್ಲ ಹಿಂದೂ-ಗಾಣಿಗ ಹಿಂದೂ-ಸಾದರ ಎಂದು ನಮೂದಿಸಿಕೊಳ್ಳುತ್ತಾರೆ. ಇಂತಹ ಸಮಸ್ಯೆಗಳನ್ನು ಸರಿಪಡಿಸಲು ನಾವು ಮುಖ್ಯಮಂತ್ರಿ ಅವರನ್ನು ಕೋರಿದ್ದೇವೆ. ಈ ತೊಂದರೆಗಳ ಬಗ್ಗೆ ಅವರಿಗೂ ಗೊತ್ತಿದೆ” ಎಂದು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜಕೀಯ ಸಂಸ್ಕೃತಿಯನ್ನು ಅಧೋಗತಿಗೆ ತಳ್ಳುತ್ತಿರುವ ಬಿಜೆಪಿ ಅಂತಃಕಲಹ

“ಇಂತಹ ತೊಡಕುಗಳು ಒಕ್ಕಲಿಗ ಜನಾಂಗ ಸೇರಿದಂತೆ ಬೇರೆ ಸಮುದಾಯಗಳಿಗೂ ಇರಬಹುದು. ಇದ್ದರೆ, ಅವನ್ನು ಕೂಡ ಸರಿಪಡಿಸುವುದರಲ್ಲಿ ತಪ್ಪೇನಿಲ್ಲ” ಎಂದು ಸಚಿವರು ಅಭಿಪ್ರಾಯಪಟ್ಟರು.

“ಕಾಂಗ್ರೆಸಿನಲ್ಲಿ ‘ಒಬ್ಬ ವ್ಯಕ್ತಿ, ಒಂದು ಹುದ್ದೆ’ ನೀತಿ ಅನುಸರಿಸುವ ಸಾಧ್ಯತೆ ಬಗ್ಗೆ ಕೇಳಿದಾಗ, ಅದರ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ತೆಗೆದುಕೊಳ್ಳುತ್ತಾರೆ. ಬೇರೆಯವರಿಗೂ ಅವಕಾಶ ಸಿಗಲಿ ಎಂಬ ಕಾರಣಕ್ಕೆ ವರಿಷ್ಠರು ತೀರ್ಮಾನ ತೆಗೆದುಕೊಂಡಾಗ ಅದಕ್ಕೆ ತಕ್ಕಂತೆ ನಾವು ನಡೆದುಕೊಳ್ಳಬೇಕಾಗುತ್ತದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...