ಶ್ರೀರಾಮುಲು ಕಾಂಗ್ರೆ‌ಸ್‌ಗೆ ಕೊಟ್ಟ ಹಣ ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ: ಡಿ.ಕೆ.ಶಿವಕುಮಾರ್

Date:

ಶ್ರೀರಾಮುಲು ಅವರು ಕಾಂಗ್ರೆಸ್ ಪಕ್ಷಕ್ಕೆ ಹಣ ನೀಡಿದ್ದು, ಅದನ್ನೇ ನಾವು ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಲೇವಡಿ ಮಾಡಿದರು.

ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಮಾಧ್ಯಮಗಳು ಬಿಹಾರ ಚುನಾವಣೆಗೆ ಸಿಎಂ, ಡಿಸಿಎಂ 300 ಕೋಟಿ ರೂ. ಕಪ್ಪ ಕಾಣಿಕೆ ನೀಡಿದ್ದಾರೆ ಎಂಬ ಶ್ರೀರಾಮುಲು ಹೇಳಿಕೆ ಬಗ್ಗೆ ಹೀಗೆ ಪ್ರತಿಕ್ರಿಯಿಸಿದರು.

ಟನಲ್ ರಸ್ತೆ ಮಾಡಲು ಬಿಡುವುದಿಲ್ಲ ಎಂಬ ಸಂಸದ ತೇಜಸ್ವಿ ಸೂರ್ಯ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಬಿಜೆಪಿ ನಾಯಕರಿಗೆ ಬೆಂಗಳೂರು ಅಭಿವೃದ್ಧಿ ಬಗ್ಗೆ ಕಾಳಜಿ ಇಲ್ಲ. ಅವರ ಕಾಲದಲ್ಲಿ ಬೆಂಗಳೂರು ಅಭಿವೃದ್ಧಿಗೆ ಏನು ಮಾಡಿದ್ದಾರೆ? ನಾನು ಈ ವಿಚಾರದಲ್ಲಿ ತಾಂತ್ರಿಕ ತಜ್ಞ ಅಲ್ಲ. ಅವರೂ ತಜ್ಞರಲ್ಲ. ಅದಕ್ಕಾಗಿಯೇ ಪ್ರತ್ಯೇಕ ತಾಂತ್ರಿಕ ತಜ್ಞರ ತಂಡವೇ ಇದೆ. ಅವರು ನಗರ ರೈಲು ಯೋಜನೆ ಮಾಡಬೇಕು ಎಂದು ಹೇಳುತ್ತಿದ್ದಾರೆ. ಅದನ್ನು ಮಾಡಲಿ, ಅದರಲ್ಲಿ ತಪ್ಪೇನು ಇಲ್ಲ. ಇದಕ್ಕೆ ಅಗತ್ಯವಾದ ಅನುದಾನವನ್ನು ಕೇಂದ್ರ ಸರ್ಕಾರದಿಂದ ಕೊಡಿಸಲಿ. ನಮ್ಮದೇ ರಾಜ್ಯದ ಸೋಮಣ್ಣ ಅವರು ಕೇಂದ್ರ ಸಚಿವರಾಗಿದ್ದಾರೆ. ಅವರ ನೆರವು ಪಡೆಯಲಿ, ಏನು ಬೇಕಾದರೂ ಮಾಡಲಿ. ಆವರು ಹೋರಾಟ ಮಾಡುವುದಾದರೆ ಮಾಡಲಿ, ಬೇಡ ಎಂದು ಹೇಳಿದವರು ಯಾರು? ಬಿಜೆಪಿಯಲ್ಲಿ ತೇಜಸ್ವಿ ಸೂರ್ಯ ಹಾಗೂ ಅಶೋಕ್ ಹೊರತಾಗಿ ಉಳಿದ ಯಾವುದೇ ನಾಯಕರು ಮಾತನಾಡುತ್ತಿಲ್ಲ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ಟೀಲ್ ಬ್ರಿಡ್ಜ್ ಮಾದರಿಯಲ್ಲೇ ಟನಲ್ ರಸ್ತೆ ಯೋಜನೆ ಮುರಿದು ಬೀಳುತ್ತಾ ಎಂದು ಕೇಳಿದಾಗ, “ನಾವು ನಮ್ಮ ಕೆಲಸ ಮಾಡುತ್ತೇವೆ. ನಮ್ಮ ಆಸಕ್ತಿ ನೋಡಿ ಜನರು ನಮ್ಮ ಪ್ರಯತ್ನಕ್ಕೆ ಬೆಂಬಲ ನೀಡುತ್ತಿದ್ದಾರೆ. ನಮ್ಮ ಕೆಲಸ ಅನುಷ್ಠಾನ ಆಗಲಿದೆ ಎಂಬ ವಿಶ್ವಾಸ ಇದೆ” ಎಂದರು.

ನವೆಂಬರ್ ಕ್ರಾಂತಿ, ಸಿಎಂ ಬದಲಾವಣೆ, ದಲಿತ ಸಿಎಂ ವಿಚಾರವಾಗಿ ಸಚಿವರ ಚರ್ಚೆ ಬಗ್ಗೆ ಕೇಳಿದಾಗ, “ಅನಗತ್ಯ ಮಾತನಾಡಿ ದಣಿವಾಗುವುದು ಬೇಡ ಎಂದು ಮನವಿ ಮಾಡುತ್ತೇನೆ” ಎಂದು ತಿಳಿಸಿದರು.

ವರದಿ ಬಳಿಕ ದಿನಾಂಕ ನಿಗದಿ

ರಾಹುಲ್ ಗಾಂಧಿ ಅವರು ಇದೇ ತಿಂಗಳು 20ರಂದು ರಾಜ್ಯಕ್ಕೆ ಭೇಟಿ ನೀಡಿ ಕಾಂಗ್ರೆಸ್ ಕಚೇರಿ ಶಂಕುಸ್ಥಾಪನೆ ಮಾಡಲಿದ್ದಾರೆಯೇ ಎಂದು ಕೇಳಿದಾಗ, ‘ಇನ್ನೂ ದಿನಾಂಕ ಅಂತಿಮವಾಗಿಲ್ಲ. ನಾನು ಮನವಿ ಸಲ್ಲಿಸಿದ್ದೇನೆ. ಕಚೇರಿ ನಿರ್ಮಾಣ ಜಾಗದ ಕಾಗದ ಪತ್ರ ಸಿದ್ಧವಾಗುತ್ತಿದೆ. ಈ ಕಚೇರಿ ನಿರ್ಮಾಣ ವಿಚಾರದಲ್ಲಿ ಸಚಿವರು, ಸಂಸದರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಸೇರಿದಂತೆ ಯಾರ್ಯಾರು ಆಸಕ್ತಿ ತೋರಿದ್ದಾರೆ, ಯಾರು ತೋರಿಲ್ಲ ಎಂದು ವರದಿ ನೀಡುವಂತೆ ಹೈಕಮಾಂಡ್ ನಾಯಕರು ಕೇಳಿದ್ದಾರೆ. ನಾನು ವರದಿ ಸಿದ್ಧಪಡಿಸುತ್ತಿದ್ದು, ಅದನ್ನು ಕಳುಹಿಸಬೇಕು. ಆನಂತರ ಆವರು ದಿನಾಂಕ ನಿಗದಿ ಮಾಡುತ್ತಾರೆ” ಎಂದು ವಿವರಿಸಿದರು.

ಸಚಿವರು, ಶಾಸಕರ ಅಭಿಪ್ರಾಯ ಪಡೆದು ಅಭ್ಯರ್ಥಿ ಅಂತಿಮ

ಕೆಪಿಸಿಸಿ ಕಚೇರಿಯಲ್ಲಿ ನಡೆದ ಮೇಲ್ಮನೆ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಸಭೆ ಬಗ್ಗೆ ಮಾತನಾಡಿ, “ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಪ್ರತಿ ಕ್ಷೇತ್ರದಲ್ಲಿ ಐದಾರು ಮಂದಿ ಟಿಕೆಟ್ ಆಕಾಂಕ್ಷಿಗಳು ಇದ್ದಾರೆ. 8-10 ದಿನಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಮಾಡುತ್ತೇವೆ. ಮುಂದಿನ ಸಭೆಯಲ್ಲಿ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಚರ್ಚೆ ಮಾಡಿ ಅಭಿಪ್ರಾಯ ಪಡೆಯುತ್ತೇವೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...