ಕೋರ್ಟ್ ಆದೇಶವನ್ನು ಪಾಲಿಸುತ್ತೇವೆ, ಸತ್ಯ ಸುದ್ದಿಯ ಪ್ರಸಾರ ಮುಂದುವರಿಸುತ್ತೇವೆ: ಡಿಜಿಟಲ್ ಮಾಧ್ಯಮಗಳ ನಿರ್ಣಯ

Date:

ಸೌಜನ್ಯ ಅತ್ಯಾಚಾರ ಮತ್ತು ಹತ್ಯೆ ಹಾಗೂ ಧರ್ಮಸ್ಥಳದ ಸುತ್ತಮುತ್ತ ನಡೆಯಿತೆನ್ನಲಾದ ಸರಣಿ ಕೊಲೆಗಳನ್ನು ವರದಿ ಮಾಡುವ ವಿಚಾರದಲ್ಲಿ ನ್ಯಾಯಾಲಯಗಳ ಆದೇಶವನ್ನು ನಾವು ಪಾಲಿಸುವುದರ ಜೊತೆಗೆ ಸತ್ಯ ಸುದ್ದಿಯ ಪ್ರಸಾರವನ್ನು ಮುಂದುವರಿಸುವುದಾಗಿ ಡಿಜಿಟಲ್ ಮಾಧ್ಯಮಗಳ ನಿರ್ಣಯವನ್ನು ತೆಗೆದುಕೊಂಡಿದೆ.

ಧರ್ಮಸ್ಥಳದ ದೇವಾಲಯ ಹಾಗೂ ಸಂಸ್ಥೆಗಳ ಕಾರ್ಯದರ್ಶಿಯಾಗಿರುವ ಹರ್ಷೇಂದ್ರ ಕುಮಾರ್ ಅವರು 4,140 ಯೂಟ್ಯೂಬ್ ವಿಡಿಯೋಗಳು, 932 ಫೇಸ್‌ಬುಕ್ ಪೋಸ್ಟ್‌ಗಳು, 3,584 ಇನ್‌ಸ್ಟಾಗ್ರಾಮ್ ಪೋಸ್ಟ್‌ಗಳು, 108 ಸುದ್ದಿ ಲೇಖನಗಳು, 37 ರೆಡ್ಡಿಟ್ ಪೋಸ್ಟ್‌ಗಳು ಮತ್ತು 41 ಟ್ವೀಟ್‌ಗಳು ಸೇರಿದಂತೆ 8,842 ಲಿಂಕ್‌ಗಳ ಪಟ್ಟಿಯನ್ನು ನಿರ್ಬಂಧಿಸುವಂತೆ ಕೋರಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದಾರೆ.

ಧರ್ಮಸ್ಥಳದಲ್ಲಿ ಹಿಂದೆ ಸ್ವಚ್ಛತಾ ಕಾರ್ಮಿಕನಾಗಿದ್ದೆ ಎಂದು ಹೇಳಿಕೊಂಡ ವ್ಯಕ್ತಿ ನೀಡಿರುವ ದೂರಿನ ಅನ್ವಯ ದಾಖಲಾಗಿರುವ ಧರ್ಮಸ್ಥಳ ಠಾಣೆಯಲ್ಲಿ ಎಫ್‌ಐಆರ್‌ನಲ್ಲಿ ತಮ್ಮ ವಿರುದ್ಧ ಆರೋಪಗಳು ಇಲ್ಲದಿದ್ದರೂ ತಮ್ಮ ಕುಟುಂಬ, ದೇವಾಲಯ ಹಾಗೂ ಸಂಸ್ಥೆಗಳ ವಿರುದ್ಧ ಆನ್‌ಲೈನ್‌ನಲ್ಲಿ ಮತ್ತು ಮಾಧ್ಯಮಗಳಲ್ಲಿ ಸುಳ್ಳು ಹಾಗೂ ಮಾನಹಾನಿಕರ ಹೇಳಿಕೆಗಳನ್ನು ನೀಡಲಾಗುತ್ತಿದೆ ಎಂದು ಹರ್ಷೇಂದ್ರ ಕುಮಾರ್‌ ಆಕ್ಷೇಪಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಾದ ಆಲಿಸಿದ್ದ ಬೆಂಗಳೂರಿನ ಹೆಚ್ಚುವರಿ ನಗರ ಸಿವಿಲ್ ಮತ್ತು ಸತ್ರ ನ್ಯಾಯಾಧೀಶ ವಿಜಯ ಕುಮಾರ್ ರೈ ಅವರು, ಮುಂದಿನ ವಿಚಾರಣೆಯವರೆಗೆ ಡಿಜಿಟಲ್, ಸಾಮಾಜಿಕ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಯಾವುದೇ ಮಾನಹಾನಿಕರ ವಸ್ತುವಿಷಯ ಪ್ರಕಟಿಸದಂತೆ ಇಲ್ಲವೇ ಹಂಚದಂತೆ ಪ್ರತಿವಾದಿಗಳು ಮತ್ತು ಅಪರಿಚಿತ ವ್ಯಕ್ತಿಗಳಿಗೆ ನಿರ್ಬಂಧಿಸಿ ಜುಲೈ 18ರಂದು ಏಕಪಕ್ಷಕೀಯ ಪ್ರತಿಬಂಧಕಾದೇಶವನ್ನು ಹೊರಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಈದಿನ ಡಾಟ್ ಕಾಮ್ ಕಚೇರಿಯಲ್ಲಿ ಶುಕ್ರವಾರ ಯೂಟ್ಯೂಬರ್ಸ್‌ ಹಾಗೂ ಡಿಜಿಟಲ್ ಮಾಧ್ಯಮಗಳ ಸಭೆಯನ್ನು ಕರೆಯಲಾಗಿತ್ತು. ಈ ಸಭೆಯಲ್ಲಿ ಕೋರ್ಟ್ ಆದೇಶವನ್ನು ಪಾಲಿಸುವ, ಸತ್ಯ ಸುದ್ದಿಯ ಪ್ರಸಾರವನ್ನು ಮುಂದುವರೆಸುವ ಹಾಗೂ ಒಂದಾಗಿ ಕಾನೂನು ಹೋರಾಟ ಮಾಡುವ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ.

ಸಭೆಯಲ್ಲಿ ಮಹತ್ವದ ನಿರ್ಣಯಗಳ ಜೊತೆಗೆ, ಸದರಿ ಆದೇಶಗಳನ್ನು ನ್ಯಾಯಾಲಯದಲ್ಲೇ ಪ್ರಶ್ನಿಸುವ ನಮ್ಮ ಹಕ್ಕನ್ನು ಉಳಿಸಿಕೊಳ್ಳುತ್ತಾ, ಈ ಸದ್ಯ ಕೆಳಹಂತದ ಮತ್ತು ರಾಜ್ಯ ಉಚ್ಚ ನ್ಯಾಯಾಲಯದ ಆದೇಶಗಳನ್ನು ನಾವು ಪಾಲಿಸಲು ಬದ್ಧರಿದ್ದೇವೆ ಎಂದು ತಿಳಿಸಿದ್ದಾರೆ.

meeting

ಆದರೆ, ಆದೇಶದಲ್ಲೇ ಸೂಚಿಸಿರುವ ಹಾಗೆ ಮತ್ತು ನಮ್ಮ ಪತ್ರಿಕಾಧರ್ಮಕ್ಕೆ ಬದ್ಧರಾಗಿದ್ದುಕೊಂಡು ಯಾರದ್ದೇ ಮೇಲೆ ಆಧಾರರಹಿತವಾದ, ಮಾನನಷ್ಟಕ್ಕೆ ಕಾರಣವಾಗುವ ಸುದ್ದಿ ಅಥವಾ ವಿಶ್ಲೇಷಣೆಗಳನ್ನು ನಾವು ಪ್ರಕಟಿಸುವುದಿಲ್ಲ. ಅದೇ ಸಂದರ್ಭದಲ್ಲಿ ನಡೆಯುವ ಘಟನಾವಳಿಗಳಿಗೆ ಸಂಬಂಧಿಸಿದಂತೆ ಯಥಾವತ್ ಸುದ್ದಿಗಳನ್ನು ಪ್ರಕಟಿಸುವ ನಮ್ಮ ಹಕ್ಕನ್ನು ನ್ಯಾಯಾಲಯವು ನಿರ್ಬಂಧಿಸಿಲ್ಲ ಎನ್ನುವುದನ್ನು ನಾವು ಅರಿತಿದ್ದೇವೆ. ಹೀಗಾಗಿ ಸುದ್ದಿಗಳನ್ನು ಪ್ರಕಟಿಸುವ ಮತ್ತು ಈ ಹೊತ್ತು ಎತ್ತಬೇಕಾದ ಪ್ರಶ್ನೆಗಳನ್ನು ಎತ್ತುವ ನಮ್ಮ ಹಕ್ಕನ್ನು ಚಲಾಯಿಸುತ್ತೇವೆ ಮತ್ತು ಆ ಮೂಲಕ ನಮ್ಮ ಕರ್ತವ್ಯವನ್ನು ಪಾಲಿಸಲು ನಾವು ಬದ್ಧರಾಗಿದ್ದೇವೆ ಎಂಬ ನಿರ್ಣಯವನ್ನು ಡಿಜಿಟಲ್ ಮಾಧ್ಯಮಗಳಲ್ಲಿ ಸಕ್ರಿಯರಾಗಿರುವವರು ತೆಗೆದುಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ಈದಿನ ಯೂಟ್ಯೂಬ್‌ ಬ್ಲಾಕ್ ತೆರವುಗೊಳಿಸುವಂತೆ ಕರ್ನಾಟಕ ಹೈಕೋರ್ಟ್‌ ಮಧ್ಯಂತರ ಆದೇಶ

ಸಭೆಯಲ್ಲಿ ದ ನ್ಯೂಸ್‌ ಮಿನಿಟ್‌ನ ಪ್ರತಿನಿಧಿಗಳಾದ ಧನ್ಯಾ ರಾಜೇಂದ್ರನ್, ಪೂಜಾ ಪ್ರಸನ್ನ, ಈ ದಿನ ಟಿವಿಯ ಡಾ. ಬಸವರಾಜು ಬಿ.ಸಿ, ಈ ದಿನ.ಕಾಮ್‌ ಸಂಪಾದಕರಾದ ಬಸವರಾಜು ಮೇಗಲಕೇರಿ, ವಾರ್ತಾಭಾರತಿಯ ಆಝಾದ್ ಕಂಡಿಗ, ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಹಾಗೂ ಪರಶುರಾಮ್, ನಾನೂ ಗೌರಿ.ಕಾಂ ನ ಗುರುಪ್ರಸಾದ್ ಡಿ ಎನ್, ಪ್ರತಿಧ್ವನಿಯ ಶಿವಕುಮಾರ್, ನ್ಯಾಷನಲ್ ಟಿವಿಯ ಮಂಜು ಬಣಗೆರೆ, ಸಾಮಾಜಿಕ ಕಾರ್ಯಕರ್ತೆ ನಜ್ಮಾ ನಜೀರ್ ಚಿಕ್ಕನೇರಳೆ, ಯೂಟ್ಯೂಬರ್ಸ್‌ಗಳಾದ ಕಲಾ ಮಾಧ್ಯಮ ಪರಮೇಶ್ವರ್, ರಾ ಚಿಂತನ್, ಕುಡ್ಲ ರ‍್ಯಾಂಪೇಜ್‌ ಅಜಯ್‌ ಅಂಚನ್, ಪತ್ರಕರ್ತರಾದ ಕನ್ನಡ ಪ್ಲಾನೆಟ್ ದಿನೇಶ್ ಕುಮಾರ್ ದಿನೂ, V4 ನ್ಯೂಸ್‌ನ ಲಕ್ಷ್ಮಣ್ ಕುಂದರ್, ಪೀಪಲ್ ಮೀಡಿಯಾದ ಸುರಭಿ ರೇಣುಕಾಂಬಿಕೆ, ಪ್ರಸ್ತುತ ನ್ಯೂಸ್‌ನ ಬಶೀರ್ ಅಡ್ಯನಡ್ಕ, ಸನ್ಮಾರ್ಗ ನ್ಯೂಸ್‌ನ ಆರ್ ಎ ಲೋಹಾನಿ, ಆಶಾ ಮುಸ್ಸಂಜೆ ಸಮಯ, ಪೊಲೀಸ್ ವಾಣಿ ರಾಘವೇಂದ್ರಚಾರಿ, ದ ಪಾಲಿಟಿಕ್‌ನ ಸಿದ್ದಪ್ಪ ಮೂಲಗೆ, ಜನಶಕ್ತಿ ಮೀಡಿಯಾದ ಗುರುರಾಜ್ ದೇಸಾಯಿ, ತ್ರಿವರ್ಣ ನ್ಯೂಸ್ ಉಮರ್ ಫಾರೂಕ್, ಜಗದೀಶ್ ಕನ್ನಡ ಜಾಣ ಜಾಣೆಯರು, ಕನ್ನಡ ವನ್‌ನ ಭಾಗ್ಯನಾರಾಯಣ ಬೊಗ್ಗವರಪು, ಗೌರಿ ಮೀಡಿಯಾದ ಚಂದ್ರು ತರಹುಣಸೆ, ದೊಡ್ಡಿಪಾಳ್ಯ ನರಸಿಂಹ ಮೂರ್ತಿ, ಡಾ. ವಾಸು ಎಚ್‌ ವಿ, ಹೇಮಾ ವೆಂಕಟ್‌ ಸೇರಿದಂತೆ ಹಲವರು ಸಭೆಯಲ್ಲಿ ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...