ನಮ್ಮ ಸಮುದಾಯದ ಜಾತಿ ಜನಗಣತಿ ನಾವೇ ಮಾಡಿಕೊಳ್ಳುತ್ತೇವೆ: ಒಕ್ಕಲಿಗರ ಸಂಘ ನಿರ್ಧಾರ

Date:

ರಾಜ್ಯ ಸರ್ಕಾರ ಇತ್ತೀಚೆಗೆ ಸಚಿವ ಸಂಪುಟದಲ್ಲಿ ಮಂಡಿಸಿದ ಜಾತಿ ಗಣತಿ (ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ) ವರದಿಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಇದೀಗ ರಾಜ್ಯ ಒಕ್ಕಲಿಗರ ಸಂಘ ಈ ವರದಿ ಜಾರಿಗೆ ಆಕ್ರೋಶ ವ್ಯಕ್ತಪಡಿಸಿದೆ. ವರದಿಯನ್ನು ತಿರಸ್ಕರಿಸುವಂತೆ ಆಗ್ರಹಿಸಿ ಲಿಂಗಾಯತ ಸೇರಿದಂತೆ ಇತರ ಸಮುದಾಯಗಳೊಂದಿಗೆ ಸೇರಿ ಸಂಘಟಿತ ಹೋರಾಟಕ್ಕೆ ನಿರ್ಧರಿಸಿದೆ.

ಹಿಂದುಳಿದ ವರ್ಗಗಳ ಜಾತಿಗಣತಿ ವರದಿಯನ್ನು ರಾಜ್ಯ ಸಂಪುಟ ಸಭೆ ಸ್ವೀಕರಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಒಕ್ಕಲಿಗರ ಮಂಗಳವಾರ ಸಂಘ ತುರ್ತು ಸಭೆ ನಡೆಸಿತು. ಸಭೆಯಲ್ಲಿ ಕಾಂತರಾಜು ನೇತೃತ್ವದ ಆಯೋಗ ನಡೆಸಿದ ಸಮೀಕ್ಷೆಯ ದತ್ತಾಂಶಗಳನ್ನು ಆಧರಿಸಿ ಜಯಪ್ರಕಾಶ್ ಹೆಗಡೆ ನೇತೃತ್ವದ ಆಯೋಗ ನೀಡಿರುವ ವರದಿ ಸಂಪೂರ್ಣ ಅವೈಜ್ಞಾನಿಕವಾಗಿದೆ ಎನ್ನುವ ತೀರ್ಮಾನಕ್ಕೆ ಬರಲಾಯಿತು.

ಸಂಘದ ಅಧ್ಯಕ್ಷ ಕೆಂಚಪ್ಪಗೌಡ ಈ ದಿನ.ಕಾಂ ಜೊತೆ ಮಾತನಾಡಿ, “ಏಪ್ರಿಲ್ 17ರಂದು ನಡೆಯಲಿರುವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ ಈ ವರದಿಯ ಬಗ್ಗೆ ಯಾವ ತೀರ್ಮಾನ ಕೈಗೊಳ್ಳಲಿದೆ ಎಂಬುದನ್ನು ನೋಡಿಕೊಂಡು ಮುಂದಿನ ನಿರ್ಧಾರ ಮಾಡುತ್ತೇವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ವರದಿ ಬಗ್ಗೆ ನಮಗೆ ಒಪ್ಪಿಗೆ ಇಲ್ಲ. ಮರಳಿ ಅಧ್ಯಯನ ನಡೆಯಲಿ. ಅಧ್ಯಯನ ನಡೆಯದಿದ್ದರೆ ಬೆಂಗಳೂರು ಮತ್ತು ಕರ್ನಾಟಕ ಬಂದ್‌ಗೆ ಕರೆ ನೀಡುತ್ತೇವೆ. ಮರಳಿ ಅಧ್ಯಯನ ನಡೆಸಿದರೆ ಮೂರು ತಿಂಗಳಲ್ಲಿ ಮುಗಿಸಬಹುದು. ನಾವೂ ಈ ಬಗ್ಗೆ ಯೋಚಿಸುತ್ತಿದ್ದು ನಮ್ಮ ಸಮುದಾಯ ಜಾತಿ ಜನಗಣತಿನ್ನು ನಾವು ಪ್ರತ್ಯೇಕವಾಗಿ ಮಾಡಿಕೊಳ್ಳುತ್ತೇವೆ” ಎಂದು ಸ್ಪಷ್ಟಪಡಿಸಿದರು.

“ಜಯಪ್ರಕಾಶ್ ಹೆಗಡೆ ನೇತೃತ್ವದ ಆಯೋಗ ಸಲ್ಲಿಸಿರುವ ವರದಿ ಸಂಪೂರ್ಣ ಅವೈಜ್ಞಾನಿಕವಾಗಿದೆ. ಹತ್ತು ವರ್ಷಗಳ ಹಿಂದೆ ನಡೆದ ಸಮೀಕ್ಷೆಯನ್ನು ಆದರಿಸಿ ಈಗ ವರದಿ ಸಿದ್ದಪಡಿಸಲಾಗಿದೆ ಇದಕ್ಕೆ ಯಾವುದೇ ರೀತಿಯ ವೈಜ್ಞಾನಿಕ ತಳಹದಿ ಇಲ್ಲ. ಈ ವರದಿಯಿಂದ ಅನ್ಯಾಯಕ್ಕೆ ಒಳಗಾಗಿರುವ ಲಿಂಗಾಯತ, ಬ್ರಾಹ್ಮಣ ಸೇರಿ ಇತರ ಸಮುದಾಯಗಳನ್ನು ಒಟ್ಟುಗೂಡಿಸಿ ರಾಜ್ಯವನ್ನೇ ಬಂದ್ ಆಗುವ ರೀತಿಯಲ್ಲಿ ಹೋರಾಟ ಮಾಡುತ್ತೇವೆ” ಎಂದು ಪ್ರಕಟಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...