ಹವಾಮಾನ | ಉತ್ತರ ಕರ್ನಾಟಕದಲ್ಲಿ ಇಂದು ಬಿರುಗಾಳಿ ಸಹಿತ ಭಾರೀ ಮಳೆ ಸಾಧ್ಯತೆ, ಎಚ್ಚರಿಕೆಯಿಂದಿರಲು ಸೂಚನೆ

Date:

ಸೋಮವಾರ (ಜೂ.16) ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಎಚ್ಚರಿಕೆಯಿಂದ ಹವಾಮಾನ ಇಲಾಖೆ ಸೂಚನೆ ನೀಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹವಾಮಾನ ಇಲಾಖೆಯ ಸೂಚನೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು ಹಾಗೂ ಶಿವಮೊಗ್ಗದಲ್ಲಿ ಸೋಮವಾರ ಮಿಂಚು ಮತ್ತು 40-50 ಕಿ.ಮೀ ವೇಗದಲ್ಲಿ ತಲುಪುವ ಬೀರುಗಾಳಿ ಸಹಿತ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆಲವು ಪ್ರದೇಶಗಳಲ್ಲಿ ತಾತ್ಕಾಲಿಕವಾಗಿ ವಿದ್ಯುತ್ ವ್ಯತ್ಯಯ ಉಂಟಾಗಬಹುದು. ಸಣ್ಣಪುಟ್ಟ ಸಂಚಾರ ದಟ್ಟಣೆ ಸಹಜವಾಗಿರುತ್ತದೆ. ದುರ್ಬಲ ಮರದ ಕೊಂಬೆಗಳು ಗಾಳಿಗೆ ಬೀಳಬಹುದು.

ಮನೆಯೊಳಗೆ ಇರಿ, ಕಿಟಕಿಗಳು ಮತ್ತು ಬಾಗಿಲುಗಳನ್ನು ಮುಚ್ಚಿ ಮತ್ತು ಸಾಧ್ಯವಾದರೆ ಪ್ರಯಾಣವನ್ನು ತಪ್ಪಿಸಿ. ಸುರಕ್ಷಿತ ಆಶ್ರಯವನ್ನು ತೆಗೆದುಕೊಳ್ಳಿ. ಮರಗಳ ಕೆಳಗೆ ಆಶ್ರಯ ಪಡೆಯಬೇಡಿ. ಎಲೆಕ್ಟ್ರಿಕ್ ಉಪಕರಣಗಳನ್ನು ತಕ್ಷಣವೇ ಅನ್‌ಪ್ಲಗ್ ಮಾಡಿ. ತಕ್ಷಣ ಜಲಮೂಲಗಳಿಂದ ಹೊರಬನ್ನಿ. ವಿದ್ಯುಚ್ಛಕ್ತಿ ಹಿರಿಯುವ ಎಲ್ಲ ವಸ್ತುಗಳಿಂದ ದೂರವಿರಿ.
ನೀವು ಪ್ರಯಾಣಿಸುತ್ತಿದ್ದರೆ ಎಚ್ಚರಿಕೆಯಿಂದ ಚಾಲನೆ ಮಾಡಿ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನಾಲ್ಕು ಜಿಲ್ಲೆಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಕಾರಣ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ಸೋಮವಾರ ರಜೆ ಘೋಷಣೆ ಮಾಡಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡಿನ 6 ತಾಲೂಕಗಳಲ್ಲಿ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು,ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್​ಆರ್​​​ ಪುರ ತಾಲೂಕಿನಲ್ಲಿ ರಜೆ ಘೋಷಣೆ ಮಾಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸುತ್ತೋಲೆ ಹೊರಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...