ಹವಾಮಾನ | ಬೆಂಗಳೂರಿಗೆ ಮಳೆ ಅಲರ್ಟ್, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವಾರ ಪೂರ್ತಿ ಮಳೆ ಸಾಧ್ಯತೆ

Date:

ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಈ ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರಕ್ಕೂ ಮೂರು ದಿನ ಗುಡುಗು ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಉತ್ತರ ಒಳ ಕರ್ನಾಟಕದ ಧಾರವಾಡ, ಹಾವೇರಿ, ಗದಗ ಮತ್ತು ಕೊಪ್ಪಳದಲ್ಲಿ ಆಲಿಕಲ್ಲು ಮಳೆ ,ಬಾಗಲಕೋಟೆ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ, ದಕ್ಷಿಣ ಒಳನಾಡಿನ ದಾವಣಗೆರೆ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಮತ್ತು ಕೊಡಗಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿಗೆ ಮಳೆ ಅಲರ್ಟ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏಪ್ರಿಲ್ 28 ರಿಂದ ಆರಂಭವಾಗಿ ಮೂರು ದಿನ ಬೆಂಗಳೂರಿಗೆ ನಿರಂತರ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಕೊಪ್ಪಳ, ಧಾರವಾಡ, ಹಾವೇರಿ, ಗದಗ, ರಾಯಚೂರು, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಚಾಮರಾಜನಗರ, ಮಂಡ್ಯ, ರಾಮನಗರ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಈ ವೇಳೆ ಗಾಳಿಯ ವೇಗ ಗಂಟೆಗೆ 40-50 ಕಿ.ಮೀ ಇರಲಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.

ಏಪ್ರಿಲ್ 30ರಂದು ಸಹ ದಕ್ಷಿಣ ಕನ್ನಡ, ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ, ಬೀದರ್, ಬಾಗಲಕೋಟೆ, ಕೊಪ್ಪಳ, ಧಾರವಾಡ, ಹಾವೇರಿ, ಗದಗ, ರಾಯಚೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಮತ್ತು ಹಾಸನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಮೇ ಮೊದಲ ವಾರವೂ ಮಳೆ ಅಲರ್ಟ್

ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಕಡೆಗಳಲ್ಲಿ, ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗ ಗಂಟೆಗೆ 50-60 ಕಿ.ಮೀ ಇರಬಹುದು. ಅಲ್ಲದೆ ಆಲಿಕಲ್ಲು ಮಳೆಯಾಗುವ ಸಾಧ್ಯತೆಯೂ ಇದೆ. ಬೀದರ್, ಯಾದಗಿರಿ, ಗದಗ, ಕೊಪ್ಪಳ, ಹಾವೇರಿ ಮತ್ತು ರಾಯಚೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗ ಗಂಟೆಗೆ 50-60 ಕಿ.ಮೀ ಇರಬಹುದು. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...