ಹವಾಮಾನ | ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ: ಐಎಂಡಿ ಮುನ್ಸೂಚನೆ

Date:

ನಿನ್ನೆ (ಏ.28) ಬೆಂಗಳೂರು, ತುಮಕೂರು ಮಂಡ್ಯ, ಹಾಸನ ಸೇರಿದಂತೆ ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗಿದೆ. ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಹಲವೆಡೆ ಇಂದು (ಏ.29) ಕೂಡ ಹಗುರ ಅಥವಾ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನ ಕಲಬುರಗಿ, ಕೊಪ್ಪಳ, ಬೆಳಗಾವಿ, ಧಾರವಾಡ, ರಾಯಚೂರು, ಯಾದಗಿರಿ, ಹಾವೇರಿ, ಗದಗ, ದಕ್ಷಿಣ ಒಳನಾಡಿನ ರಾಮನಗರ, ಬೆಂಗಳೂರು ನಗರ, ಕೊಡಗು, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾಸನ, ಕೋಲಾರ, ಮಂಡ್ಯ, ತುಮಕೂರು ಮತ್ತು ಮೈಸೂರು ಜಿಲ್ಲೆಗಳಲ್ಲಿ ಹಾಗೂ ಕರಾವಳಿಯ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಲಿದೆ. ಗರಿಷ್ಠ 34°C ಮತ್ತು ಕನಿಷ್ಠ 23°C ತಾಪಮಾನ ಇರಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಹವಾಮಾನ | ವಿಜಯನಗರ ಸೇರಿ ಹಲವೆಡೆ ಮಳೆ; ಐಎಂಡಿ ಸ್ಪಷ್ಟನೆ

ಕರ್ನಾಟಕದಲ್ಲಿ ಮೇ.4ರವರೆಗೆ ಮಳೆ ಮುಂದುವರೆಯಲಿದ್ದು, ಕರಾವಳಿಯಲ್ಲಿ ಹೆಚ್ಚಿನ ಪ್ರಮಾಣದ ಮಳೆ ನಿರೀಕ್ಷೆಯಿದೆ. ಇನ್ನು ಇಂದು ಮತ್ತು ನಾಳೆ ಉತ್ತರ ಕರ್ನಾಟಕದ ಭಾಗದಲ್ಲಿ ಗಾಳಿಯ ವೇಗವು ಗಂಟೆಗೆ 50-60 ಕಿ.ಮೀ ವೇಗದಲ್ಲಿ ಇರಲಿದೆಯಂತೆ. ಬೆಂಗಳೂರು ಸೇರಿದಂತೆ ದಕ್ಷಿಣ ಕರ್ನಾಟಕ, ಕರಾವಳಿ ಹಾಗೂ ಉತ್ತರ ಕರ್ನಾಟಕದ ವಿವಿಧ ಭಾಗದಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆ ಆಗಲಿದೆ. ಆದರೆ, ಮೀನುಗಾರರಿಗೆ ಯಾವುದೇ ಮುನ್ಸೂಚನೆ ನೀಡಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...