ಬುಧವಾರದ ಕಲಾಪ ಕಿತ್ತೂರು & ಕಲ್ಯಾಣ ಕರ್ನಾಟಕ ಸಮಸ್ಯೆ ಚರ್ಚಿಸಲು ಮೀಸಲು: ಬಸವರಾಜ ಹೊರಟ್ಟಿ

Date:

ಬುಧವಾರ ದಿನ ಪ್ರಶ್ನೋತ್ತರ ಮುಗಿದ ನಂತರ ಇಡೀ ದಿನದ ಕಲಾಪವನ್ನು ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಚರ್ಚೆಗೆ ಮೀಸಲಿಡಲಾಗುವುದು ಎಂದು ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.

ಸುವರ್ಣಸೌಧದ ಎರಡನೇ ಮಹಡಿಯ ಕೊಠಡಿ ಸಂಖ್ಯೆ 238ರಲ್ಲಿ ಡಿಸೆಂಬರ್ 8ರಂದು ಪತ್ರಿಕಾಗೋಷ್ಠಿ ನಡೆಸಿ ಅವರು ಮಾಹಿತಿ ನೀಡಿ, “ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಬಗ್ಗೆ 145ನೇ ಅಧಿವೇಶನದಲ್ಲಿ 6 ಗಂಟೆ 35 ನಿಮಿಷ ಚರ್ಚೆಯಾಗಿದ್ದು, 19 ಜನ ಪರಿಷತ್ ಶಾಸಕರು ಮಾತನಾಡಿದ್ದಾರೆ. 151ನೇ ಅಧಿವೇಶನದಲ್ಲಿ 1 ಗಂಟೆ 40 ನಿಮಿಷ ಚರ್ಚೆಯಾಗಿದ್ದು 6 ಜನ ಪರಿಷತ್ ಶಾಸಕರು ಮಾತನಾಡಿದ್ದಾರೆ. 154ನೇ ಅಧಿವೇಶನದಲ್ಲಿ 5 ಗಂಟೆ 12 ನಿಮಿಷ ಚರ್ಚೆಯಾಗಿದ್ದು, 11 ಜನ ಪರಿಷತ್ ಶಾಸಕರು ಮಾತನಾಡಿದ್ದಾರೆ” ಎಂದರು.

“ಅದೇ ರೀತಿ ಈ ಬಾರಿಯ ಅಧಿವೇಶನದಲ್ಲಿ ಸಹ ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಚರ್ಚೆಗೆ ವಿಶೇಷ ಅವಕಾಶ ಕಲ್ಪಿಸಲಾಗುವುದು. ಕಲಾಪದಲ್ಲಿ ಕೃಷ್ಣಮೇಲ್ದಂಡೆ ಯೋಜನೆ, ಮಹಾದಾಯಿ, ಕಳಸಾ ಬಂಡೂರಿ ಯೋಜನೆಗಳ ಅನುಷ್ಠಾನದ ಬಗ್ಗೆ, ಅರಣ್ಯಭೂಮಿ ಅತೀಕ್ರಮಣ, ಸಂತ್ರಸ್ಥರ ಸಮಸ್ಯೆ ಹಾಗೂ ಪರಿಹಾರೋಪಾಯಗಳು., ಉತ್ತರ ಕರ್ನಾಟಕ ಭಾಗದ ರೈತರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಪರಿಹಾರಗಳು ಮತ್ತು ಉದ್ಯೋಗ ಸೃಷ್ಠಿಗೆ ಕ್ರಿಯಾಯೋಜನೆ ವಿಷಯಗಳ ಮೇಲೆ ಚರ್ಚೆಗೆ ಅವಕಾಶ ನೀಡಲಾಗುವುದು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“157ನೇ ಪರಿಷತ್ ಅಧಿವೇಶನದಲ್ಲಿ 10 ದಿನಗಳನ್ನು ಉಪವೇಶನದ ದಿನಗಳೆಂದು ನಿಗದಿಪಡಿಸಲಾಗಿದೆ. ಪ್ರಸಕ್ತ ಅಧಿವೇಶನಕ್ಕೆ ಇದುವರೆಗೆ ಒಟ್ಟು 1649 ಪ್ರಶ್ನೆಗಳನ್ನು ಸ್ವೀಕರಿಸಿದ್ದು, ಅವುಗಳಲ್ಲಿ 965 ಚುಕ್ಕೆ ಗುರುತಿನ ಹಾಗೂ 684 ಚುಕ್ಕೆ ರಹಿತ ಪ್ರಶ್ನೆಗಳಾಗಿವೆ. ನಿಯಮ 72ರಡಿ 112 ಸೂಚನೆಗಳನ್ನು ಸ್ವೀಕರಿಸಲಾಗಿದೆ. ನಿಯಮ 330 ರಡಿ ಬಂದಂತಹ 84 ಸೂಚನೆಗಳನ್ನು ಸ್ವೀಕರಿಸಲಾಗಿದೆ” ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಕಾರ್ಯದರ್ಶಿ ಕೆ ಆರ್ ಮಹಾಲಕ್ಷ್ಮಿ, ಅಪರ ಕಾರ್ಯದರ್ಶಿ ನಿರ್ಮಲಾ ಎಸ್ ಹಾಗೂ ಸಚಿವಾಲಯದ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...