ಕೇಂದ್ರ ಬಜೆಟ್ – 2025 | ರಾಜ್ಯದ ಸಚಿವರು ಹೇಳಿದ್ದೇನು?

Date:

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ 2025 -26ನೇ ಸಾಲಿನ ಕೇಂದ್ರ ಬಜೆಟ್ ಬಗ್ಗೆ ರಾಜ್ಯದ ಸಚಿವರು ಮತ್ತು ಕಾಂಗ್ರೆಸ್‌ ನಾಯಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೃಷಿಕರ ಪಾಲಿಗೆ ನಿರಾಶಾದಾಯಕ ಬಜೆಟ್:‌ ಚಲುವರಾಯಸ್ವಾಮಿ

“ಕೇಂದ್ರ ಬಜೆಟ್ ಕೃಷಿಕರ ಪಾಲಿಗೆ ನಿರಾಶಾದಾಯಕವಾಗಿದೆ. ರೈತರು, ಕೃಷಿ ಕ್ಷೇತ್ರವನ್ನು ನಿರ್ಲಕ್ಷಿಸಲಾಗಿದೆ. ಕೃಷಿಗೆ ಕಡಿಮೆ ಆದ್ಯತೆ ನೀಡಲಾಗಿದೆ. ಕೃಷಿ ವೈಜ್ಞಾನಿಕ ಸಂಶೋಧನೆಗಳಿಗೆ ಸಾಕಷ್ಟು ಹಣಕಾಸು ಒದಗಿಸಲಾಗಿಲ್ಲ, ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ ಮಾರ್ಗಗಳನ್ನು ಅಭಿವೃದ್ಧಿಪಡಿಸಲು ಹಣಕಾಸು ನೀಡಲಾಗಿಲ್ಲ” ಎಂದು ರಾಜ್ಯ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಮುಖ ಆಹಾರ, ತರಕಾರಿ ಮತ್ತು ಹಣ್ಣಿನ ಬೆಳೆಗಳಿಗೆ ಮಂಡಳಿಗಳನ್ನು ರಚಿಸಬೇಕೆಂಬ ಬೇಡಿಕೆ ನಿರೀಕ್ಷೆಯಾಗಿಯೇ ಉಳಿದಿದೆ. ರಸಗೊಬ್ಬರಗಳ ಬೆಲೆ ಇಳಿಕೆ ಮಾಡಲಾಗುವ ನಿರೀಕ್ಷೆ ಹುಸಿಯಾಗಿದೆ. ಆರ್.ಕೆ.ವಿ.ವೈ ಯೋಜನೆಯ ಅನುದಾನ ಕಡಿತಗೊಳಿಸಲಾಗಿದ್ದು, ರಾಜ್ಯಗಳಿಗೆ ಅನ್ಯಾಯವಾಗಿದೆ. ಕೃಷಿ ವಲಯಕ್ಕೆ ನಬಾರ್ಡ್ ನಲ್ಲಿ ನೀಡಲಾಗುವ ಅನುದಾನ ಕಡಿಮೆಯಾಗಿದ್ದು, ಕರ್ನಾಟಕ ರಾಜ್ಯವನ್ನು ಸಂಪೂರ್ಣ ಕಡೆಗಣಿಸಲಾಗಿದೆ. ಕೃಷಿ ಮೂಲಭೂತ ಸೌಕರ್ಯ ವಲಯಕ್ಕೆ ಆದ್ಯತೆ ನೀಡಿಲ್ಲ. ಸಿರಿಧಾನ್ಯಕ್ಕೆ ಪ್ರೋತ್ಸಾಹ ನೀಡಬೇಕೆಂಬ ರಾಜ್ಯ ಸರ್ಕಾರದ ಮನವಿಯ ಬಗ್ಗೆ ಹೆಚ್ಚಿನ ಗಮನ ಹರಿಸಿಲ್ಲ. ಆಹಾರ ಸಂಸ್ಕರಣೆ ರಫ್ತು ಉತ್ತೇಜನಕ್ಕೆ ಪ್ರೋತ್ಸಾಹಕರ ಹೊಸ ಯೋಜನೆಗಳಿಲ್ಲ. ಕಳೆದ ಬಜೆಟ್ ನಲ್ಲಿ ಘೋಷಣೆಯಾಗಿದ್ದ ಅಗ್ರಿ ಡಿಜಿಟಲ್ ಇಂಡಿಯಾ ಪ್ರಗತಿ ಕಂಡಿಲ್ಲ ಈ ಬಾರಿ ಬಜೆಟ್ ನಲ್ಲಿ ಇದು ಮಾಯವಾಗಿದೆ. ಕೃಷಿ ಮೂಲಭೂತ ಸೌಕರ್ಯ ನಿಧಿಗೆ ಸರಿಯಾದ ಅನುಷ್ಠಾನ ಯೋಗ್ಯವಲ್ಲದ ನೀತಿ ಇರುವುದರಿಂದ ಯಾವುದೇ ರಾಜ್ಯದಲ್ಲಿ ಸರಿಯಾಗಿ ಅನುಷ್ಠಾನ ಕಂಡಿಲ್ಲ. ಅನುಷ್ಠಾನ ಯೋಗ್ಯ ಯೋಜನೆ ರೂಪಿಸುವ ಆಶಯವಿತ್ತು, ಆದರೆ ನಿರಾಸೆಯಾಗಿದೆ” ಎಂದು ತಿಳಿಸಿದ್ದಾರೆ.

‌ಕರ್ನಾಟಕದ ಜನತೆಗೆ ಮತ್ತೊಮ್ಮೆ ಮೋಸ: ಪರಮೇಶ್ವರ್

ದೇಶದಲ್ಲೇ ಹೆಚ್ಚು ತೆರಿಗೆ ಪಾವತಿಸುವ ರಾಜ್ಯಗಳಲ್ಲಿ 2ನೇ ಸ್ಥಾನದಲ್ಲಿರುವ ಕರ್ನಾಟಕವನ್ನು ಅಭಿವೃದ್ಧಿಯಿಂದ ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ದೇಶದ ದಕ್ಷಿಣ ಭಾಗದ ರಾಜ್ಯಗಳ ಜನರ ತೆರಿಗೆಯ ಸಂಪತ್ತನ್ನು ಉತ್ತರ ಭಾರತ ರಾಜ್ಯಗಳ ಅಭಿವೃದ್ಧಿಗೆ ಸುರಿಯಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗದ ಅಭಿವೃದ್ಧಿಯನ್ನು ನಿರ್ಲಕ್ಷಿಸಲಾಗಿದೆ. ನೀರಾವರಿ ಯೋಜನೆಗಳನ್ನು, ರೈತರ ಆದಾಯ ಹೆಚ್ಚಿಸುವಂಥ ಬಲಿಷ್ಟವಾದ ಯೋಜನೆಗಳನ್ನು ರೂಪಿಸಿಲ್ಲ. ಯುವಕರ ನಿರುದ್ಯೋಗ ಸಮಸ್ಯೆಗೆ ಪರಿಹಾರಗಳಿಲ್ಲ. ಕೇಂದ್ರ ಸರ್ಕಾರದಲ್ಲಿ ಕರ್ನಾಟಕದ ಮೂವರು ಸಚಿವರಿದ್ದರು, ರಾಜ್ಯಕ್ಕೆ ಯಾವುದೇ ಪ್ರಯೋಜನವಾಗಿಲ್ಲ. ರಾಜ್ಯದಲ್ಲಿನ ಮಹಾನಗರಗಳ ಸುರಕ್ಷತೆಗೆ ಮತ್ತು ಅಭಿವೃದ್ಧಿಗೆ ವಿಶೇಷ ಯೋಜನೆಗಳನ್ನು ನೀಡುವ ನಿರೀಕ್ಷೆಯು ಹುಸಿಯಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಕರ್ನಾಟಕದ ಜನತೆಗೆ ಬಜೆಟ್‌ನಲ್ಲಿ ಮತ್ತೊಮ್ಮೆ ಮೋಸ ಮಾಡಿದೆ” ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಹೇಳಿದ್ದಾರೆ.‌

ಈ ಸುದ್ದಿ ಓದಿದ್ದೀರಾ? ಬಜೆಟ್‌ 2025 | ಎಂದಿನಂತೆ ಶಾಲಾ ಶಿಕ್ಷಣಕ್ಕೆ ಆಯವ್ಯಯದಲ್ಲಿ ಅತ್ಯಲ್ಪ ಆದ್ಯತೆ!

ಯುವಕರ ಕೈಗೆ ಉದ್ಯೋಗ ನೀಡುವ ಯೋಜನೆಗಳೇ ಇಲ್ಲ: ಈಶ್ವರ ಖಂಡ್ರೆ

ಕೇಂದ್ರ ಬಜೆಟ್ ರೈತರ ಬೇಡಿಕೆ ಈಡೇರಿಸುವಲ್ಲಿ ಸಂಪೂರ್ಣ ವಿಫಲವಾಗಿದ್ದು, ನಿರಾಶಾದಾಯಕವಾಗಿದೆ. ರೈತರು ಬೆಳೆದ ಬೆಳೆಗೆ ನಿಶ್ಚಿತ ಬೆಲೆ ಬರಬೇಕು. ಇಂದು ಅನ್ನದಾತರ ಸ್ಥಿತಿ ಅನಿಶ್ಚಿತತೆಯಿಂದ ಕೂಡಿದೆ. ಎಲ್ಲ ವಸ್ತುಗಳಿಗೂ ಎಂ.ಎಸ್.ಪಿ. ಇರುವಾಗ ರೈತರ ಕಷ್ಟಾರ್ಜಿತಕ್ಕೆ ನಿರ್ದಿಷ್ಟ ಬೆಲೆ ನೀಡುವ ಎಂ.ಎಸ್.ಪಿ. ಕಾಯಿದೆ ಬಗ್ಗೆ ಪ್ರಕಟಿಸದ ಬಜೆಟ್ ಇದಾಗಿದೆ. ರೈತರು ಪ್ರಕೃತಿ ವಿಕೋಪದಿಂದ ತತ್ತರಿಸಿದ್ದು, ಸಾಲದ ಹೊರೆ ತಾಳದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ರೈತರ ಕೃಷಿ ಸಾಲ ಮನ್ನಾ ಬಗ್ಗೆ ಈ ಬಜೆಟ್‌ನಲ್ಲಿ ಯಾವುದೇ ಘೋಷಣೆ ಮಾಡಿಲ್ಲ. ಬಜೆಟ್‌ನಲ್ಲಿ ಬಿಜೆಪಿ ಮತ್ತು ಎನ್.ಡಿ.ಎ.ಯೇತರ ರಾಜ್ಯಗಳಿಗೆ ಘೋರ ಅನ್ಯಾಯ ಮಾಡಲಾಗಿದೆ. ಒಕ್ಕೂಟ ವ್ಯವಸ್ಥೆಯ ಭಾರತದಲ್ಲಿ ಇಂತಹ ತಾರತಮ್ಯ ಸರ್ವತ ಸಮರ್ಥನೀಯವಲ್ಲ. ಇಂತಹ ಒಂದು ಕೆಟ್ಟ ಸಂಪ್ರದಾಯಕ್ಕೆ ಬಜೆಟ್ ನಾಂದಿ ಹಾಡಿದೆ. ಕರ್ನಾಟಕದ ನಿರೀಕ್ಷೆಗಳೂ ಹುಸಿಯಾಗಿವೆ. ಬಜೆಟ್ ನಲ್ಲಿ ಬಿಜೆಪಿ ಮತ್ತು ಎನ್.ಡಿ.ಎ.ಯೇತರ ರಾಜ್ಯಗಳಿಗೆ ಘೋರ ಅನ್ಯಾಯ ಮಾಡಲಾಗಿದೆ. ಎನ್.ಡಿ.ಎ. ಆಡಳಿತ 11 ವರ್ಷಗಳ ಕಾರ್ಯಕಾಲದಲ್ಲಿ ಹಿಂದೆಂದೂ ಕಂಡು ಕೇಳರಿಯದಷ್ಟು ನಿರುದ್ಯೋಗ ಸಮಸ್ಯೆ ಉಲ್ಬಣಿಸಿದೆ. ಈ ಬಜೆಟ್ ನಲ್ಲಿ ಕೂಡ ದುಡಿಯುವ ಯುವಕರ ಕೈಗೆ ಉದ್ಯೋಗ ನೀಡುವ ಯೋಜನೆ ರೂಪಿಸದಿರುವುದು ದುರ್ದೈವ” ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ತೆರಿಗೆ ಕಟ್ಟಿದ ಕನ್ನಡಿಗರು ಮೋದಿಗೆ ಕಂಡಿಲ್ಲ: ಕೃಷ್ಣ ಬೈರೇಗೌಡ

“ಕೇಂದ್ರ ಬಜೆಟ್ ಕರ್ನಾಟಕಕ್ಕೆ ಕರಾಳ ದಿನವಾಗಿದೆ. ರಾಜ್ಯದ ಯಾವ ಬೇಡಿಕೆಯೂ ಈಡೇರಿಲ್ಲ. ನಮ್ಮ ತೆರಿಗೆ ಬೇರೆ ರಾಜ್ಯದ ಪಾಲಾಗುತ್ತಿದೆ. ಕರ್ನಾಟಕದವರು ಕಡಲೆ ಬೀಜ ತಿನ್ನೋಕೆ ಇರೋದಾ? ನಮ್ಮ ರಾಜ್ಯಕ್ಕೆ ನ್ಯಾಯ ಕೊಡುವ ಕೆಲಸ ಆಗಿಲ್ಲ. ಬಿಹಾರ ರಾಜ್ಯಕ್ಕೆ ಐದಾರು ಯೋಜನೆ ಕೊಟ್ಟಿದ್ದಾರೆ. ಕರ್ನಾಟಕಕ್ಕೆ ಬರೀ ಚೊಂಬು ಸಿಕ್ಕಿದೆ. ಇದು ಬಿಜೆಪಿ ಸರ್ಕಾರ ರಾಜ್ಯಕ್ಕೆ ಮಾಡುತ್ತಿರುವ ದ್ರೋಹ. 11,495 ಕೋಟಿ ಫೈನಾನ್ಸ್ ಕಮಿಷನ್ ಕೊಡಲು ಹೇಳಿತ್ತು. ಬರಬೇಕಾದ ಅನುದಾನದ ಬಗ್ಗೆ ಚಕಾರ ಎತ್ತಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ ಇಂದು ನೈಯಾ ಪೈಸಾ ಕೊಟ್ಟಿಲ್ಲ. ಕಲ್ಯಾಣ ಕರ್ನಾಟಕ, ಮಲೆನಾಡು ಕರ್ನಾಟಕ್ಕೆ ಏನೂ ನೀಡಿಲ್ಲ. ಬೆಂಗಳೂರು ದೇಶಕ್ಕೆ ಉದ್ಯೋಗ ಕೊಡ್ತಿದೆ. ರಪ್ತಿನ ಮೂಲಕ ದೇಶಕ್ಕೆ ಹೆಚ್ಚಿನ ಆದಾಯ ಕೊಡ್ತಿದೆ. ಆದ್ರೂ ಬಜೆಟಲ್ಲಿ ಬೆಂಗಳೂರಿಗೆ ಏನೂ ಇಲ್ಲ. ಯುಪಿ, ಬಿಹಾರ ಮಾತ್ರ ಕೇಂದ್ರಕ್ಕೆ ಕಾಣುತ್ತಿದೆ. ತೆರಿಗೆ ಕಟ್ಟಿದ ಕನ್ನಡಿಗರು ಮೋದಿಗೆ ಕಂಡಿಲ್ಲ. ನಮ್ಮ ರಾಜ್ಯ ಕೇವಲ ದುಡಿಯವ ಆಳಿನ ರೀತಿ ಕಾಣುತ್ತಿದೆ. ಸರ್ಕಾರದ ಪರವಾಗಿ ಕೇಂದ್ರ ಬಜೆಟ್‌ ಅನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ” ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ಕೇಂದ್ರದ ಜವಾಬ್ದಾರಿಯನ್ನು ರಾಜ್ಯವೇ ನಿಭಾಯಿಸುತ್ತಿದೆ: ಪ್ರಿಯಾಂಕ್ ಖರ್ಗೆ

ಕೇಂದ್ರ ಸರ್ಕಾರದ ಇಂತಹ ಹತ್ತು ಬಜೆಟ್ ನೋಡಿದ್ದೇವೆ. ಎಲ್ಲ ಬಜೆಟ್‌ಲ್ಲಿಯೂ ಘೋಷಣೆಗಳು ಮಾತ್ರವೇ ಇರುತ್ತವೆಯೇ ಹೊರತು, ಅದರಲ್ಲಿ ಜನರಿಗೆ ಗಣನೀಯವಾಗಿ ಅನುಕೂಲ ಆಗುವಂತಹದ್ದು ಇಲ್ಲ. ಕರ್ನಾಟಕದಲ್ಲಿ ಜಲಜೀವನ್ ಮಿಷನ್‌ನಲ್ಲಿ ₹3500 ಕೋಟಿ ಕೊಡಬೇಕು. ಆದರೆ ನೀಡಿರುವುದು ₹500 ಕೋಟಿ ಮಾತ್ರ. ನಾವು ಕೇಳಿದಾಗ, ನಮ್ಮ ಬಳಿ ದುಡ್ಡಿಲ್ಲ ಎನ್ನುತ್ತಾರೆ. ಕೆಲಸ ನಿಲ್ಲಬಾರದು ಎಂಬ ಕಾರಣಕ್ಕಾಗಿ ಕೇಂದ್ರ ಸರ್ಕಾರದ ಜವಾಬ್ದಾರಿಯನ್ನು ರಾಜ್ಯ ಸರ್ಕಾರವೇ ನಿಭಾಯಿಸುತ್ತಿದೆ. ಉಳಿದ ₹3000 ಕೋಟಿ ಮೊತ್ತವನ್ನು ನಾವೇ ಬಿಡುಗಡೆ ಮಾಡಿದ್ದೇವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ನಿರಾಶಾದಾಯಕ ಬಜೆಟ್, ರಾಜ್ಯಕ್ಕೆ ಈ ಬಾರಿಯೂ ಸಿಗಲಿಲ್ಲ ಏಮ್ಸ್: ಎಂ‌ ಬಿ ಪಾಟೀಲ್

ಕೇಂದ್ರ ಸರಕಾರದ ಬಜೆಟ್ ತೀರಾ ನಿರಾಶಾದಾಯಕವಾಗಿದೆ. ಮಧ್ಯಮ ವರ್ಗದ ಆದಾಯ ತೆರಿಗೆದಾರರಿಗೆ ಭಾರೀ ಲಾಭ ತಂದುಕೊಡುವಂತೆ ಕಣ್ಣೊರೆಸುವ ತಂತ್ರಗಳನ್ನು ನಿರ್ಮಲಾ ಸೀತಾರಾಮನ್ ಮಂಡಿಸಿದ್ದಾರೆ. ಉತ್ತರ ಕರ್ನಾಟಕದ ಅಭಿವೃದ್ಧಿಗೂ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿಲ್ಲ. ಈ ಬಾರಿಯಾದರೂ ಉತ್ತರ ಕರ್ನಾಟಕಕ್ಕೆ ಅಖಿಲ ಭಾರತ ವೈದ್ಯಕೀಯ ಸಂಸ್ಥೆ (ಏಮ್ಸ್) ಮಂಜೂರು ಮಾಡುತ್ತಾರೆ ಎನ್ನುವ ನಿರೀಕ್ಷೆ ಕೂಡ ಹುಸಿಯಾಗಿದೆ. ಒಟ್ಟಿನಲ್ಲಿ ಇದು ಜನವಿರೋಧಿ ಬಜೆಟ್ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಟೀಕಿಸಿದರು.

ಕೇಂದ್ರದಿಂದ ಕರ್ನಾಟಕ ವಿರೋಧಿ ಬಜೆಟ್ : ಡಾ ಹೆಚ್ ಸಿ ಮಹದೇವಪ್ಪ

ಜನ ಸಾಮಾನ್ಯರ ಪರವಾಗಿ ಎಂದಿಗೂ ಕೆಲಸ ಮಾಡದೇ ಬರೀ ಕಾರ್ಪೊರೇಟ್ ಉದ್ಯಮಿಗಳ ಪರವಾಗಿ ಕೆಲಸ ಮಾಡುತ್ತಲೇ ಬಂದಿರುವ ಕೇಂದ್ರ ಸರ್ಕಾರವು ಶ್ರಮಿಕ ವರ್ಗವನ್ನು ವಂಚಿಸುವ ತನ್ನ ಹೀನ ಪ್ರವೃತ್ತಿಯನ್ನು ಮುಂದುವರೆಸಿದೆ. 50 ಲಕ್ಷದ 65 ಸಾವಿರ ಕೋಟಿ ಗಾತ್ರದ ಬಜೆಟ್ ನಲ್ಲಿ ಜನಪರವಾಗಿ ಹೇಳಿಕೊಳ್ಳಬಹುದಾದ ಒಂದೇ ಒಂದು ಯೋಜನೆಯೂ ಸಹ ಇಲ್ಲದ ಕೇಂದ್ರದ ಬಜೆಟ್ ಕರ್ನಾಟಕ ವಿರೋಧಿಯಾಗಿದ್ದು ರಾಜ್ಯ ನೀಡುವ ತೆರಿಗೆ ಹಣಕ್ಕೆ ಪ್ರತಿಯಾಗಿ ಅವಮಾನವನ್ನು ನಮಗೆ ಉಡುಗೊರೆಯಾಗಿ ನೀಡಿದೆ. ಅತಿ ಮುಖ್ಯವಾಗಿ ಕರ್ನಾಟಕದಿಂದ ರಾಜ್ಯ ಸಭಾ ಸದಸ್ಯರಾಗಿ ಆಯ್ಕೆಯಾಗಿ, ಕೇಂದ್ರದಲ್ಲಿ ಹಣಕಾಸು ಸಚಿವೆಯೂ ಆಗಿರುವ ನಿರ್ಮಲಾ ಸೀತಾರಾಮನ್ ಅವರು, ಮೇಕೆದಾಟು, ಕಳಸಾ ಬಂಡೂರಿ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳಿಗೆ ಯಾವುದೇ ಅನುದಾನ ನೀಡದೇ ಹೆಚ್ಚು ತೆರಿಗೆ ಪಾವತಿಸುವ ನಮ್ಮ ರಾಜ್ಯಕ್ಕೆ ವಂಚನೆ ಮಾಡಿದ್ದು ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಸಚಿವ ಡಾ ಹೆಚ್ ಸಿ ಮಹದೇವಪ್ಪ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...