ಕಂಡ ಕಂಡವರಿಗೆ ಗೂಟದ ಕಾರು ಕರುಣಿಸಲು ರಾಜ್ಯದ ಖಜಾನೆ ಏನು ಕಾಂಗ್ರೆಸ್ ಆಸ್ತಿಯೇ: ಆರ್‌ ಅಶೋಕ್ ಪ್ರಶ್ನೆ

Date:

ಗ್ಯಾರಂಟಿ ಜಾರಿ ಸಮಿತಿ ಅಲ್ಲ ಅತೃಪ್ತ ಶಾಸಕರಿಗೆ ಗೂಟದ ಕಾರು ಗ್ಯಾರಂಟಿ ನೀಡುವ ಸಮಿತಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್ ಟೀಕಿಸಿದ್ದಾರೆ.

ಗ್ಯಾರಂಟಿಗಳ ಜಾರಿಗೆ ಸಮಿತಿ ರಚನೆ ಬಗ್ಗೆ ಎಕ್ಸ್‌ ತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, “ಅಂಬಲಿ ಕುಡಿಯುವವನಿಗೆ ಮೀಸೆ ತಿಕ್ಕುವವನೊಬ್ಬ” ಎಂಬ ಗಾದೆ ಮಾತಿನಂತೆ ಈಗಾಗಲೇ ಅವೈಜ್ಞಾನಿಕ ಗ್ಯಾರಂಟಿಗಳ ಭಾರವನ್ನ ಹೊರಲಾಗದೆ ಬೆನ್ನು ಮೂಳೆ ಮುರಿದಂತಾಗಿರುವ ಸರ್ಕಾರಕ್ಕೆ, ಗ್ಯಾರಂಟಿ ಜಾರಿ ಸಮಿತಿ ಎಂಬ ಮತ್ತೊಂದು ಹೊರೆ ಹೊರಿಸಲು ಹೊರಟಿದ್ದಾರೆ ಸಿಎಂ ಸಿದ್ದರಾಮಯ್ಯ ಅವರು” ಎಂದು ಆರೋಪಿಸಿದ್ದಾರೆ.

“ಗ್ಯಾರಂಟಿ ಜಾರಿಗೆ ಮುಖ್ಯಮಂತ್ರಿ ಆದಿಯಾಗಿ, 34 ಕ್ಯಾಬಿನೆಟ್ ಸಚಿವರು, ಆರ್ಥಿಕ, ರಾಜಕೀಯ, ಮಾಧ್ಯಮ ಸಲಹೆಗಾರರು, ಜಿಲ್ಲಾಡಳಿತಗಳು ಸೇರಿದಂತೆ ಇಡೀ ಆಡಳಿತ ಯಂತ್ರವೇ ಇರುವಾಗ ಪ್ರತ್ಯೇಕ ಸಮಿತಿಯ ಅಗತ್ಯ ಏನಿದೆ” ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚುನಾವಣೆಗಾಗಿ ಅಪೂರ್ಣಗೊಂಡ ರಾಮಮಂದಿರ ಉದ್ಘಾಟಿಸುತ್ತಿರುವ ಮೋದಿ: ಸಿಎಂ ಸಿದ್ದರಾಮಯ್ಯ

“ಸಂಪುಟ ದರ್ಜೆ ಸ್ಥಾನಮಾನದ ಅಧ್ಯಕ್ಷರು, ರಾಜ್ಯ ಸಚಿವ ಸ್ಥಾನಮಾನದ ಐವರು ಉಪಾಧ್ಯಕ್ಷರು ಸೇರಿದಂತೆ 31 ಸದಸ್ಯರ ಸಮಿತಿಯ ಸಂಬಳ ಸಾರಿಗೆ ಖರ್ಚಿನಿಂದ ರಾಜ್ಯ ಸರ್ಕಾರಕ್ಕೆ 16 ಕೋಟಿ ರೂಪಾಯಿ ಹೊರೆಯಾಗಲಿದೆ. ತಮ್ಮ ಪಕ್ಷದ ಅತೃಪ್ತ ಶಾಸಕರನ್ನ, ಪ್ರಮುಖ ಕಾರ್ಯಕರ್ತರನ್ನು ಲೋಕಸಭಾ ಚುನಾವಣೆಯ ಕೆಲಸಕ್ಕೆ ಬಳಸಿಕೊಳ್ಳಲು ರಾಜ್ಯದ ಸಾರ್ವಜನಿಕ ಹಣ ಏಕೆ ದುರ್ಬಳಕೆ ಮಾಡುತ್ತೀರಿ ಸಿಎಂ ಸಿದ್ದರಾಮಯ್ಯನವರೇ?” ಎಂದು ಕೇಳಿದ್ದಾರೆ.

“ಗ್ಯಾರಂಟಿ ಜಾರಿಯೇ ಹೊರೆಯಾಗಿ ಅಭಿವೃದ್ಧಿಗೆ ಹಣ ಇಲ್ಲದಿರುವಾಗ ಕಂಡ ಕಂಡವರಿಗೆ ಗೂಟದ ಕಾರು ಕರುಣಿಸಲು ರಾಜ್ಯದ ಖಜಾನೆ ಏನು ಕಾಂಗ್ರೆಸ್ ಪಕ್ಷದ ಆಸ್ತಿ ಎಂದುಕೊಂಡಿದ್ದೀರಾ? ಸಚಿವರು, ಆಡಳಿತ ಯಂತ್ರದ ಮೂಲಕ ಗ್ಯಾರಂಟಿ ಜಾರಿ ಮಾಡಲು ಆಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ. ಅದು ಬಿಟ್ಟು ಸುಮ್ಮನೆ ರಾಜ್ಯದ ಬೊಕ್ಕಸವನ್ನ ಪೋಲು ಮಾಡಬೇಡಿ” ಎಂದು ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...