ಕೊಂದವರು ಯಾರು? | ನ.1ರಂದು ನ್ಯಾಯಕ್ಕಾಗಿ ಮಹಿಳೆಯರ ಸಹಿ ಸಂಗ್ರಹ ಅಭಿಯಾನ

Date:

ಧರ್ಮಸ್ಥಳದಲ್ಲಿ ಹತ್ತಾರು ವರ್ಷಗಳಿಂದ ನಡೆದಿರುವ ಅನೇಕ ಮಹಿಳೆಯರ ನಾಪತ್ತೆ, ಅತ್ಯಾಚಾರ, ಅಸಹಜ ಸಾವು ಹಾಗೂ ಕೊಲೆ ಪ್ರಕರಣಗಳಲ್ಲಿ ಅಪರಾಧಿಗಳನ್ನು ಇನ್ನೂ ಪತ್ತೆಮಾಡಿಲ್ಲ. ಅದೇ ಕಾರಣವೊಡ್ಡಿ ತನಿಕೆಯನ್ನು ನಿಲ್ಲಿಸಲಾಗಿದೆ. ಧರ್ಮಸ್ಥಳ ಪ್ರಕರಣದಲ್ಲಿ ಅಪರಾಧಿಗಳು ಪತ್ತೆಯಾಗುವವರೆಗೂ ಎಸ್‌ಐಟಿ ತನಿಖೆ ಮುಂದುವರೆಯಬೇಕು. ಧರ್ಮಸ್ಥಳದ ಎಲ್ಲ ಪ್ರಕರಣಗಳನ್ನು ಎಸ್‌ಐಟಿ ತನಿಖೆಗೆ ಒಳಗೊಳ್ಳಬೇಕು ಎಂದು ಆಗ್ರಹಿಸಿ ‘ಕನ್ನಡ ರಾಜ್ಯೋತ್ಸವ’ ದಿನವಾದ ನವೆಂಬರ್ 1ರಂದು ರಾಜ್ಯಾದ್ಯಂತ ಸಹಿ ಸಂಗ್ರಹ ಅಭಿಯಾನವನ್ನು ‘ಕೊಂದವರು ಯಾರು?’ ಆಂದೋಲನ ಹಮ್ಮಿಕೊಂಡಿದೆ.

‘ಕನ್ನಡ ರಾಜ್ಯೋತ್ಸವದಂದು ಕನ್ನಡ ನಾಡಿನಲ್ಲಿ ನ್ಯಾಯಕ್ಕಾಗಿ ಮಹಿಳೆಯರ ಆಗ್ರಹ’ ಹೆಸರಿನಲ್ಲಿ ಸಹಿಸಂಗ್ರಹ ಅಭಿಯಾನ ನಡೆಯಲಿದೆ. ಅಭಿಯಾನಕ್ಕೆ ನವೆಂಬರ್ 1ರ ಶನಿವಾರ ಸಂಜೆ 4 ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಚಾಲನೆ ನೀಡಲಾಗುತ್ತದೆ ಎಂದು ‘ಕೊಂದವರು ಯಾರು?’ ಅಂದೋಲನದ ಪದಾಧಿಕಾರಿಗಳು ತಿಳಿಸಿದ್ದಾರೆ.

ಸಹಿ ಸಂಗ್ರಹ ಅಭಿಯಾನದ ಕುರಿತು ಪ್ರಕಟಣೆ ನೀಡಿರುವ ಮುಖಂಡರು, “ಧರ್ಮಸ್ಥಳ ಪ್ರಕರಣಗಳಲ್ಲಿ ಅಪರಾಧಿಗಳು ಪತ್ತೆಯಾಗಿಲ್ಲ. ಅನೇಕ ಪ್ರಕರಣಗಳಲ್ಲಿ ದೂರನ್ನೇ ಸ್ವೀಕರಿಸಿಲ್ಲ; ನೂರಾರು ಸಾವುಗಳನ್ನು ಪತ್ತೆಯಾಗದ ಪ್ರಕರಣವೆಂದು ತನಿಖೆ ನಿಲ್ಲಿಸಲಾಗಿದೆ. ಸೌಜನ್ಯ ಪ್ರಕರಣದಲ್ಲಿ, ತನಿಖಾಧಿಕಾರಿಗಳು ಮತ್ತು ವೈದ್ಯರು ಕರ್ತವ್ಯಲೋಪ ಎಸಗಿದ್ದಾರೆ ಎಂದು ನ್ಯಾಯಾಲಯ ಹೇಳಿದ್ದರೂ ಅವರ ವಿರುದ್ಧ ಸರಕಾರ ಕ್ರಮ ಕೈಗೊಂಡಿಲ್ಲ. ಆತ್ಮಹತ್ಯೆ, ಅಸಹಜ ಸಾವು, ಗುರುತು ಪತ್ತೆಯಾಗದ ಸಾವು ಎಂಬೆಲ್ಲ ಹೆಸರುಗಳಲ್ಲಿ 500ಕ್ಕೂ ಹೆಚ್ಚು ಸಾವುಗಳು ಕನ್ನಡ ನಾಡಿನ ಆತ್ಮಸಾಕ್ಷಿಯನ್ನು ಕೆಣಕುತ್ತಿವೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಒಂದು ಸಣ್ಣ ಪ್ರದೇಶದಲ್ಲಿ ಸಂಭವಿಸುವ ನೂರಾರು ಸಾವುಗಳ ಬಗ್ಗೆ ಸರಕಾರ ಎಚ್ಚೆತ್ತುಕೊಳ್ಳದಿರುವುದು, ಅಗತ್ಯ ಗಾಂಭೀರ್ಯದಿಂದ ಅವುಗಳ ತನಿಖೆ ಮಾಡದಿರುವುದು, ಸಾವುಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳದಿರುವುದು, ತನಿಖೆಗಳ ಬಗ್ಗೆ ಅನುಮಾನ ಬರುವ ರೀತಿಯಲ್ಲಿ ದಾಖಲೆಗಳನ್ನು ನಿರ್ವಹಣೆ ಮಾಡಿರುವುದು ಅಥವಾ ದಾಖಲೆ ಇಲ್ಲದಂತೆ ಮಾಡಿರುವುದು ಗಂಭೀರ ಲೋಪಗಳಾಗಿವೆ” ಎಂದು ಆರೋಪಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಕಾಂಗ್ರೆಸ್‌ ಸರ್ಕಾರಕ್ಕೆ 2.5 ವರ್ಷ: ಮಾಡಿದ್ದೇನು? ಮಾಡಬೇಕಿರುವುದೇನು?

“ತಮ್ಮವರನ್ನು ಕಳೆದುಕೊಂಡು ದಶಕಗಳಿಂದ ಕಾನೂನು ಹೋರಾಟ ಮಾಡುತ್ತಿರುವ, ಕಾನೂನು ಹೋರಾಟಕ್ಕೆ ಶಕ್ತಿ ಇಲ್ಲದೆ ನಿತ್ಯ ದುಃಖದಲ್ಲಿರುವ ನೊಂದವರ ಕುಟುಂಬಗಳಿಗೆ ಸರ್ಕಾರ ಕಾನೂನು ರೀತಿಯಲ್ಲಿ ಯಾವುದೇ ಸಮಾಧಾನ, ಪರಿಹಾರ ಒದಗಿಸದೇ ಇರುವುದು ಕನ್ನಡಿಗರಲ್ಲಿ ಆಕ್ರೋಶ ಮೂಡಿಸಿದೆ” ಎಂದಿದ್ದಾರೆ.

ಆಂದೋಲನದ ಹಕ್ಕೊತ್ತಾಯಗಳು:

  1. ಎಸ್‌ಐಟಿಯು ಸ್ವತಂತ್ರವಾಗಿ ಕಾರ್ಯನಿರ್ವಹಿಸಬೇಕು. ಹೊರಗಿನ ಯಾವ ಒತ್ತಡ, ತೊಡಕು ಅಥವಾ ಮೂಗು ತೂರಿಸುವಿಕೆಯಿಲ್ಲದೆ ಮುಕ್ತವಾಗಿ ಕಾರ್ಯನಿರ್ವಹಿಸಿ, ಪ್ರಕರಣಗಳು ತಾರ್ಕಿಕ ಅಂತ್ಯ ತಲುಪುವವರೆಗೂ ತನಿಖೆ ಮುಂದುವರಿಸಲು ಸರ್ಕಾರ ಎಸ್‌ಐಟಿಗೆ ರಕ್ಷಣೆ ಒದಗಿಸಬೇಕು.
  2. ಹಿಂದಿನ ಪ್ರಕರಣಗಳು, ಹೊಸದಾಗಿ ದಾಖಲಾದ ದೂರುಗಳು ಮತ್ತು ಸಾಕ್ಷಿಗಳ ದಿಢೀರ್ ಸಾವಿನ ಪ್ರಕರಣಗಳನ್ನು ಎಸ್‌ಐಟಿ ಸಮಗ್ರವಾಗಿ ತನಿಖೆ ಮಾಡಬೇಕು. ವಿಶೇಷವಾಗಿ ಸೌಜನ್ಯ, ಪದ್ಮಲತಾ ಮತ್ತು ಯಮುನ/ನಾರಾಯಣರಂತಹ ಪ್ರಕರಣಗಳನ್ನು ಮರು ತನಿಖೆಗೆ ಒಳಪಡಿಸಬೇಕು. ಸೌಜನ್ಯ ಪ್ರಕರಣದ ಸಾಕ್ಷಿಗಳಾದ ರವಿ ಪೂಜಾರಿ, ಗೋಪಾಲಕೃಷ್ಣ ಗೌಡ, ದಿನೇಶ್ ಗೌಡ, ವಾರಿಜ ಆಚಾರ್ಯ ಮತ್ತು ಹರೀಶ್ ಮಡಿವಾಳ ಅವರುಗಳ ದಿಢೀರ್ ಸಾವುಗಳು ತನಿಖೆಯಾಗಬೇಕು. ಅಗತ್ಯವಿದ್ದಲ್ಲಿ ಸರ್ಕಾರ ಈ ಕುರಿತು ಮತ್ತೊಂದು ಆದೇಶ ಹೊರಡಿಸಬೇಕು.
  3. ಸೌಜನ್ಯ ಪ್ರಕರಣದ ತನಿಖೆಯಲ್ಲಿ ಕರ್ತವ್ಯ ಲೋಪ ಮಾಡಿ ಅಪರಾಧಿಗಳು ತಪ್ಪಿಸಿಕೊಳ್ಳಲು ಅವಕಾಶ ಮಾಡಿದ ವೈದ್ಯರು, ತನಿಖಾಧಿಕಾರಿಗಳು ಹಾಗೂ ಇತರ ಸರ್ಕಾರಿ ಅಧಿಕಾರಿಗಳ ವಿರುದ್ಧ ಐಪಿಎಸ್ ಸೆಕ್ಷನ್ 166ಎ ಹಾಗೂ ಇತರೆ ಕಾನೂನುಗಳ ಅನ್ವಯ ಕಠಿಣ ಶಿಕ್ಷೆ ವಿಧಿಸಬೇಕು. ಸಿಬಿಐ ನ್ಯಾಯಾಲಯದ ತೀರ್ಪಿನ ಅನ್ವಯ ಕ್ರಮ ಜರುಗಿಸಬೇಕು.
  4. ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರಗಳಿಗೆ ಸಂಬಂಧಿಸಿದ ಉಗ್ರಪ್ಪ ಸಮಿತಿ ವರದಿ ಮತ್ತು ನ್ಯಾಯಮೂರ್ತಿ ವರ್ಮಾ ಸಮಿತಿ ವರದಿಗಳನ್ನು ಶೀಘ್ರವಾಗಿ ಜಾರಿಗೊಳಿಸಬೇಕು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...