ಅಧಿಕಾರದ ಆಸೆಗೆ ಕೆಲವರು ಬರುತ್ತಾರೆ, ಹೋಗುತ್ತಾರೆ ಎಂದು ಮತ್ತೊಮ್ಮೆ ಅಸಮಾಧಾನ ಹೊರಹಾಕಿದ ಸಿ ಟಿ ರವಿ

Date:

  • ಮತ್ತೆ ಬೇಸರ ಹೊರಹಾಕಿದ ಸಿ ಟಿ ರವಿ
  • ಮುರುಗೇಶ್ ನಿರಾಣಿ ಹೇಳಿಕೆಗೆ ಗರಂ

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ನೇಮಕವಾಗುತ್ತಿದ್ದಂತೆ ತೀವ್ರ ಅಸಮಾಧಾನದಲ್ಲೇ ಮೊದಲು ಮಾತನಾಡಿದ್ದ ಸಿಟಿ ರವಿ, ಈಗ ತಮ್ಮ ಬೇಸರವನ್ನು ಮತ್ತೆ ಹೊರಹಾಕಿದ್ದಾರೆ.

ಚಿಕ್ಕಮಗಳೂರಿನಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ನಂಬಿಕೆ ಕುಸಿದ ದಿನವೇ ಸಾರ್ವಜನಿಕ ಕ್ಷೇತ್ರದಿಂದ ದೂರ ಉಳಿಯುವೆ” ಎಂದು ತಿಳಿಸಿದ್ದಾರೆ.

ತಾವು ನಡೆದು ಬಂದ ರಾಜಕೀಯ ಹಾದಿ ಮತ್ತು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದ ಹಳೆ ನೆನಪುಗಳನ್ನು ಮೆಲುಕು ಹಾಕುತ್ತ, “ನನ್ನ ಮತ್ತು ಪಕ್ಷದ ವಿಚಾರ, ಸಿದ್ದಾಂತ ಹಿಂದುತ್ವ. ನೀವು ಸಂದರ್ಭಕ್ಕೆ ಯಾವ ರೀತಿ ವ್ಯಾಖ್ಯಾನ ಮಾಡುತ್ತೀರಾ ಅದಕ್ಕೆ ಸ್ವತಂತ್ರ ಇದ್ದೀರಿ. ಹಿಂದುತ್ವದ ಕಾರಣಕ್ಕಾಗಿ ನಾನು ರಾಜಕೀಯಕ್ಕೆ ಬಂದಿದ್ದೇನೆ. ಇದನ್ನು ನಾನು ಬಹಳ ಸಲ ಹೇಳಿದ್ದೇನೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವೈಯಕ್ತಿಕ ಅಧಿಕಾರದ ಆಸೆಪಟ್ಟವರು ಕೆಲವರು ಪಕ್ಷಕ್ಕೆ ಬರುತ್ತಾರೆ ಹೋಗುತ್ತಾರೆ. ನಾವು ವೈಚಾರಿಕ ಕಾರಣಕ್ಕಾಗಿ ಬಿಜೆಪಿಯಲ್ಲಿ ಇರುವುದು. ನಮ್ಮ ವೈಚಾರಿಕ ನಿಲುವಿಗೆ ಯಾವಾಗ ಧಕ್ಕೆ ಆಗುತ್ತೋ ಅವತ್ತು ಮಾತ್ರ ಬಿಜೆಪಿಯ ಬಗ್ಗೆ ಯೋಚನೆ ಮಾಡುತ್ತೇವೆ” ಎಂದು ಮಾರ್ಮಿಕವಾಗಿ ಹೇಳಿದರು.

“ಸಿದ್ಧಾಂತಕ್ಕಾಗಿಯೇ ಹೋರಾಟ ಮಾಡಿದ್ದೇವೆ. ಸಿದ್ಧಾಂತದ ನಂಬಿಕೆ ಕಾರಣಕ್ಕಾಗಿ ಸಾರ್ವಜನಿಕ ಕ್ಷೇತ್ರದಲ್ಲಿ ಇದ್ದೇವೆ. ಆ ನಂಬಿಕೆ ಕುಸಿದ ದಿನ ಸಾರ್ವಜನಿಕ ಕ್ಷೇತ್ರದಿಂದ ದೂರ ಹೋಗುತ್ತೇನೆ” ಎಂದು ಸ್ಪಷ್ಟಪಡಿಸಿದರು.

ಈ ಸುದ್ದಿ ಓದಿದ್ದೀರಾ? ದೇವೇಗೌಡ, ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಬಿ ವೈ ವಿಜಯೇಂದ್ರ

“ಕಷ್ಟಪಟ್ಟು ಹೋರಾಟ ಮಾಡಿದ್ದೇವೆ. ಪಕ್ಷ ಕಟ್ಟಿದ್ದೇವೆ. ಇವತ್ತು ನಿಮ್ಮ ಕಣ್ಣಿಗೆ ಗುರುತಿಸಿಕೊಳ್ಳುವ ನಾಯಕ. ಅವತ್ತು ಜಾಮೀನು ಕೊಡುವುದಕ್ಕೂ ಯಾರು ಇರಲಿಲ್ಲ. ಆ ಕಾಲದಲ್ಲಿ ಹೋರಾಟ ಮಾಡಿದ್ದೇವೆ. ಅದಕ್ಕೆ ಸಿದ್ಧಾಂತ ಕಾರಣವಾಗಿತ್ತು. ಅಧಿಕಾರ ಸಿಗುತ್ತದೆ ಎಂಬ ಕನಸು ನಮಗೆ ಬಿದ್ದಿರಲಿಲ್ಲ” ಎಂದರು.

“ನಾನು ಬಿಜೆಪಿಗೆ ಸೇರಿದಾಗ ನಮ್ಮಪ್ಪ ಇದು ಯಾವ ಪಾರ್ಟಿ? ಯಾವನಿದ್ದಾನೆ? ಎಂದು ಕೇಳಿದ್ದರು. ನಾನು ಅಡ್ವಾಣಿ, ವಾಜಪೇಯಿ ಎಂದು ಅಪ್ಪನಿಗೆ ಹೇಳಿದ್ದೆ. ಅಲ್ಲದೇ ರಾಜ್ಯದಲ್ಲಿ ಯಡಿಯೂರಪ್ಪ ಇದ್ದಾರೆ ಎಂದು ಹೇಳಿದ್ದೆ. ನಿಮ್ದು ಯಾವ ಸೀಮೆ ಪಾರ್ಟಿ ಯಾವ ಕಾಲಕ್ಕೆ ಅಧಿಕಾರ ಬರುತ್ತೆ ದೇವೇಗೌಡರ ಪಾರ್ಟಿ ಸೇರಿಕೋ ಎಂದಿದ್ದರು. ಆದರೆ, ನಾವು ದೇವೇಗೌಡರ ಪಾರ್ಟಿ ಬಿಟ್ಟು ಬಿಜೆಪಿಯನ್ನು ಆರಿಸಿಕೊಂಡಿದ್ದು ಸಿದ್ಧಾಂತದ ಕಾರಣಕ್ಕಾಗಿ” ಎಂದು ತಿಳಿಸಿದರು.

ಮುರುಗೇಶ್ ನಿರಾಣಿ ಹೇಳಿಕೆಗೆ ಗರಂ ಆದ ಸಿಟಿ ರವಿ, “ನಾನು ವ್ಯಕ್ತಿಗತ ಕಾರಣಕ್ಕಾಗಿ ರಾಜಕಾರಣ ಮಾಡಿಲ್ಲ. ಹಿಂದುತ್ವಕ್ಕಾಗಿ 35 ವರ್ಷದ ಹಿಂದೆ ಬಿಜೆಪಿಯನ್ನ ಆಯ್ಕೆ ಮಾಡಿಕೊಂಡಿದ್ದೆ. ಆಗ ಬಿಜೆಪಿ ಅಧಿಕಾರಕ್ಕೆ ಬರುತ್ತೆ ಎಂಬ ಕನಸು ಇರಲಿಲ್ಲ. ಮುರುಗೇಶ ನಿರಾಣಿ ನನ್ನನ್ನು ಚೆನ್ನಾಗಿ ಅರ್ಥ ಮಾಡಿಕೊಳ್ಳಲಿ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...