ಐಎಎಸ್ ಅಧಿಕಾರಿಗಳ ಸಂಘ ಸಿಎಂ ವಿರುದ್ಧ ದೂರು ನೀಡಿಲ್ಲವೇಕೆ: ಬಿ ವೈ ವಿಜಯೇಂದ್ರ ಪ್ರಶ್ನೆ

Date:

ಮುಖ್ಯಮಂತ್ರಿಗಳು ಐಎಎಸ್ ಅಧಿಕಾರಿಗಳ ವಿರುದ್ಧ ಅವಮಾನ ಆಗುವಂತೆ ನಡೆದುಕೊಂಡಾಗ ಐಎಎಸ್ ಅಧಿಕಾರಿಗಳ ಅಸೋಸಿಯೇಷನ್ ಎಲ್ಲಿ ಹೋಗಿತ್ತು? ಆಗ ಅವರು ಯಾಕೆ ಮುಖ್ಯಮಂತ್ರಿಗಳ ವಿರುದ್ಧ ದೂರು ನೀಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಪ್ರಶ್ನಿಸಿದರು.

ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಶುಕ್ರವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ವಿಧಾನಪರಿಷತ್ ಸದಸ್ಯ ರವಿಕುಮಾರ್ ಅವರ ಹೇಳಿಕೆ ಕುರಿತು ಮಾಧ್ಯಮಗಳನ್ನು ಗಮನಿಸಿದ್ದೇನೆ. ರವಿಕುಮಾರ್ ಅವರು ಈ ಸಂಬಂಧ ಸ್ಪಷ್ಟನೆಯನ್ನೂ ನೀಡಿದ್ದಾರೆ. ತದನಂತರ ಐಎಎಸ್ ಅಧಿಕಾರಿಗಳ ಅಸೋಸಿಯೇಷನ್‍ನವರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ದೂರು ನೀಡಿದ್ದಾಗಿ ಮಾಹಿತಿ ಬಂದಿದೆ. ಕಾಂಗ್ರೆಸ್ ಪಕ್ಷದ ಕೆಲವು ಮುಖಂಡರು ನಿನ್ನೆ ಹೊರಟ್ಟಿಯವರನ್ನು ಭೇಟಿ ಮಾಡಿ ದೂರು ನೀಡಿದ್ದಾರೆ. ಎಫ್‍ಐಆರ್ ದಾಖಲಾಗಿದೆ” ಎಂದರು.

“ರವಿಕುಮಾರ್ ಅವರ ವಿಚಾರ ಒಂದೆಡೆ ಇರಲಿ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ವತಃ ಬೆಳಗಾವಿಯಲ್ಲಿ ಬಹಿರಂಗ ಸಭೆಯಲ್ಲಿ ಒಬ್ಬ ಹಿರಿಯ ಪೊಲೀಸ್ ಅಧಿಕಾರಿಗೆ ಕಪಾಳಕ್ಕೆ ಹೊಡೆಯಲು ಹೋದರಲ್ಲವೇ? ಆಗ ಈ ಅಸೋಸಿಯೇಷನ್ ಎಲ್ಲಿ ಹೋಗಿತ್ತು? ಇದೇ ಮುಖ್ಯಮಂತ್ರಿಗಳು ಇನ್ನೊಂದು ಕಡೆ ಸರಕಾರಿ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳನ್ನು ‘ಏಯ್ ಎದ್ದೇಳು’ ಎಂದು ಅಪಮಾನ ಮಾಡಿದ್ದರು. ಆಗ ಐಎಎಸ್ ಅಸೋಸಿಯೇಷನ್ ಎಲ್ಲಿ ಹೋಗಿತ್ತು ಎಂದು ಕೇಳಿದರು. ಇದು ಕೂಡ ಚರ್ಚೆ ಆಗಲಿ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮುಖ್ಯಮಂತ್ರಿ ಸ್ಥಾನಕ್ಕಾಗಿ ಬಹಳ ಜನ ಪ್ರಾರ್ಥನೆ ಮಾಡುತ್ತಿದ್ದಾರೆ, ಪ್ರಯತ್ನ ಮಾಡುತ್ತಿದ್ದಾರೆ. ಸುರ್ಜೇವಾಲಾರನ್ನು ಕರೆಸಿ ಭೂಮಿ ಪೂಜೆ, ಗುದ್ದಲಿ ಪೂಜೆ ಮಾಡಿಸಲಿದ್ದಾರೆ. ಬರುವ ದಿನಗಳಲ್ಲಿ ಏನೇನಾಗುತ್ತೋ ಕಾದು ನೋಡೋಣ. ಸಿದ್ದರಾಮಯ್ಯನವರು ರಾಜೀನಾಮೆ ನೀಡಿದರೆ ಯಾರು ಮುಖ್ಯಮಂತ್ರಿ ಎಂಬುದು ನಮಗೆ ಮುಖ್ಯವಲ್ಲ; ಕಾಂಗ್ರೆಸ್ ಸರಕಾರದ ಬಗ್ಗೆ ರಾಜ್ಯದ ಜನರು ಛೀಮಾರಿ ಹಾಕುತ್ತಿದ್ದಾರೆ. ಸಂಕಷ್ಟದಲ್ಲಿರುವ ರೈತರ ಬಗ್ಗೆ ಈ ಸರಕಾರಕ್ಕೆ ಕಾಳಜಿ ಇಲ್ಲ” ಎಂದು ಟೀಕಿಸಿದರು.

ಪ್ರಿಯಾಂಕ್ ಖರ್ಗೆ ತಿರುಕನ ಕನಸು

ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಆರೆಸ್ಸೆಸ್ ನಿಷೇಧಿಸುವುದಾಗಿ ಪ್ರಿಯಾಂಕ್ ಖರ್ಗೆ ಅವರು ಹೇಳಿರುವುದು ಮೂರ್ಖತನದ ಹೇಳಿಕೆ. ಪ್ರಿಯಾಂಕ್ ಖರ್ಗೆ ರಾತ್ರಿ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ತಿರುಕನ ಕನಸು ಕಾಣುತ್ತಿದ್ದರೆ ಅದಕ್ಕೆ ನಮ್ಮ ಅಭ್ಯಂತರ ಇಲ್ಲ” ಎಂದು ವ್ಯಂಗ್ಯವಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...