ನಟ ಪ್ರಕಾಶ್‌ ರೈಗೆ ಆಂಧ್ರ, ತಮಿಳುನಾಡಿನ ಭೂಸ್ವಾಧೀನ ಏಕೆ ಕಾಣಿಸುತ್ತಿಲ್ಲ: ಸಚಿವ ಎಂ ಬಿ ಪಾಟೀಲ್ ಪ್ರಶ್ನೆ

Date:

ಆಂಧ್ರದಲ್ಲಿ ಬೇರೆ ಬೇರೆ ಕೈಗಾರಿಕಾ ಉದ್ದೇಶಗಳಿಗೆ 45 ಸಾವಿರ ಎಕರೆ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಇನ್ಫೋಸಿಸ್, ಕಾಗ್ನಿಜೆಂಟ್, ಟಿಸಿಎಸ್ ಮುಂತಾದ 100 ಕಂಪನಿಗಳಿಗೆ ವಿಶಾಖಪಟ್ಟಣದಲ್ಲಿ ಎಕರೆಗೆ ಬರೀ 99 ಪೈಸೆಯಂತೆ ಭೂಮಿ ಕೊಡಲಾಗಿದೆ. ನಟ ಪ್ರಕಾಶ್ ರೈಗೆ ಇವೆಲ್ಲ ಏಕೆ ಕಾಣಿಸುತ್ತಿಲ್ಲ ಎಂದು ಸಚಿವ ಎಂ ಬಿ ಪಾಟೀಲ್‌ ಪ್ರಶ್ನಿಸಿದ್ದಾರೆ.

ಮಂಗಳವಾರ ಇಲ್ಲಿನ‌ ನಿವಾಸದಲ್ಲಿ ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, “ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಹೋರಾಟದ ಹಕ್ಕಿದೆ. ನಾನೂ ಹೋರಾಟ ಮಾಡಿಕೊಂಡೇ ಬಂದಿರುವವನು. ಈ ವಿಷಯ ನಟ ಪ್ರಕಾಶ್ ರೈಗೆ ಗೊತ್ತಿರಲಿಕ್ಕಿಲ್ಲ. ಬರಪೀಡಿತ ವಿಜಯಪುರ ಜಿಲ್ಲೆಯನ್ನು ನಾನು ಹೋರಾಡಿಯೇ ನೀರಾವರಿ ಭೂಮಿಯನ್ನಾಗಿ ಮಾಡಿದ್ದೇನೆ” ಎಂದರು.

“ಪ್ರಕಾಶ್ ರೈ ಅವರು ನಮಗಿಂತ ಆಂಧ್ರದಲ್ಲಿ ಹೆಚ್ಚು ಪ್ರಭಾವಿಗಳು ಮತ್ತು ಜನಪ್ರಿಯರು. ಆದ್ದರಿಂದ ಅವರು ಬೇರೆಬೇರೆ ರಾಜ್ಯಗಳಲ್ಲೂ ರೈತರ ಭೂಸ್ವಾಧೀನದ ವಿರುದ್ಧ ಹೋರಾಟ ಮಾಡಿದರೆ ಒಳ್ಳೆಯದು. ನಮ್ಮಲ್ಲಿ ಹೈಟೆಕ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕಿಗಾಗಿ ಕೇವಲ 1,282 ಎಕರೆ ಮಾತ್ರ ಸ್ವಾಧೀನಪಡಿಸಿಕೊಳ್ಳಲು ತೀರ್ಮಾನಿಸಿದ್ದೇವೆ. ಪಕ್ಕದ ಆಂಧ್ರ ಪ್ರದೇಶದಲ್ಲಿ ಇದೇ ಉದ್ದೇಶಕ್ಕಾಗಿ ನಮ್ಮ ಗಡಿಗೇ ಅಂಟಿಕೊಂಡಿರುವ ಮಡಕಶಿರಾದಿಂದ ಪೆನುಗೊಂಡದವರೆಗೆ 10 ಸಾವಿರ ಎಕರೆಯನ್ನು ಸ್ವಾಧೀನಪಡಿಸಿಕೊಂಡು, ಉಚಿತವಾಗಿ ಕೊಡುವುದಾಗಿ ಹೇಳಲಾಗುತ್ತಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇತ್ತ ತಮಿಳುನಾಡಿನ ಹೊಸೂರು ನಮ್ಮಿಂದ ಕೇವಲ 50 ಕಿ.ಮೀ. ದೂರದಲ್ಲಿದೆ. ಅಲ್ಲಿನ ಸರಕಾರ ಈಗ ಆ ಪ್ರದೇಶವನ್ನು ಕೇಂದ್ರೀಕರಿಸಿ ಕೈಗಾರಿಕಾ ಬೆಳವಣಿಗೆಯನ್ನು ವಿಸ್ತರಿಸುತ್ತಿದೆ. ಜತೆಗೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನೂ ನಿರ್ಮಿಸಲು ಮುಂದಾಗಿದೆ. ಇದಕ್ಕೆಲ್ಲ ಅದೂ ಸಹ ಅಗ್ಗದ ದರದಲ್ಲಿ ಭೂಮಿ ಕೊಡುತ್ತಿದೆ. ಆಂಧ್ರ ಮತ್ತು ತಮಿಳುನಾಡಿನಲ್ಲಿ ಉದ್ಯಮ ನಡೆಸುತ್ತಿರುವವರಿಗೆ ಬೆಂಗಳೂರು ಬರೀ ಆಶ್ರಯತಾಣವಾಗಿ ಕಾಣುತ್ತಿದೆ. ಆಂಧ್ರದ ಯೋಜನೆ ಗೆದ್ದರೆ, ನಮ್ಮ ರಕ್ಷಣಾ ಮತ್ತು ಏರೋಸ್ಪೇಸ್ ಕಂಪನಿಗಳು ಅಲ್ಲಿಗೆ ಹೋಗಬಹುದು. ಇದರಿಂದ ರಾಜ್ಯಕ್ಕೆ ಆಗುವ ನಷ್ಟವನ್ನು ಅಂದಾಜು ಮಾಡಲೂ ಸಾಧ್ಯವಿಲ್ಲ” ಎಂದು ಅಭಿಪ್ರಾಯಪಟ್ಟರು.

ಈ ಸುದ್ದಿ ಓದಿದ್ದೀರಾ? ಪಾಟೀಲರೇ, ಸ್ವಲ್ಪವಾದರೂ ಜನಪರವಾಗಿ, ಜವಾಬ್ದಾರಿಯಿಂದ ನಡೆದುಕೊಳ್ಳಿ: ನಟ ಪ್ರಕಾಶ್‌ ರಾಜ್‌ ತಿರುಗೇಟು

“ಕರ್ನಾಟಕವು ದೇಶದ ರಕ್ಷಣೆ ಮತ್ತು ವೈಮಾಂತರಿಕ್ಷ ವಹಿವಾಟಿನಲ್ಲಿ ಶೇಕಡ 65ರಷ್ಟು ಪಾಲು ಹೊಂದಿದ್ದು, ಈ ವಲಯದಲ್ಲಿನ ನಮ್ಮ ಕಾರ್ಯ ಪರಿಸರವು ಜಾಗತಿಕವಾಗಿ ತೃತೀಯ ಸ್ಥಾನದಲ್ಲಿದೆ. ನಮ್ಮಲ್ಲಿ ಈ ವಲಯದ ಎಚ್ಎಎಲ್, ಸ್ಯಾಫ್ರಾನ್, ಬೋಯಿಂಗ್, ಏರ್ ಬಸ್, ಕಾಲಿನ್ಸ್, ಲಾಕ್ ಹೀಡ್ ಮಾರ್ಟಿನ್ ಮುಂತಾದ ದೈತ್ಯ ಕಂಪನಿಗಳಿವೆ. ದೇವನಹಳ್ಳಿಯಲ್ಲಿರುವ ವಿಮಾನ ನಿಲ್ದಾಣದ ಪಕ್ಕದಲ್ಲೇ ಏರೋಸ್ಪೇಸ್ ಪಾರ್ಕ್ ಇದೆ. ಇದಕ್ಕೆ ಮತ್ತಷ್ಟು ಬಲ ತುಂಬಲೆಂದೇ ಈಗ ಅದರ ಸನಿಹದಲ್ಲೇ ಉದ್ದೇಶಿತ ಪಾರ್ಕ್ ಸ್ಥಾಪಿಸುವ ಚಿಂತನೆ ಇದೆ. ಸಂತ್ರಸ್ತ ರೈತರಿಗೆ 2013ರ ಭೂಸ್ವಾಧೀನ ಕಾಯ್ದೆಯ ಪ್ರಕಾರವೇ ನ್ಯಾಯಯುತ ಪರಿಹಾರ ಕೊಡಲಾಗುತ್ತದೆ” ಎಂದು ಹೇಳಿದರು.

“ಪ್ರಕಾಶ್ ರೈ ಬಗ್ಗೆ ವೈಯಕ್ತಿಕವಾಗಿ ಯಾವ ಸಿಟ್ಟೂ ಇಲ್ಲ. ಹಿಂದೆ ನಾನು ನೀರಾವರಿ ಸಚಿವನಾಗಿದ್ದಾಗಲೂ ಒಳ್ಳೆಯ ಕೆಲಸಗಳನ್ನೇ ಮಾಡಿದ್ದೇನೆ. ರೈತ ಮುಖಂಡ ಬಯ್ಯಾರೆಡ್ಡಿ ಅವರೇ ಇದನ್ನು ಮೆಚ್ಚಿಕೊಂಡು ಮಾತನಾಡಿದ್ದರು. ದುರದೃಷ್ಟವಶಾತ್ ಇವತ್ತು ಅವರು ನಮ್ಮೊಂದಿಗಿಲ್ಲ. ಅವರು ನಿಜವಾದ ರೈತ ನಾಯಕರಾಗಿದ್ದರು. ಈಗ ನಮ್ಮ ವಿರುದ್ಧ ಮಾತನಾಡುತ್ತಿರುವವರು ಇದನ್ನೆಲ್ಲ ಅರಿಯಬೇಕು” ಎಂದು ಪ್ರತಿಕ್ರಿಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...