ಮಾರ್ಚ್ 8 – ಅಂತಾರಾಷ್ಟ್ರೀಯ ದುಡಿವ ಮಹಿಳೆಯರ ದಿನ. ದುಡಿಮೆ, ಲಿಂಗ ಸಮಾನತೆ, ಸಹಬಾಳ್ವೆಗಾಗಿ ಮಹಿಳೆಯರು ಹೋರಾಡಿದ್ದರ ಸಂಕೇತವಾಗಿ ಪ್ರತಿ ವರ್ಷ ಮಾರ್ಚ್ 8ರಂದು ಮಹಿಳಾ ದಿನವನ್ನು ಆಚರಿಸಲಾಗುತ್ತದೆ. ಪಿತೃಪ್ರಭುತ್ವ ಸಮಾಜದಲ್ಲಿ ಲಿಂಗ ಸಮಾನತೆಗಾಗಿನ ಹೋರಾಟಗಳು ನಡೆಯುತ್ತಲೇ ಇವೆ. ಯಾವುದೇ ಕ್ಷೇತ್ರದಲ್ಲಿ ಪುರುಷರಿಗಿಂತ ಮಹಿಳೆಯರು ಹಿಂದುಳಿದಿಲ್ಲ ಎಂಬುದನ್ನು ಹೆಣ್ಣು ಮಕ್ಕಳು ಸಾಧಿಸಿ ತೋರಿಸಿದ್ದಾರೆ. ಕರ್ನಾಟಕದ ಹಲವಾರು ಜಿಲ್ಲೆಗಳ ಆಡಳಿತ ಜವಾಬ್ದಾರಿಯನ್ನು ಮಹಿಳಾ ಅಧಿಕಾರಿಗಳು ಹೊತ್ತಿದ್ದಾರೆ. ಜಿಲ್ಲೆಗಳನ್ನು ಮುನ್ನಡೆಸುತ್ತಿದ್ದಾರೆ. ರಾಜ್ಯದಲ್ಲಿ ಹಾಲಿ 11 ಜಿಲ್ಲೆಗಳಿಗೆ ಮಹಿಳಾ ಜಿಲ್ಲಾಧಿಕಾರಿಗಳಿದ್ದಾರೆ.
ಬೀದರ್ ಜಿಲ್ಲೆಯಲ್ಲಿ ಶಿಲ್ಪ ಶರ್ಮಾ ಅವರು ಜಿಲ್ಲಾಧಿಕಾರಿಯಾಗಿದ್ದಾರೆ. ಅವರು ಮೂಲತಃ ಉತ್ತರ ಭಾರತದವಾಗಿದ್ದಾರೆ. ಈ ಹಿಂದೆ, ಅವರು ಯಾದಗಿರಿ ಜಿಲ್ಲಾ ಪಂಚಾಯತಿಯ ಸಿಇಒ ಕೂಡ ಆಗಿದ್ದರು. ಈಗ, ಬೀದರ್ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಕಲಬುರಗಿ ಜಿಲ್ಲೆಗೆ ಫೌಜಿಯಾ ತರನ್ನುಮ್ ಜಿಲ್ಲಾಧಿಕಾರಿಯಾಗಿದ್ದಾರೆ. ಅವರು ಈ ಹಿಂದೆ, ಕೊಪ್ಪಳ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿ ಸೇವೆ ಸಲ್ಲಿಸಿದ್ದಾರೆ.
ಯಾದಗಿರಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಬಿ ಸುಶೀಲ ಕಾರ್ಯನಿರ್ವಹಿಸುತ್ತಿದ್ದಾರೆ. ಅವರು ಈ ಹಿಂದೆ, ಗದಗ ಮತ್ತು ಧಾರವಾಡ ಜಿಲ್ಲೆಗಳಲ್ಲಿಯೂ ಜಿಲ್ಲಾಧಿಕಾರಿ ಸೇವೆ ಸಲ್ಲಿಸಿದ್ದಾರೆ.
ಬಾಗಲಕೋಟೆ ಜಿಲ್ಲೆಯಲ್ಲಿ ಕೆ.ಎಂ ಜಾನಕಿ ಅವರು ಜಿಲ್ಲಾಧಿಕಾರಿಯಾಗಿದ್ದಾರೆ. ಈ ಹಿಂದೆ, ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾಗಿದ್ದರು.
ಧಾರವಾಡ ಜಿಲ್ಲೆಗೆ ಜಿ.ಆರ್ ದಿವ್ಯಪ್ರಭು ಅವರು ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರು ಈ ಹಿಂದೆ, ಚಿತ್ರದುರ್ಗದ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಅವರು ಪತಿ ರಾಮಪ್ರಸಾತ್ ಮನೋಹರ್ ಕೂಡ ಐಎಎಸ್ ಅಧಿಕಾರಿಯಾಗಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಲಕ್ಷ್ಮಿ ಪ್ರಿಯಾ ಸೇವೆ ಸಲ್ಲಿಸುತ್ತಿದ್ದಾರೆ. ಅವರು ಉತ್ತರ ಕನ್ನಡ ಜಿಲ್ಲೆಗೆ ಬರುವುದಕ್ಕೂ ಮೊದಲು ಮೈಸೂರು ಜಿಲ್ಲಾಧಿಕಾರಿಯಾಗಿದ್ದರು.
ಉಡುಪಿ ಜಿಲ್ಲೆಯಲ್ಲಿ ವಿದ್ಯಾಕುಮಾರಿ ಅವರು ಜಿಲ್ಲಾಧಿಕಾರಿಯಾಗಿದ್ದಾರೆ. ಅವರು, ತುಮಕೂರು ಮತ್ತು ಮೈಸೂರು ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಗೆ ಮೀನಾ ನಾಗರಾಜ್ ಅವರು ಜಿಲ್ಲಾಧಿಕಾರಿಯಾಗಿದ್ದಾರೆ. ಅವರು ಬಿಜೆಪಿ ಸರ್ಕಾರದ ಅವಧಿಯಲ್ಲಿ ಐಟಿ ಬಿಟಿ ಇಲಾಖೆ ನಿರ್ದೇಶಕಿಯಾಗಿದ್ದರು.
ಹಾಸನ ಜಿಲ್ಲೆಯಲ್ಲಿ ಸಿ ಸತ್ಯಭಾಮ ಅವರು ಜಿಲ್ಲಾಧಿಕಾರಿ ಆಗಿದ್ದಾರೆ. ಅವರು ಹಾಸನಕ್ಕೆ ವರ್ಗಾವಣೆ ಆಗುವುದಕ್ಕೂಮುನ್ನ ಕೋಲಾರ ಜಿಲ್ಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.
ತುಮಕೂರು ಜಿಲ್ಲೆಗೆ ಸುಭಾ ಕಲ್ಯಾಣ ಅವರು ಜಿಲ್ಲಾಧಿಕಾರಿಯಾಗಿದ್ದರು. ಅವರು, ಈ ಹಿಂದೆ, ತುಮಕೂರು ಜಿಲ್ಲಾ ಪಂಚಾಯಿತಿಯ ಸಿಇಒ ಆಗಿ ಕೂಡ ಸೇವೆ ಸಲ್ಲಿಸಿದ್ದಾರೆ.
ಚಾಮರಾಜನಗರ ಜಿಲ್ಲೆಯಲ್ಲಿ ಶಿಲ್ಪಾ ನಾಗ್ ಅವರು ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರು ಮೂಲತಃ ಕರ್ನಾಟಕದವರೇ ಆಗಿದ್ದು, ಹಾಸನ ಜಿಲ್ಲೆಯವರು. ಅವರು ಈ ಹಿಂದೆ, ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾಗಿದ್ದರು.




