ಇ-ಸ್ವತ್ತು ಸಮಸ್ಯೆಗಳಿಗೆ ಸರ್ಕಾರದ ಮಟ್ಟದಲ್ಲಿ ಪರಿಹಾರಕ್ಕೆ ಕಾರ್ಯನಿರ್ವಹಣಾ ಸಮಿತಿ ರಚನೆ

Date:

ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿರ್ದೇಶಕರು (ಪಂ.ರಾಜ್) ಇವರ ಅಧ್ಯಕ್ಷತೆಯಲ್ಲಿ 12 ಮಂದಿಯನ್ನು ಒಳಗೊಂಡ ಇ-ಸ್ವತ್ತು ಕಾರ್ಯನಿರ್ವಹಣಾ ಸಮಿತಿ ರಚನೆ ಮಾಡಲಾಗಿದೆ.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993 ರ ಪ್ರಕರಣ 199 ಕ್ಕೆ ತರಲು ಉದ್ದೇಶಿಸಿರುವ ತಿದ್ದುಪಡಿಗಳಿಗೆ ಅನುಗುಣವಾಗಿ ಇ-ಸ್ವತ್ತುಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿಗಳಲ್ಲಿ ಉದ್ಭವಿಸುವ ಸಮಸ್ಯೆಗಳ ಹಾಗೂ ಸದರಿ ಸಮಸ್ಯೆಗಳ ಪರಿಹಾರದ ಭಾಗವಾಗಿ ಇ-ಸ್ವತ್ತು ಸುಧಾರಣೆಗೆ ಸಂಬಂಧಿಸಿದಂತೆ ಅಧ್ಯಯನ ಮಾಡಿ ವರದಿಯನ್ನು ಸಲ್ಲಿಸುವ ಹೊಣೆಗಾರಿಕೆಯನ್ನು ಈ ಸಮಿತಿಗೆ ವಹಿಸಲಾಗಿದೆ.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯಿತಿಗಳ ಆಯವ್ಯಯ ಮತ್ತು ಲೆಕ್ಕಪತ್ರಗಳು) ನಿಯಮಗಳು, 2006 ರ ನಿಯಮ 28 ಮತ್ತು 30 ಕ್ಕೆ ತಿದ್ದುಪಡಿ ತಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಕ್ರಮಬದ್ಧ ಆಸ್ತಿಗಳಿಗೆ ನಮೂನೆ-9, 11ಎ ಮತ್ತು ಕ್ರಮಬದ್ಧವಲ್ಲದ ಆಸ್ತಿಗಳಿಗೆ ನಮೂನೆ-11ಬಿ ಅನ್ನು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಡಿಜಿಟಲ್ ಸಹಿಯ ಮೂಲಕ ವಿತರಿಸಲು ಅವಕಾಶ ಕಲ್ಪಿಸಲಾಗಿದೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮತ್ರು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಂದು ತಿಳಿಸಿರುವ ಇ-ಸ್ವತ್ತು ಅನುಷ್ಠಾನದಲ್ಲಿ ಕಾಲಕಾಲಕ್ಕೆ ಎದುರಾಗುವ ಸಮಸ್ಯೆಗಳಿಗೆ ಸರ್ಕಾರದ ಮಟ್ಟದಲ್ಲಿ ಪರಿಹರಿಸಲು ಕ್ರಮಕೈಗೊಳ್ಳಲಾಗುತ್ತಿರುವ ತಿದ್ದುಪಡಿಗಳಿಗೆ ಅನುಗುಣವಾಗಿ ಎದುರಾಗುವ ಸಮಸ್ಯೆಗಳನ್ನು ಅಧ್ಯಯನ ಮಾಡಲು 12 ಮಂದಿ ಅಧಿಕಾರಿಗಳ ಸದಸಸ್ಯರನ್ನು ಒಳಗೊಂಡ ಈ ಸಮಿತಿಯನ್ನು ರಚಿಸಲಾಗಿದೆ ಎಂದು ಹೇಳಿದ್ದಾರೆ.

ನಿರ್ದೇಶಕರು (ಅಭಿವೃದ್ಧಿ) ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ; ವಿಜಯ ಅಜೂರೆ, ಉಪಕಾರ್ಯದರ್ಶಿ, ವಿಜಯಪುರ ಜಿಲ್ಲಾ ಪಂಚಾಯತಿ, ವಿಜಯಪುರ; ಶಿವಶಂಕರ್ ಪಿ, ಸದಸ್ಯರು, ಸೀಮಾ ನಿರ್ಣಯ ಆಯೋಗ; ಕೆ.ಜಿ.ಜಗದೀಶ್, ನಿವೃತ್ತ ಉಪನಿರ್ದೇಶಕರು, ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ; ಬಸವರಾಜು ಶರಬಯ್ಯ, ಕಾರ್ಯನಿರ್ವಾಹಕ ಅಧಿಕಾರಿ, ಶಹಪುರ ತಾಲ್ಲೂಕು ಪಂಚಾಯಿತಿ, ಕಲಬುರಗಿ ಜಿಲ್ಲೆ; ಶ್ರೀಮತಿ ಆಶಾ ಎಂ.ಜೆ, ಸಹಾಯಕ ನಿರ್ದೇಶಕರು (ಪಂ.ರಾಜ್), ನ್ಯಾಮತಿ ತಾಲ್ಲೂಕು ಪಂಚಾಯಿತಿ, ದಾವಣಗೆರೆ ಜಿಲ್ಲೆ; ಸಿದ್ದರಾಜು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಹೆನ್ನಾಗರ ಗ್ರಾಮ ಪಂಚಾಯಿತಿ, ಆನೇಕಲ್ ತಾಲ್ಲೂಕು, ಬೆಂಗಳೂರು ನಗರ ಜಿಲ್ಲೆ; ಪ್ರಭಾಕರ್ ಎನ್ ಭಟ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಶಿಂಧೋಳಿ ಗ್ರಾಮ ಪಂಚಾಯಿತಿ, ಖಾನಾಪುರ ತಾಲ್ಲೂಕು, ಬೆಳಗಾವಿ ಜಿಲ್ಲೆ; ಚಾಲುಕ್ಯ ಭಾರವಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಕೆ.ಬಿ. ಹಾಲ್ ಗ್ರಾಮ ಪಂಚಾಯಿತಿ, ಚಿಕ್ಕಮಗಳೂರು ತಾಲ್ಲೂಕು, ಚಿಕ್ಕಮಗಳೂರು ಜಿಲ್ಲೆ; ಯಶವಂತ ಬೆಳ್ಳಡ, ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಶಿರಾಡಿ ಸದಸ್ಯರು ಗ್ರಾಮ ಪಂಚಾಯಿತಿ, ಕಡಬ ತಾಲ್ಲೂಕು, ದಕ್ಷಿಣಕನ್ನಡ ಜಿಲ್ಲೆ. ಮಂಗಳೂರು ಈ 10 ಮಂದಿ ಸಮಿತಿಯ ಸದಸ್ಯರಾಗಿದ್ದು ಉಪನಿರ್ದೇಶಕರು-6 (ಅಭಿವೃದ್ಧಿ), ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ, ಬೆಂಗಳೂರು ಇವರು ಸಮಿತಿಯ ಸದಸ್ಯ ಕಾರ್ಯದರ್ಶಿಗಳಾಗಿರುತ್ತಾರೆ.

ಕಾರ್ಯನಿರ್ವಹಣಾ ಸಮಿತಿಯು ಎರಡು ತಿಂಗಳೊಳಗೆ ವಿವರವಾದ ವರದಿಯೊಂದಿಗೆ ಇ-ಸ್ವತ್ತು ಸಲಹಾ ಸಮಿತಿಗೆ ಶಿಫಾರಸ್ಸು ಮಾಡಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತೆ ಡಾ.ಅರುಂಧತಿ ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...