ಹಿರಿಯ ಸಾಹಿತಿ ಎಚ್‌ ಎಸ್ ವೆಂಕಟೇಶಮೂರ್ತಿ ನಿಧನ

Date:

ಹಿರಿಯ ಕವಿ ಎಚ್‌ ಎಸ್ ವೆಂಕಟೇಶಮೂರ್ತಿ(ಎಚ್‌ಎಸ್‌ವಿ) ಶುಕ್ರವಾರ ನಿಧನರಾಗಿದ್ದಾರೆ. 80 ವರ್ಷದ ಅವರು ಕೆಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಮುಂಜಾನೆ 7 ಗಂಟೆ ಸುಮಾರಿಗೆ ನಿಧನರಾಗಿದ್ದಾರೆ.

1944ರ ಜೂನ್ 23ರಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಹೊದಿಗೆರೆ ಗ್ರಾಮದಲ್ಲಿ ಜನಿಸಿದ ಎಚ್‌ಎಸ್‌ವಿ ಅವರ ತಂದೆ ನಾರಾಯಣ ಭಟ್ಟರು ಮತ್ತು ತಾಯಿ ನಾಗರತ್ನಮ್ಮ. ಬಾಲ್ಯದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಕಳೆದ ತಮ್ಮ ಅನುಭವವನ್ನು ಅವರ ಸಾಹಿತ್ಯದಲ್ಲಿ ಕಾಣಿಸಿದ್ದಾರೆ.

ಇದನ್ನು ಓದಿದ್ದೀರಾ? ಕನ್ನಡ ಚಿತ್ರರಂಗದ ಹಿರಿಯ ನಟ ಬ್ಯಾಂಕ್ ಜನಾರ್ಧನ್ ನಿಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾಟಕ, ಕಾದಂಬರಿ, ಮಕ್ಕಳ ಸಾಹಿತ್ಯ, ವಿಮರ್ಶೆ, ಅನುವಾದ, ಕವಿತೆ – ಹೀಗೆ ಸಾಹಿತ್ಯ ಕ್ಷೇತ್ರಕ್ಕೆ ಎಚ್‌ಎಸ್‌ವಿ ಕೊಡುಗೆ ಅಗಾಧ. ಚಿತ್ರರಂಗದಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. 1973ರಲ್ಲಿ ಬೆಂಗಳೂರಿನ ಸೇಂಟ್ ಜೋಸೆಫ್ ವಾಣಿಜ್ಯ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿದ್ದರು. ಸುಮಾರು ಮೂರು ದಶಕಗಳ ಕಾಲ ಅಲ್ಲಿ ಸೇವೆ ಸಲ್ಲಿಸಿದ ಬಳಿಕ 2000ರಲ್ಲಿ ನಿವೃತ್ತಿ ಪಡೆದರು. ವಿವಿಧ ಪ್ರಶಸ್ತಿ ಪುರಸ್ಕೃತರಾದ ಅವರು, ಕಲಬುರಗಿಯಲ್ಲಿ ನಡೆದ 85ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

shv

ಎಚ್‌ಎಸ್‌ವಿ ಅವರ “ಕನ್ನಡದಲ್ಲಿ ಕಥನ ಕವನಗಳು” ಎಂಬ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿ ಲಭಿಸಿದೆ. ಬಾಗಿಲು ಬಡಿವ ಜನಗಳು, ಪರಿವೃತ್ತ, ಮೂವತ್ತು ಮಳೆಗಾಲ, ಸೌಗಂಧಿಕ ಕವನ ಸಂಕಲನಗಳು, ಅಗ್ನಿವರ್ಣ, ಹೆಜ್ಜೆಗಳು, ಒಂದು ಸೈನಿಕ ವೃತ್ತಾಂತ ಎಂಬ ನಾಟಕಗಳು ಸೇರಿದಂತೆ 100ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...