ಸಾಹಿತಿ ಎಸ್‌ ಎಲ್‌ ಭೈರಪ್ಪ ಅಂತ್ಯಕ್ರಿಯೆ, ಅಂತಿಮ ಸಂಸ್ಕಾರ ವಿಧಿಗಳಲ್ಲಿ ಲೇಖಕಿ ಸಹನಾ ಭಾಗಿ

Date:

ಹಿರಿಯ ಸಾಹಿತಿ ಡಾ. ಎಸ್.ಎಲ್. ಭೈರಪ್ಪ ಅವರ ಅಂತ್ಯಸಂಸ್ಕಾರ ಶುಕ್ರವಾರ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ರುದ್ರ ಭೂಮಿಯಲ್ಲಿ ಮಧ್ಯಾಹ್ನ 12:30ಕ್ಕೆ ನಡೆಯಿತು.

ಪತ್ನಿ ಸರಸ್ವತಿ, ಕುಟುಂಬಸ್ಥರು, ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಸಚಿವ ಪ್ರಲ್ಹಾದ ಜೋಶಿ ಸೇರಿದಂತೆ ಹಲವು ಗಣ್ಯರು ಭೈರಪ್ಪ ಅವರಿಗೆ ಕಣ್ಣೀರಿನ ವಿದಾಯ ಹೇಳಿದರು.

ಪುತ್ರರಾದ ರವಿಶಂಕರ್‌, ಉದಯ್‌ ಶಂಕರ್‌ ಅಂತಿಮ ವಿಧಿ ವಿಧಾನ ನೆರವೇರಿಸಿದರು, ಭೈರಪ್ಪನವರ ಇಚ್ಛೆಯಂತೆ ಅಂತ್ಯ ಸಂಸ್ಕಾರದಲ್ಲಿ ಲೇಖಕಿ ಸಹನಾ ವಿಜಯ್‌ಕುಮಾರ್ ಸಹ ಉಪಸ್ಥಿತರಿದ್ದರು. ಅಂತಿಮ ಸಂಸ್ಕಾರ ವಿಧಿಗಳ ಬಳಿಕ ಪುತ್ರರ ಜೊತೆಗೆ ಸಹನಾ ವಿಜಯ್‌ಕುಮಾರ್ ಭೈರಪ್ಪ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು. ಎಸ್ ಎಲ್ ಭೈರಪ್ಪ ಪಂಚಭೂತಗಳಲ್ಲಿ ಲೀನವಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
S L Bhyrappa 1 1

ಸಕಲ ಸರ್ಕಾರಿ ಗೌರವಗಳೊಂದಿಗೆ ಎಸ್‌.ಎಲ್‌ ಭೈರಪ್ಪ ಅಂತ್ಯಕ್ರಿಯೆ

ಸಕಲ ಸರ್ಕಾರಿ ಗೌರವಗಳೊಂದಿಗೆ ಬ್ರಾಹ್ಮಣ ಸಂಪ್ರದಾಯದಂತೆ ಭೈರಪ್ಪ ಅವರ ಅಂತ್ಯ ಸಂಸ್ಕಾರ ನಡೆಯಿತು. ಪೊಲೀಸ್ ಅಧಿಕಾರಿ ಶಿವಾನಂದ ನೇತೃತ್ವದ ಹತ್ತು ಮಂದಿ ಪೊಲೀಸ್ ತಂಡವು ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಗೌರವ ಸಲ್ಲಿಸಿತು.

ಅದಕ್ಕೂ ಮೊದಲು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಶಾಸಕ ಟಿ.ಎಸ್.ಶ್ರೀವತ್ಸ ಮುಂತಾದವರು ಅಂತಿಮ ನಮನ ಸಲ್ಲಿಸಿದರು. ರಾಷ್ಟ್ರಧ್ವಜವನ್ನು ಪ್ರಲ್ಹಾದ ಜೋಶಿ ಹಾಗೂ ಡಾ.ಎಚ್.ಸಿ.ಮಹದೇವಪ್ಪ ಅವರು ಭೈರಪ್ಪ ಮಕ್ಕಳಾದ ರವಿಶಂಕರ್ ಹಾಗೂ ಉದಯ್ ಶಂಕರ್ ಅವರಿಗೆ ಹಸ್ತಾಂತರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...