ಯಾದಗಿರಿ | ಯುಪಿಎಸ್ಸಿ : ಹಿಂದುಳಿದ ಜಿಲ್ಲೆಯ ಅಭ್ಯರ್ಥಿಗಳ ಸದ್ದು, ಗಿರಿ ಜಿಲ್ಲೆಗೆ ಮೂಡಿದ ಹೆಮ್ಮೆಯ ಗರಿ

Date:

ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (ಯುಪಿಎಸ್ಸಿ) ನಡೆಸಿದ 2025ನೇ ಸಾಲಿನ ನಾಗರಿಕ ಸೇವಾ (ಸಿವಿಲ್ ಸರ್ವಿಸ್) ಪರೀಕ್ಷೆಯ ಅಂತಿಮ ಫಲಿತಾಂಶ ಶುಕ್ರವಾರ ಪ್ರಕಟಗೊಂಡಿದ್ದು, ಯಾದಗಿರಿ ಜಿಲ್ಲೆಯ ನಾಲ್ವರು ಅಭ್ಯರ್ಥಿಗಳು ಅಖಿಲ ಭಾರತ ಮಟ್ಟದಲ್ಲಿ ತೇರ್ಗಡೆಯಾಗಿ ಜಿಲ್ಲೆಯ ಹೆಮ್ಮೆ ಹೆಚ್ಚಿಸಿದ್ದಾರೆ.

ಯಾದಗಿರಿಯ ಸಂದೀಪ್ ಬಾಡದ್ ಅಖಿಲ ಭಾರತ ಮಟ್ಟದಲ್ಲಿ 82ನೇ ರ್ಯಾಂಕ್ ಪಡೆದು ರಾಜ್ಯ ಮಟ್ಟದಲ್ಲಿ 2ನೇ ಸ್ಥಾನ ಗಳಿಸಿರುವುದು ವಿಶೇಷ ಸಾಧನೆಯಾಗಿದೆ. ಇದರ ಜೊತೆಗೆ ವೈದ್ಯೆ ಡಾ. ನಿವೇದಿತಾ ಭಾವಿಮನಿ 469ನೇ ರ್ಯಾಂಕ್, ಶಹಾಪುರದ ಬಸವರಾಜ್ ಜವಳಿ 664ನೇ ರ್ಯಾಂಕ್ ಹಾಗೂ ವನದುರ್ಗದ ಚಂದ್ರಶೇಖರ್ 880ನೇ ರ್ಯಾಂಕ್ ಪಡೆದು ಯಾದಗಿರಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಹಿಂದುಳಿದ ಜಿಲ್ಲೆಯಾದ ಯಾದಗಿರಿಯಿಂದ ನಾಲ್ವರು ಅಭ್ಯರ್ಥಿಗಳು ಯುಪಿಎಸ್ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿರುವುದು ಗಮನಾರ್ಹ ಎಂದು ಜನರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸಂದೀಪ್ ಬಾಡದ್ : ರಾಜ್ಯದಲ್ಲಿ 2ನೇ ಟಾಪರ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯಾದಗಿರಿ ನಗರದ ಕಿರಾಣಿ ವ್ಯಾಪಾರಿ ಬಸವರಾಜ್ ಬಾಡದ್ ಅವರ ದ್ವಿತೀಯ ಪುತ್ರ ಸಂದೀಪ್ ಬಾಡದ್ ಅಖಿಲ ಭಾರತ ಮಟ್ಟದಲ್ಲಿ 82ನೇ ರ್ಯಾಂಕ್ ಪಡೆದು ರಾಜ್ಯದಲ್ಲಿ 2ನೇ ಸ್ಥಾನ ಪಡೆದಿದ್ದಾರೆ. ಯಾದಗಿರಿಯ ಚಿರಂಜೀವಿ ಹಾಗೂ ನ್ಯೂ ಕನ್ನಡ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಅವರು, ಶಹಾಪುರದ ಕೇಂದ್ರೀಯ ಜವಾಹರ್ ನವೋದಯ ವಿದ್ಯಾಲಯದಲ್ಲಿ ದ್ವಿತೀಯ ಪಿಯುಸಿವರೆಗೆ ವಿದ್ಯಾಭ್ಯಾಸ ಮಾಡಿದ್ದಾರೆ. ಬಳಿಕ ಬೆಂಗಳೂರಿನ ಅಂಬೇಡ್ಕರ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಇಂಜಿನಿಯರಿಂಗ್ ಪದವಿ ಪಡೆದ ಅವರು ಸಾಫ್ಟ್‌ವೇರ್ ಕಂಪನಿಯಲ್ಲಿ ಎರಡು ವರ್ಷಗಳ ಕಾಲ ಕೆಲಸ ಮಾಡಿದರು. ನಂತರ ದೆಹಲಿಯಲ್ಲಿ ಐಎಎಸ್ ತರಬೇತಿ ಪಡೆದು ಸಿವಿಲ್ ಸರ್ವಿಸ್ ಪರೀಕ್ಷೆಗೆ ತಯಾರಿ ನಡೆಸಿ ಈ ಸಾಧನೆ ಮಾಡಿದ್ದಾರೆ.

ಡಾ. ನಿವೇದಿತಾ ಭಾವಿಮನಿ : 469ನೇ ರ್ಯಾಂಕ್

ಯಾದಗಿರಿ ನಗರದ ಆರೋಗ್ಯ ಇಲಾಖೆಯ ನಿವೃತ್ತ ಸಿಬ್ಬಂದಿ ಚಂದಪ್ಪ ಭಾವಿಮನಿ ಹಾಗೂ ವರ್ಕನಳ್ಳಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿಜಯಲಕ್ಷ್ಮಿ ಭಾವಿಮನಿ ದಂಪತಿಯ ಪುತ್ರಿ ಡಾ. ನಿವೇದಿತಾ ಭಾವಿಮನಿ ಅಖಿಲ ಭಾರತ ಮಟ್ಟದಲ್ಲಿ 469ನೇ ರ್ಯಾಂಕ್ ಪಡೆದಿದ್ದಾರೆ. ಯಾದಗಿರಿಯ ದೋಕಾ ಜೈನ್ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಅವರು, ಆರ್.ವಿ. ವಿದ್ಯಾಸಂಸ್ಥೆಯಲ್ಲಿ ಪ್ರೌಢ ಶಿಕ್ಷಣ ಪೂರ್ಣಗೊಳಿಸಿದ್ದಾರೆ. ಬಳಿಕ ಕಲಬುರಗಿಯ ಎಸ್‌ಬಿಆರ್ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ದ್ವಿತೀಯ ಪಿಯುಸಿ (ವಿಜ್ಞಾನ) ಓದಿ, ಬೆಂಗಳೂರಿನ ಕೆಂಪೇಗೌಡ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ನಲ್ಲಿ ಎಂ.ಬಿ.ಬಿ.ಎಸ್ ಪದವಿ ಪಡೆದಿದ್ದಾರೆ. ಎರಡನೇ ಪ್ರಯತ್ನದಲ್ಲೇ ಅವರು ಯಶಸ್ಸು ಸಾಧಿಸಿದ್ದಾರೆ.

ಬಸವರಾಜ್ ಜವಳಿ : 664ನೇ ರ್ಯಾಂಕ್

ಯಾದಗಿರಿ ಜಿಲ್ಲೆಯ ಶಹಾಪುರ ಪಟ್ಟಣದ ಉದ್ಯಮಿಗಳಾದ ವಿಶ್ವನಾಥ್–ಗಿರಿಜಾ ಜವಳಿ ದಂಪತಿಯ ಪುತ್ರ ಬಸವರಾಜ್ ಜವಳಿ ಅಖಿಲ ಭಾರತ ಮಟ್ಟದಲ್ಲಿ 664ನೇ ರ್ಯಾಂಕ್ ಪಡೆದಿದ್ದಾರೆ. ಒಂದರಿಂದ ಏಳನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲೇ ವಿದ್ಯಾಭ್ಯಾಸ ಮಾಡಿರುವುದು ವಿಶೇಷವಾಗಿದ್ದು, ನಂತರ ಆಂಗ್ಲ ಮಾಧ್ಯಮದಲ್ಲಿ ಮುಂದುವರಿಸಿ ಸಿವಿಲ್ ಇಂಜಿನಿಯರಿಂಗ್ ಪದವಿ ಪಡೆದಿದ್ದಾರೆ. ತಮ್ಮ ನಿರಂತರ ಪರಿಶ್ರಮ ಮತ್ತು ತಯಾರಿಯಿಂದ ಯುಪಿಎಸ್ಸಿ ಪರೀಕ್ಷೆಯಲ್ಲಿ ಯಶಸ್ಸು ಗಳಿಸಿದ್ದಾರೆ.

ಚಂದ್ರಶೇಖರ್ : 880ನೇ ರ್ಯಾಂಕ್

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಚೆನ್ನೂರು ಗ್ರಾಮದ ಕೃಷಿಕ ದಂಪತಿಯ ಪುತ್ರ ಚಂದ್ರಶೇಖರ್ ಅಖಿಲ ಭಾರತ ಮಟ್ಟದಲ್ಲಿ 880ನೇ ರ್ಯಾಂಕ್ ಪಡೆದಿದ್ದಾರೆ. ಚೆನ್ನೂರಿನಲ್ಲಿ ಪ್ರಾಥಮಿಕ ಶಿಕ್ಷಣ ಹಾಗೂ ವನದುರ್ಗದಲ್ಲಿ ಪ್ರೌಢ ಶಿಕ್ಷಣ ಪೂರ್ಣಗೊಳಿಸಿದ ಅವರು, ಕಲಬುರಗಿಯ ಶ್ರೀಗುರು ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡಿದ್ದಾರೆ. ಬಳಿಕ ಬೆಂಗಳೂರಿನ ಬಿಎಂಎಸ್ ಕಾಲೇಜಿನಲ್ಲಿ ಕಂಪ್ಯೂಟರ್ ವಿಜ್ಞಾನದಲ್ಲಿ ಇಂಜಿನಿಯರಿಂಗ್ ಪದವಿ ಪಡೆದಿದ್ದಾರೆ. ಮೂರು ಬಾರಿ ಸಂದರ್ಶನ ಹಂತಕ್ಕೆ ತಲುಪಿದ ಅವರು ನಾಲ್ಕನೇ ಪ್ರಯತ್ನದಲ್ಲಿ ಯಶಸ್ಸು ಸಾಧಿಸಿ ನಾಗರಿಕ ಸೇವಾ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ಇವರ ಹಿರಿಯ ಸಹೋದರ ಡಾ. ದೇವೇಂದ್ರಪ್ಪ ತೋಟಗಾರಿಕೆ ಇಲಾಖೆಯಲ್ಲಿ ವಿಜ್ಞಾನಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಇದನ್ನು ಓದಿದ್ದೀರಾ? ಕಲಬುರಗಿ | ಜ್ಞಾನ ಜೀವನದೊಡನೆ ಸದಾ ಜೊತೆಯಾಗಿರುತ್ತದೆ : ಪ್ರೊ. ದಶರಥ ನಾಯಕ್

ಒಟ್ಟಾರೆ, ಯಾದಗಿರಿ ಜಿಲ್ಲೆಯ ನಾಲ್ವರು ಯುವಕರು ಯುಪಿಎಸ್ಸಿ ಪರೀಕ್ಷೆಯಲ್ಲಿ ಸಾಧನೆ ಮಾಡುವ ಮೂಲಕ ಜಿಲ್ಲೆಯ ಹೆಮ್ಮೆ ಹೆಚ್ಚಿಸಿದ್ದು, ಯುವಜನತೆಗೆ ಪ್ರೇರಣೆಯಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...