‘ನಾನು ಹೇಳಿದವರಷ್ಟನ್ನೇ ಮಾಡಿ’ ಎನ್ನುವ ವ್ಯಕ್ತಿ ಸಿಎಂ ಮಗನೋ ಅಥವಾ ಸೂಪರ್ ಸಿಎಮ್ಮೋ?: ಎಚ್‌ಡಿಕೆ ಕಿಡಿ

Date:

  • ಸಾಮಾಜಿಕ ನ್ಯಾಯದ ಡೋಂಗಿ ಹರಿಕಾರನ ಅಸಲಿ ಮುಖ ಹಾದಿಬೀದಿಯಲ್ಲಿ
  • ಕಾಸಿಗಾಗಿ ಹುದ್ದೆ ದಂಧೆ ಅವ್ಯಾಹತವಾಗಿ, ಎಗ್ಗಿಲ್ಲದೆ ನಡೆದಿದೆ: ಕುಮಾರಸ್ವಾಮಿ

ಕಾಂಗ್ರೆಸ್‌ ಸರಕಾರದ ವಸೂಲಿ ಬಿಸ್ನೆಸ್ ಹಾದಿಬೀದಿಗೆ ಬಂದಿದೆ. ನೈತಿಕತೆ, ಮೌಲ್ಯ, ಸಾಮಾಜಿಕ ನ್ಯಾಯದ ಡೋಂಗಿ ಹರಿಕಾರನ ಅಸಲಿ ಮುಖ ಅದೇ ಹಾದಿಬೀದಿಯಲ್ಲಿ ಮೂರು ಕಾಸಿಗೆ ಹರಾಜಾಗಿದೆ ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಕುರಿತು ಸಿಎಂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರ ವಿಡಿಯೋ ತುಣಕನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಅವರು, “ಕಾಸಿಗಾಗಿ ಹುದ್ದೆ ದಂಧೆ ಕರ್ನಾಟಕದಲ್ಲಿ ಅವ್ಯಾಹತವಾಗಿ, ಎಗ್ಗಿಲ್ಲದೆ, ಲಜ್ಜೆಗೆಟ್ಟು ನಡೆದಿದೆ ಎನ್ನುವುದಕ್ಕೆ ಈ ವಿಡಿಯೋ ತುಣುಕೇ ಸಾಕ್ಷಿ” ಎಂದು ಆರೋಪಿಸಿದ್ದಾರೆ.

“ಕರ್ನಾಟಕದ ಕಲೆಕ್ಷನ್ ಕಿಂಗ್ ಅಪ್ಪ, ಕರ್ನಾಟಕದ ಕಲೆಕ್ಷನ್ ಪ್ರಿನ್ಸ್ ಮಗ ಸೇರಿ ಸಿಎಂ ಸಚಿವಾಲಯವನ್ನು ಸುಲಿಗೆ ಅಡ್ಡಾ ಮಾಡಿಕೊಂಡಿದ್ದಾರೆ ಎನ್ನುವುದಕ್ಕೆ ಇದಕ್ಕಿಂತ ದೊಡ್ಡ ಪುರಾವೆ ಬೇಕಿಲ್ಲ? ಸಾರ್ವಜನಿಕ ಸಭೆಯಲ್ಲೇ ಎಗ್ಗಿಲ್ಲದೆ, ನಾಚಿಕೆ ಮಾನ ಮರ್ಯಾದೆ ಬಿಟ್ಟು ವರ್ಗಾವಣೆ ದಂಧೆ ನಡೆಸುವ ಮುಖ್ಯಮಂತ್ರಿ, ಮತ್ತವರ ಸುಪುತ್ರ, ಸಿಎಂ ಕಚೇರಿಯ ಪರ್ಸಂಟೇಜ್ ಪಟಾಲಂ ರಾಜ್ಯದ ಪ್ರತಿಷ್ಠೆಯನ್ನು ಹಣಕ್ಕಾಗಿ ಮಾರಿಕೊಂಡಿದೆ. ಬೀದಿಯಲ್ಲಿಯೇ ಇಷ್ಟಾದರೆ ನಾಲ್ಕು ಗೋಡೆಗಳ ಮಧ್ಯೆ ಇನ್ನೆಷ್ಟು ವ್ಯವಹಾರ ನಡೆಸುತ್ತಿರಬಹುದು?” ಎಂದು ವಾಗ್ದಾಳಿ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದ ಮುಖ್ಯಮಂತ್ರಿಗೇ ಧಮ್ಕಿ ಹಾಕಿ, ‘ನಾನು ಹೇಳಿದವರಷ್ಟನ್ನೇ ಮಾಡಿ’ ಎನ್ನುವ ಈ ವ್ಯಕ್ತಿ ಮುಖ್ಯಮಂತ್ರಿ ಮಗನೋ ಅಥವಾ ಕರ್ನಾಟಕದ ಸೂಪರ್ ಸಿಎಮ್ಮೋ? ಅಥವಾ ಮಿನಿಸ್ಟರ್ ಫಾರ್ ಕ್ಯಾಶ್ ಫಾರ್ ಪೋಸ್ಟಿಂಗಾ? ಇಲ್ಲವೇ ಒಳಾಡಳಿತ ಸಚಿವಾಲಯ ಮಾದರಿಯ ‘ಒಳ ವಸೂಲಿ ಸಚಿವಾಲಯ’ದ ಸಚಿವರಾ” ಎಂದು ಪ್ರಶ್ನಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇಎಸಿಗೆ ಅದಾನಿ ಆಪ್ತನ ನೇಮಕ; ಪ್ರಧಾನಿ ಮೋದಿ ಯಾರ ಪ್ರಧಾನ ಸೇವಕ?

“ಸ್ವತಃ ಮುಖ್ಯಮಂತ್ರಿಯೇ ಫೋನ್ ಕೊಡುವಷ್ಟು ಪ್ರಭಾವಿಯಾದ ಆ ಭಾರೀ ಆಸಾಮಿ ಯಾರು? ಇಷ್ಟಕ್ಕೂ ಆ ಮಹದೇವ ಎನ್ನುವ ವ್ಯಕ್ತಿ ಯಾರು? ಹಿಂದೊಮ್ಮೆ ನಾನೇ ಮಾಧ್ಯಮಗೋಷ್ಠಿಯಲ್ಲಿ ಹೇಳಿದ್ದೆ, ಪ್ರತೀ ವರ್ಗಾವಣೆಗೆ ತಲಾ 30 ಲಕ್ಷ ರೂ. ಪೀಕುತ್ತಿದ್ದ ಗಿರಾಕಿ ಈತ ಎಂದು ತಿಳಿಸಿದ್ದೆ. ಕುಮಾರಸ್ವಾಮಿ ಸುಳ್ಳು ಹೇಳ್ತಾ ಇದ್ದಾರೆ, ಅವರು ಹೇಳೋದು 99.9999% ಸುಳ್ಳು. ಅವರಿಗೆ ನಾನು ಉತ್ತರ ಕೊಡಲ್ಲ, ಅವರು ಹಿಟ್ ಅಂಡ್ ರನ್ ಗಿರಾಕಿ ಎಂದಿದ್ದ ಸಿಎಂ ಸಿದ್ದರಾಮಯ್ಯನವರು ಈಗ ಏನು ಹೇಳುತ್ತಾರೆ?” ಎಂದು ಸವಾಲು ಹಾಕಿದ್ದಾರೆ.

“ಈಗ ಹೇಳಿ ಸಿದ್ದರಾಮಯ್ಯನವರೇ, ನೀವು, ನಿಮ್ಮ ಮಗ ಎಷ್ಟು ಪರ್ಸೆಂಟ್ ಗೆ ಹುದ್ದೆಗಳನ್ನು ಮಾರಿದ್ದೀರಿ? ಅದರಲ್ಲಿ ನಿಮಗೆಷ್ಟು? ನಿಮ್ಮ ಮಗನಿಗೆ ಎಷ್ಟು? ನಿಮ್ಮ ಕಚೇರಿಯ ಪರ್ಸಂಟೇಜ್ ಪಟಾಲಂಗೆ ಎಷ್ಟು?” ಎಂದು ಪ್ರಶ್ನಿಸಿದ್ದಾರೆ.

“ನಾನು ಹೇಳಿದ್ದೆಲ್ಲಾ ಸುಳ್ಳು ಸುಳ್ಳು ಎಂದು ಸಲೀಸಾಗಿ ಹೇಳುತ್ತೀರಲ್ಲ? ಸತ್ಯ ಎದ್ದು ಎದುರಿಗೇ ಕೂತಿದೆ. ಏನು ಹೇಳುತ್ತೀರಿ? ವಿಡಿಯೋದಲ್ಲಿರುವ ವಿಷಯ ಸುಳ್ಳೋ, ನಿಜವೋ ನಾಡಿನ ಜನ ತೀರ್ಮಾನ ಮಾಡುತ್ತಾರೆ. ಅದರ ಸಾಧಕ ಬಾಧಕ ನಾನೇ ಎದುರಿಸುತ್ತೇನೆ. ಸಾರ್ವಜನಿಕ ಸಭೆಯಲ್ಲೇ ನಿಮ್ಮ ‘ಸುಲಿಗೆಪುತ್ರ’ ಕಾಸಿಗಾಗಿ ಹುದ್ದೆ ವ್ಯವಹಾರವನ್ನು ಬಟಾಬಯಲು ಮಾಡಿ ನಿಮ್ಮ ವಸೂಲಿ ದಂಧೆಯನ್ನು ಬೆತ್ತಲು ಮಾಡಿದ್ದಾರಲ್ಲ! ಇದಕ್ಕೆ ಅಹಿಂದ ಮಹಾಪುರುಷರಾದ ತಾವೇ ರಾಜ್ಯದ ಜನರಿಗೆ ಉತ್ತರ ಕೊಡಬೇಕು” ಎಂದು ಒತ್ತಾಯಿಸಿದ್ದಾರೆ.

“ನಿಮ್ಮಿಂದ ಉತ್ತರವಷ್ಟೇ ಅಲ್ಲ, ನಿಮಗೆ ಮಾನ ಮರ್ಯಾದೆ ಬಹಳ ಜಾಸ್ತಿ ಅಲ್ಲವೇ? ನೈತಿಕ ಮೌಲ್ಯಗಳಂತೂ ದುಪಟ್ಟು ಜಾಸ್ತಿ, ಹೌದಲ್ಲವೇ? ಅದಕ್ಕೆ ಬೆಲೆ ಕೊಟ್ಟು ರಾಜೀನಾಮೆ ಕೊಡಿ. ನಿಮಗೆ ಉಳಿದಿರುವುದು ಸಿಎಂ ಕಚೇರಿ ಖಾಲಿ ಮಾಡುವುದಷ್ಟೇ. ಕೂಡಲೇ ಮುಖ್ಯಮಂತ್ರಿ ಪದವಿಗೆ ರಾಜೀನಾಮೆ ಕೊಡಿ. ಇದು ನನ್ನ ಆಗ್ರಹ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...