ಮೌಲ್ವಿ ತನ್ವೀರ್ ಹಾಶ್ಮಿ ಜೊತೆಗಿನ ವ್ಯವಹಾರದಲ್ಲಿ ಪಾಲುದಾರನಲ್ಲ, ಈ ಬಗ್ಗೆ ತನಿಖೆಯಾಗಲಿ: ಯತ್ನಾಳ್

Date:

  • 55 ವರ್ಷಗಳ ಹಿಂದೆ ನಮ್ಮ ತಂದೆ ಜೊತೆಗೆ ನಾಲ್ಕೈದು ಪಾಲುದಾರರು ಇದ್ದರು
  • ನನ್ನ ವಿರುದ್ಧ ಆರೋಪ ಮಾಡಿದವರ ಮೇಲೆ ಮಾನನಷ್ಠ ಮೊಕದ್ದಮೆ ಹೂಡುವೆ

ಐಸಿಸ್ ಉಗ್ರರ ಜೊತೆಗೆ ನಂಟು ಹೊಂದಿರುವ ಮೌಲ್ವಿ ತನ್ವೀರ್ ಹಾಶ್ಮಿ ಕುಟುಂಬದ ಜೊತೆಗೆ ನಾನು ವ್ಯಾವಹಾರಿಕ ಪಾಲುದಾರಿಕೆ ಹೊಂದಿದ್ದೇನೆ ಎಂಬ ಆರೋಪವೇ ಸುಳ್ಳು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ತಿಳಿಸಿದರು.

ಬೆಳಗಾವಿ ಸುವರ್ಣಸೌಧದಲ್ಲಿ ಶುಕ್ರವಾರ ಮಾತನಾಡಿದ ಅವರು, “‌ಮೌಲ್ವಿ ಹಾಶ್ಮಿ ಕುಟುಂಬಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಅವನೊಬ್ಬ ಭಯೋತ್ಪಾದಕ. ಅವರ ವ್ಯವಹಾರದಲ್ಲಿ ನಾನು ಪಾಲುದಾರನಲ್ಲ” ಎಂದು ಹೇಳಿದರು.

“50-60 ವರ್ಷದ ಹಿಂದಿನ ಲೀಸ್ ಜಮೀನು ಅದು. ಮುನಿಸಿಪಲ್ ಆಸ್ತಿ, ನನ್ನ ಆಸ್ತಿ ಅಲ್ಲ. ಅದರ ಮೂಲ ಮಾಲೀಕ ನಮ್ಮ ತಂದೆ. 55 ವರ್ಷಗಳ ಹಿಂದೆ ನಮ್ಮ ತಂದೆ ಜೊತೆಗೆ ನಾಲ್ಕೈದು ಪಾಲುದಾರರು ಇದ್ದರು.‌ ಅದರಲ್ಲಿ ಇಬ್ಬರು ಮುಸ್ಲಿಂ ಹಾಗೂ ಇಬ್ಬರು ಹಿಂದುಗಳಿದ್ದರು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇವೆಲ್ಲದರ ಬಗ್ಗೆ ತನಿಖೆ ಆಗಲಿ. ನಾನು ಮೌಲ್ವಿ ಹಾಶ್ಮಿ ಜೊತೆಗೆ ವ್ಯಾವಹಾರಿಕ ಪಾಲುದಾರಿಕೆ ಹೊಂದಿದ್ದೇನೆ ಎನ್ನುವವರ ವಿರುದ್ದ ಮಾನನಷ್ಠ ಮೊಕದ್ದಮೆ ಹೂಡುತ್ತೇನೆ” ಎಂದು ಎಚ್ಚರಿಸಿದರು.

”ಪೊಲೀಸ್ ಇಲಾಖೆಯವರು ಮೌಲ್ವಿ ವಿರುದ್ಧ ಗಂಭೀರ ಆರೋಪವಿದೆ, ಅವರ ಮನೆಗೆ ಹೋಗಬಾರದು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಸ್ಪಷ್ಟವಾಗಿ ಹೇಳಿದ್ದಾರೆ. ಹಾಗಿದ್ದರೂ, ಮುಸ್ಲಿಮರ ಮತಕ್ಕಾಗಿ ಸಿದ್ದರಾಮಯ್ಯ ಅವರ ಮನೆಗೆ ಹೋಗಿದ್ದಾರೆ. ಸಚಿವ ಎಂಬಿ ಪಾಟೀಲ್ ಅವರು ಒತ್ತಡ ಹಾಕಿ ಸಿದ್ದರಾಮಯ್ಯ ಅವರನ್ನು ಕರೆದುಕೊಂಡು ಹೋಗಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಐಸಿಸ್‌ ನಂಟಿನ ಕತೆ | ಯತ್ನಾಳ್‌ – ತನ್ವೀರ್ ಹಾಶ್ಮಿ ಒಂದೇ ಉದ್ಯಮದ ಪಾಲುದಾರರು

ಯತ್ನಾಳ್ ಮೇಲೆ ಆರೋಪ

ಬಸನಗೌಡ ಪಾಟೀಲ ಯತ್ನಾಳ್ ಮತ್ತು ಜಮಾತ್‌ ಎ ಅಹಲೆ ಸುನ್ನತ್‌ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷರೂ ಆದ ಮೌಲ್ವಿ ತನ್ವೀರ್‌ ಹಾಶ್ಮಿ, ಗಾಂಧಿ ಚೌಕದ ಬಳಿಯಿರುವ ‘ಟೂರಿಸ್ಟ್‌ ಹೋಟೆಲ್‌’ನ ಪಾಲುದಾರರು ಎಂಬ ಮಾಹಿತಿ ಚರ್ಚೆಗೆ ಗ್ರಾಸವಾಗಿದೆ.

ಅಲ್ಲದೆ, ವಿಜಯಪುರ–ಕಲಬುರಗಿ ರಾಷ್ಟ್ರೀಯ ಹೆದ್ದಾರಿ ಬಳಿ ಯತ್ನಾಳ್ ಹಾಗೂ ಮೌಲ್ವಿ ಹಾಶ್ಮಿ ಮನೆಗಳು‌ ಮತ್ತು ವಾಣಿಜ್ಯ ಮಳಿಗೆಗಳು ಅಕ್ಕಪಕ್ಕದಲ್ಲಿವೆ. ಇಬ್ಬರಲ್ಲಿ ವೈಮನಸ್ಸು ದಿಢೀರ್ ಮೂಡಲು ಕಾರಣ ಏನು ಎಂಬ ಬಗ್ಗೆಯೂ ಚರ್ಚೆ ನಡೆಯುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...